ಬೆಂಗಳೂರು: ರಾಜ್ಯದಲ್ಲಿ ಇಂದು ಒಟ್ಟು 95 ಪಾಸಿಟಿವ್ ಕೇಸ್ ದಾಖಲಾಗಿದೆ. ಈ ಪೈಕಿ ಬೆಂಗಳೂರಿನಲ್ಲಿ 89 ಕೇಸ್ ಪತ್ತೆಯಾಗುವ ಮೂಲಕ ಕೇಸ್ಗಳ ಸಂಖ್ಯೆಯಲ್ಲಿ ಏರಿಳಿತ ಮುಂದುವರಿದಿದೆ.
ಇಂದು ಯಾವುದೇ ಮರಣ ಪ್ರಕರಣ ದಾಖಲಾಗಿಲ್ಲ. ಇಂದು 155 ಮಂದಿ ಗುಣಮುಖರಾಗಿ ವಿವಿಧ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. ರಾಜ್ಯದ ಇಂದಿನ ಪಾಸಿಟಿವಿಟಿ ರೇಟ್ ಶೇ. 0.46 ದಾಖಲಾಗಿದ್ದು, ರಾಜ್ಯದ ಒಟ್ಟು ಸಕ್ರಿಯ ಪ್ರಕರಣಗಳ ಸಂಖ್ಯೆ 1,666ಕ್ಕೆ ತಲುಪಿದೆ. ರಾಜ್ಯದಲ್ಲಿ ಈವರೆಗೆ ಒಟ್ಟು 40,064 ಮರಣ ಪ್ರಕರಣ ಪತ್ತೆಯಾಗಿದೆ. ಇದನ್ನೂ ಓದಿ: ಕೇಂದ್ರ ಕಾರಾಗೃಹದಲ್ಲಿ ವೀರ ಸಾವರ್ಕರ್ ಪುಸ್ತಕ ಇಡಲು ಹೈಕೋರ್ಟ್ ನ್ಯಾಯಮೂರ್ತಿ ಸೂಚನೆ
ಈವರೆಗೆ ರಾಜ್ಯದಲ್ಲಿ ಒಟ್ಟು 39,50,223 ಮಂದಿಗೆ ಕೊರೊನಾ ಬಂದಿದೆ. ಒಟ್ಟು 39,08,451 ಮಂದಿ ಈವರೆಗೆ ಆಸ್ಪತ್ರೆಯಿಂದ ಬಿಡುಗಡೆ ಹೊಂದಿದ್ದಾರೆ. ರಾಜ್ಯದಲ್ಲಿ ಇಂದು ಒಟ್ಟು 66,660 ಮಂದಿಗೆ ಕೊರೊನಾ ಲಸಿಕೆ ನೀಡಲಾಗಿದೆ. ಒಟ್ಟು 20,444 ಸ್ಯಾಂಪಲ್ (ಆರ್ಟಿಪಿಸಿಆರ್ 15,254 + 5,190 ರ್ಯಾಪಿಡ್ ಆಂಟಿಜನ್)ಗಳನ್ನು ಕೊರೊನಾ ಪರೀಕ್ಷೆಗೆ ಒಳಪಡಿಸಲಾಗಿದೆ. ಇದನ್ನೂ ಓದಿ: ಬಾಂಗ್ಲಾ ಯುವತಿಯ ಮೇಲೆ ಬೆಂಗ್ಳೂರಿನಲ್ಲಿ ಗ್ಯಾಂಗ್ ರೇಪ್ – 7 ಮಂದಿಗೆ ಜೀವಾವಧಿ ಶಿಕ್ಷೆ
ಆರೋಗ್ಯ ಇಲಾಖೆಯ ಬುಲೆಟಿನ್ ಪ್ರಕಾರ ಬೆಂಗಳೂರು ನಗರ 89, ದಕ್ಷಿಣ ಕನ್ನಡ 2, ಬೆಂಗಳೂರು ಗ್ರಾಮಾಂತರ, ಕಲಬುರಗಿ, ರಾಮನಗರ ಮತ್ತು ಉತ್ತರಕನ್ನಡದಲ್ಲಿ ತಲಾ ಒಂದೊಂದು ಪ್ರಕರಣ ಸೇರಿ ಒಟ್ಟು 95 ಪ್ರಕರಣ ವರದಿಯಾಗಿದೆ.