LatestMain PostNationalSports

ವಿಶ್ವ ಅಥ್ಲೆಟಿಕ್ಸ್ – ಚಿನ್ನ ಗೆದ್ದು ಭಾರತಕ್ಕೆ ಹೆಮ್ಮೆ ತಂದ 94ರ ಅಜ್ಜಿ

Advertisements

ಹೆಲ್ಸಿಂಕಿ: ಫಿನ್‍ಲ್ಯಾಂಡ್‍ನಲ್ಲಿ ನಡೆಯುತ್ತಿರುವ ವಿಶ್ವ ಮಾಸ್ಟರ್ ಅಥ್ಲೆಟಿಕ್ಸ್ ಚಾಂಪಿಯನ್‍ಶಿಪ್ 2022ರಲ್ಲಿ ಭಾಗವಹಿಸಿ 100 ಮೀಟರ್ ಓಟದ ಸ್ಫರ್ಧೆಯಲ್ಲಿ ಭಾರತವನ್ನು ಪ್ರತಿನಿಧಿಸಿದ 94ರ ಹರೆಯದ ಭಗವಾನಿ ದೇವಿ ಚಿನ್ನದ ಪದಕ ಗೆದ್ದು ದಾಖಲೆ ಬರೆದಿದ್ದಾರೆ.

ಭಗವಾನಿ ದೇವಿ 94ರ ಹರೆಯದಲ್ಲಿ 100 ಮೀಟರ್ ಓಟವನ್ನು 24.74 ಸೆಕೆಂಡ್‍ಗಳಲ್ಲಿ ಗುರಿ ಮುಟ್ಟಿ ಚಿನ್ನದ ಪದಕಕ್ಕೆ ಕೊರಳೊಡ್ಡಿದ್ದಾರೆ. ಇದಲ್ಲದೆ ಶಾಟ್‍ಪುಟ್‍ನಲ್ಲಿ ಕಂಚಿನ ಪದಕ ಪಡೆದ ಸಾಧನೆ ಮಾಡಿದ್ದಾರೆ. ಇದನ್ನೂ ಓದಿ: ವೈರಲ್ ಆಗುತ್ತಿದೆ SKY ಸಿಡಿಸಿದ ಬ್ಯಾಕ್‍ವರ್ಡ್ ಪಾಯಿಂಟ್ ಸಾಲಿಡ್ ಸಿಕ್ಸ್

ಈ ಹಿಂದೆ ಭಗವಾನಿ ದೇವಿ ಚೆನ್ನೈನಲ್ಲಿ ನಡೆದ ರಾಷ್ಟ್ರೀಯ ಮಾಸ್ಟರ್ ಅಥ್ಲೆಟಿಕ್ಸ್ ಚಾಂಪಿಯನ್‍ಶಿಪ್‍ನಲ್ಲಿ 3 ಚಿನ್ನದ ಪದಕ ಪಡೆದು ಮಿಂಚಿದ್ದರು. ಬಳಿಕ 94ರ ಹರೆಯದಲ್ಲಿ ವಿಶ್ವ ಮಾಸ್ಟರ್ ಅಥ್ಲೆಟಿಕ್ಸ್ ಚಾಂಪಿಯನ್‍ಶಿಪ್‍ನಲ್ಲಿ ಭಾರತವನ್ನು ಪ್ರತಿನಿಧಿಸುವ ಅವಕಾಶ ಪಡೆದಿದ್ದರು. ಇದೀಗ ಫಿನ್‍ಲ್ಯಾಂಡ್‍ನಲ್ಲಿ ಕೂಡ ಭಗವಾನಿ ದೇವಿ ಚಿನ್ನದ ಬೇಟೆ ಮುಂದುವರಿಸಿದ್ದಾರೆ.

ಚೆನ್ನೈನಲ್ಲಿ ನಡೆದ ರಾಷ್ಟ್ರೀಯ ಮಾಸ್ಟರ್ ಅಥ್ಲೆಟಿಕ್ಸ್ ಚಾಂಪಿಯನ್‍ಶಿಪ್‍ನಲ್ಲಿ 100 ಮೀಟರ್ ಓಟ, ಜಾವಲಿನ್ ಥ್ರೋ, ಶಾಟ್‍ಪುಟ್‍ನಲ್ಲಿ ಚಿನ್ನದ ಪದಕ ಗೆದ್ದಿದ್ದರು. ಈ ಸಾಧನೆ ಇದೀಗ ಅದೆಷ್ಟೋ ಯುವ ಕ್ರೀಡಾಪಟುಗಳಿಗೆ ಸ್ಫೂರ್ತಿಯಾಗಿದ್ದು ಭಗವಾನಿ ದೇವಿ ಸಾಧನೆಗೆ ಕೇಂದ್ರ ಕ್ರೀಡಾ ಸಚಿವಾಲಯ ಶುಭಕೋರಿದೆ. ಇದನ್ನೂ ಓದಿ: ವಿರಾಟ್ ಕೊಹ್ಲಿಯ ಜಾಹೀರಾತು ನಿಲ್ಲಿಸಿದ ವಿವೋ

Live Tv

Leave a Reply

Your email address will not be published.

Back to top button