ಬೆಂಗಳೂರು: ರಾಜ್ಯದಲ್ಲಿ ಇಂದು ಕೂಡ ಕೊರೊನಾ ಪ್ರಕರಣಗಳ ಸಂಖ್ಯೆ ಸಾವಿರದ ಗಡಿ ಸಮೀಪಿಸಿದೆ. ಯಾವುದೇ ಮರಣ ಪ್ರಕರಣ ವರದಿಯಾಗಿಲ್ಲ.
ಇಂದು 942 ಮಂದಿಗೆ ಕೊರೊನಾ ಸೋಂಕು ಕಾಣಿಸಿಕೊಂಡಿದೆ. ಬೆಂಗಳೂರು ನಗರದಲ್ಲಿ 831 ಜನರಿಗೆ ಕೊರೊನಾ ಕಾಣಿಸಿಕೊಂಡಿದೆ. ಈ ಮೂಲಕ ರಾಜ್ಯದಲ್ಲಿ 6,898 ಕೊರೊನಾ ಸಕ್ರಿಯ ಪ್ರಕರಣಗಳಿವೆ. ಇಂದು 737 ಮಂದಿ ಗುಣಮುಖರಾಗಿ ವಿವಿಧ ಆಸ್ಪತ್ರೆಗಳಿಂದ ಡಿಸ್ಚಾರ್ಜ್ ಆಗಿದ್ದಾರೆ.
22,403 ಜನರು ಕೋವಿಡ್-19 ಪರೀಕ್ಷೆ ಮಾಡಿಸಿಕೊಂಡಿದ್ದು, ಇಲ್ಲಿವರೆಗೂ 6,72,35,810 ಮಂದಿ ಕೋವಿಡ್ ಪರೀಕ್ಷೆ ಮಾಡಿಸಿಕೊಂಡಿದ್ದಾರೆ. ಕೋವಿಡ್-19 ಸೋಂಕಿನ ಖಚಿತ ಪ್ರಕರಣ ಶೇ.4.20 ಮತ್ತು ಮರಣ ಪ್ರಮಾಣ ಶೇ.0.00 ದಾಖಲಾಗಿದೆ.
ಇಂದು 737 ಮಂದಿ ಕೊರೊನಾ ಸೋಂಕಿನಿಂದ ಗುಣಮುಖರಾಗಿ ಡಿಸ್ಚಾರ್ಜ್ ಆಗಿದ್ದಾರೆ. ರಾಜ್ಯದಲ್ಲಿ ಇಂದು ಒಟ್ಟು 3,329 ಮಂದಿಗೆ ಕೊರೊನಾ ಲಸಿಕೆ ನೀಡಲಾಗಿದೆ. ಒಟ್ಟು 22,403 ಸ್ಯಾಂಪಲ್(ಆರ್‌ಟಿಪಿಸಿಆರ್ 17,210 + 5,193 ರ‍್ಯಾಪಿಡ್ ಆಂಟಿಜನ್)ಗಳನ್ನು ಕೊರೊನಾ ಪರೀಕ್ಷೆಗೆ ಒಳಪಡಿಸಲಾಗಿದೆ. ಇದನ್ನೂ ಓದಿ: ‘ಸಿಂಗ್, ಡ್ಯಾನ್ಸ್ ಆ್ಯಂಡ್ ಪ್ರೇʼ- ಶ್ರೀಲ ಪ್ರಭುಪಾದರ ಕುರಿತ ಪುಸ್ತಕ ಬಿಡುಗಡೆ ಮಾಡಿದ ಸುಧಾಮೂರ್ತಿ
ಆರೋಗ್ಯ ಇಲಾಖೆಯ ಬುಲೆಟಿನ್ ಪ್ರಕಾರ ಬಾಗಲಕೋಟೆ 1, ಬಳ್ಳಾರಿ 04, ಬೆಳಗಾವಿ 11, ಬೆಂಗಳೂರು ನಗರ 831, ಬೀದರ್ 5, ಚಿಕ್ಕಮಗಳೂರು 3, ದಕ್ಷಿಣ ಕನ್ನಡ 13, ದಾವಣಗೆರೆ 1, ಧಾರವಾಡ 4, ಹಾಸನ 02, ಕೋಲಾರ 11, ಕೊಪ್ಪಳ 1, ಮಂಡ್ಯ 04, ಮೈಸೂರು 30, ಶಿವಮೊಗ್ಗ 03, ತುಮಕೂರು 4, ಉಡುಪಿ 10, ಉತ್ತರ ಕನ್ನಡ 02 ಹಾಗೂ ಉಳಿದ ಜಿಲ್ಲೆಗಳಲ್ಲಿ ಶೂನ್ಯ ಪಾಸಿಟಿವ್ ಪ್ರಕರಣ ದಾಖಲಾಗಿವೆ. ಇದನ್ನೂ ಓದಿ: ದೇವೇಗೌಡರನ್ನು ಭೇಟಿಯಾದ ದ್ರೌಪದಿ ಮುರ್ಮು- ಎನ್‍ಡಿಎ ಅಭ್ಯರ್ಥಿಗೆ ಜೆಡಿಎಸ್ ಬೆಂಬಲ