ಬೆಂಗಳೂರು: ನಗರದಲ್ಲಿ ಅಕ್ರಮ ವಿದೇಶ ನುಸುಳುಕೋರರು ಇರೋದಾಗಿ ಖುದ್ದು ಸರ್ಕಾರ ಒಪ್ಪಿಕೊಂಡಿದೆ. ವಿಧಾನ ಪರಿಷತ್ ಪ್ರಶ್ನೋತ್ತರ ಕಲಾಪದಲ್ಲಿ ಬಿಜೆಪಿ (BJP) ಸದಸ್ಯ ಗೋಪಿನಾಥ್ ಚುಕ್ಕೆ ಗುರುತಿನ ಪ್ರಶ್ನೆಗೆ ಗೃಹ ಇಲಾಖೆ ಸಚಿವರು ಉತ್ತರ ನೀಡಿದ್ದಾರೆ.
ಅಕ್ರಮ ವಲಸಿಗ ನುಸುಳುಕೋರರು ಅಪರಾಧ ಕೃತ್ಯದಲ್ಲಿ ಭಾಗಿಯಾಗಿರೋ ಸ್ಪೋಟಕ ಮಾಹಿತಿಯನ್ನು ನೀಡಿದೆ. ಬೆಂಗಳೂರಿನಲ್ಲಿ ವೀಸಾ, ಪಾಸ್‌ಪೋರ್ಟ್ ಅವಧಿ ಇರುವ ವಿದೇಶಿಗರು 5304 ಜನ ಇದ್ದಾರೆ. ವೀಸಾ, ಪಾಸ್‌ಪೋರ್ಟ್ ಅವಧಿ ಮೀರಿದ್ದರೂ ಅಕ್ರಮವಾಗಿ 446 ವಿದೇಶಿಗರು ಇದ್ದಾರೆ. 3 ವರ್ಷಗಳಲ್ಲಿ ದೇಶದೊಳಗೆ ಅಕ್ರಮವಾಗಿ ನುಸುಳಿ ರಾಜ್ಯದಲ್ಲಿ ನೆಲೆಸಿರುವ ವಿದೇಶಿಗರ ಮಾಹಿತಿ ಇಲ್ಲ. ಆದರೆ 3 ವರ್ಷಗಳಲ್ಲಿ 911 ಜನ ಅಕ್ರಮ ವಲಸಿಗರನ್ನು ಇಲಾಖೆ ಗುರುತಿಸಿದೆ. ಇದನ್ನೂ ಓದಿ: ಇಡಿಗೆ ಶಾಕ್; ಸಂಪರ್ಕಕ್ಕೆ ಸಿಗ್ತಿಲ್ಲ ಕೆಪಿಎಸ್‌ಸಿ ಸದಸ್ಯೆ ಶಾಂತ ಹೊಸಮನಿ
ಇದರಲ್ಲಿ ಬಾಂಗ್ಲಾದೇಶ 868, ಪಾಕಿಸ್ತಾನ 20, ನೈಜೀರಿಯಾ 13, ಶ್ರೀಲಂಕಾ 8, ಮಯನ್ಮಾರ್ 01, ಉಗಾಂಡಾದವರು ಒಬ್ಬರು ಇದ್ದಾರೆ. 31 ದೇಶದ 365 ವಿದೇಶಿಗರು ಅಪರಾಧ ಕೃತ್ಯದಲ್ಲಿ ಭಾಗಿಯಾಗಿರೋ ಮಾಹಿತಿಯನ್ನು ಗೃಹ ಇಲಾಖೆ ನೀಡಿದೆ.

