ಬೆಂಗಳೂರು: ಇಂದು 9,265 ಮಂದಿಗೆ ಕೋವಿಡ್ 19 ಬಂದಿದ್ದು, 75 ಮಂದಿ ಮೃತಪಟ್ಟಿದ್ದಾರೆ. ಆಸ್ಪತ್ರೆಯಿಂದ 8,662 ಮಂದಿ ಡಿಸ್ಚಾರ್ಜ್ ಆಗಿದ್ದಾರೆ.
ಒಟ್ಟು ಸೋಂಕಿತರ ಸಂಖ್ಯೆ 7,35,371ಕ್ಕೆ ಏರಿಕೆಯಾಗಿದೆ. ಈ ಪೈಕಿ 6,11,167 ಮಂದಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದರೆ 1,13,987 ಸಕ್ರಿಯ ಪ್ರಕರಣಗಳಿವೆ.
ಇಲ್ಲಿಯವರೆಗೆ ಒಟ್ಟು 10,198 ,ಮಂದಿ ಮೃತಪಟ್ಟಿದ್ದು ಸದ್ಯ ಈಗ 925 ಮಂದಿ ಐಸಿಯುನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.
ಇಂದು 39,111 ಆಂಟಿಜನ್, 74,660 ಆರ್‌ಟಿ ಪಿಸಿಆರ್ ಸೇರಿದಂತೆ ಒಟ್ಟು 1,13,771 ಮಂದಿಗೆ ಪರೀಕ್ಷೆ ಮಾಡಲಾಗಿದೆ. ಇಲ್ಲಿಯವರೆಗೆ ಒಟ್ಟು 62,50,992 ಕೋವಿಡ್ 19 ಪರೀಕ್ಷೆ ಮಾಡಲಾಗಿದೆ.
ಬೆಂಗಳೂರು ನಗರದಲ್ಲಿ 4,574, ಮೈಸೂರು 641, ಬೆಂಗಳೂರು ಗ್ರಾಮಾಂತರ 344, ತುಮಕೂರಿನಲ್ಲಿ 341 ಮಂದಿಗೆ ಸೋಂಕು ಬಂದಿದೆ. ಬೆಂಗಳೂರು ನಗರದಲ್ಲಿ 351, ಧಾರವಾಡ 87, ಬಳ್ಳಾರಿ 75, ಚಾಮರಾಜನಗರ 40 ಮಂದಿ ಐಸಿಯುನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.