
ಲಕ್ನೋ: ಕುಡಿದ ಮತ್ತಿನಲ್ಲಿ ತಂದೆಯೇ ತನ್ನ 9 ವರ್ಷದ ಮಗಳ ಮೇಲೆ ಅತ್ಯಾಚಾರ ಎಸಗಿರುವ ಘಟನೆ ಉತ್ತರ ಪ್ರದೇಶದಲ್ಲಿ ನಡೆದಿದೆ.
ಫತೇಪುರ್ ಜಿಲ್ಲೆಯ ಖಾಗಾ ಕೋತ್ವಾಲಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಈ ಆಘಾತಕಾರಿ ಘಟನೆ ನಡೆದಿದ್ದು, ಕುಡಿದ ಅಮಲಿನಲ್ಲಿದ್ದ ತಂದೆ ತನ್ನ ಪಕ್ಕದಲ್ಲೇ ಮಗಲಿದ್ದ ಮಗಳ ಮೇಲೆ ಅತ್ಯಾಚಾರ ಎಸಗಿದ್ದಾನೆ. ಇದನ್ನೂ ಓದಿ: ಯುವತಿಯ ಒಂದು ದೂರಿಗೆ 1 ಸಾವಿರ ಪೊಲೀಸರು ತನಿಖೆ ಮಾಡಿದ್ರು!
ಬಾಲಕಿ ಅಳುತ್ತಿರುವ ಶಬ್ದ ಕೇಳಿ ಸ್ಥಳಕ್ಕೆ ಬಂದ ಆರೋಪಿಯ ಸಹೋದರನಿಗೆ ವಿಷಯ ಗೊತ್ತಾಗಿದೆ. ನಂತರ ಆರೋಪಿ ವಿರುದ್ಧ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ. ಮಂಗಳವಾರ ಆರೋಪಿಯನ್ನು ಬಂಧಿಸಲಾಗಿದೆ ಎಂದು ಕಾಂಗಾದ ಡೆಪ್ಯೂಟಿ ಸೂಪರಿಂಟೆಂಡೆಂಟ್ ಆಫ್ ಪೊಲೀಸ್ ಗಯಾದತ್ ಮಿಶ್ರಾ ತಿಳಿಸಿದ್ದಾರೆ.
ಸಂತ್ರಸ್ತೆಯನ್ನು ವೈದ್ಯಕೀಯ ತಪಾಸಣೆಗೆ ಒಳಪಡಿಸಲಾಗಿದೆ. ಬಾಲಕಿಯ ತಾಯಿ ಕೆಲ ವರ್ಷಗಳ ಹಿಂದೆ ಮೃತಪಟ್ಟಿದ್ದಾರೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ. ಇದನ್ನೂ ಓದಿ: ಲವ್ವರ್ ಮಾತಾಡಲು ನಿರಾಕರಿಸಿದಳೆಂದು ಆಸ್ಪತ್ರೆ ವೈದ್ಯ, ರೋಗಿಗಳಿಗೆ ಚಾಕುವಿನಿಂದ ಇರಿದ!