ಹಾಸನ: ಮಲೆನಾಡು ಭಾಗಗಳಲ್ಲಿ ಕಾಡಾನೆಗಳ ದಾಳಿಯಿಂದ ಬೇಸತ್ತಿರುವ ಸಕಲೇಶಪುರ ತಾಲೂಕಿನ ಹೊಸಗದ್ದೆ ಗ್ರಾಮದ ಬಾಲಕಿ ಸಿಎಂ ಕುಮಾರಸ್ವಾಮಿಯವರಿಗೆ ವಿಡಿಯೋ ಮೂಲಕ ಮನವಿ ಮಾಡಿಕೊಂಡಿದ್ದಾಳೆ.
ಹೌದು, ಮಲೆನಾಡು ಭಾಗಗಳಲ್ಲಿ ಕಾಡಾನೆ ಮತ್ತು ಮಾನವನ ನಡುವಿನ ಸಂಘರ್ಷ ಮುಂದುವರೆದಿದೆ. ಸಕಲೇಶಪುರ ತಾಲೂಕಿನ ಹೊಸಗದ್ದೆ ಗ್ರಾಮದ ಸುತ್ತಮುತ್ತ ಆನೆಗಳ ಹಿಂಡು ಬೀಡುಬಿಟ್ಟಿದೆ. ಅಲ್ಲದೇ ಒಂಟಿಸಲಗವೊಂದು ಹಾಡಹಗಲೇ ಭತ್ತದಗದ್ದೆಯಲ್ಲಿ ಓಡಾಟ ನಡೆಸಿದೆ.
Advertisement
Advertisement
ಕಾಡಾನೆಗಳ ದಾಳಿಯಿಂದಾಗಿ ಕಾಫಿ, ಭತ್ತ ಸೇರಿದಂತೆ ಇತರೆ ಬೆಳೆಗಳ ನಷ್ಟದೊಂದಿಗೆ ಸ್ಥಳೀಯರು ಜೀವ ಭಯದಲ್ಲಿ ಓಡಾಡುವಂತಾಗಿದೆ. ಅಲ್ಲದೇ ಇದರಿಂದ ಬೇಸತ್ತಿರುವ ಹೊಸಗದ್ದೆ ಗ್ರಾಮದ ವಿಸ್ಮಯ ಎಂಬ ಬಾಲಕಿಯು ವಿಡಿಯೋ ಮುಖಾಂತರ ಮುಖ್ಯಮಂತ್ರಿ ಕುಮಾರಸ್ವಾಮಿಯವರ ಬಳಿ ಮನವಿ ಮಾಡಿದ್ದಾಳೆ.
Advertisement
ವಿಡಿಯೋದಲ್ಲಿ ಏನಿದೆ?
ನಮಸ್ತೆ. ನನ್ನ ಹೆಸರು ವಿಸ್ಮಯ. ನಾನು ಹೊಸಗದ್ದೆ ಗ್ರಾಮದ ನಿವಾಸಿ. ಆನೆಗಳ ಹಾವಳಿ ಹೆಚ್ಚಾಗಿದ್ದು, ಇವುಗಳ ದಾಳಿಯಿಂದಾಗಿ ಸಕಲೇಶಪುರ ತಾಲೂಕಿನ ಬಹುತೇಕ ಹಳ್ಳಿಗಳಲ್ಲಿ ಬೆಳೆ ನಷ್ಟವಾಗಿದೆ. ಹೀಗಾಗಿ ಮುಖ್ಯಮಂತ್ರಿ ಕುಮಾರಸ್ವಾಮಿಗಳು ಪರಿಹಾರ ಕೊಡಬೇಕೆಂದು ಕೇಳಿಕೊಳ್ಳುತ್ತೇನೆಂದು ಹೇಳಿದ್ದಾಳೆ.
Advertisement
https://www.youtube.com/watch?v=pe1HbEhMRjI
ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv ಮತ್ತು Live ವೀಕ್ಷಿಸಲು ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv