ಮಡಿಕೇರಿ: ಕೋವಿಡ್ ವ್ಯಾಕ್ಸಿನೇಷನ್ ಪಡೆದಿದ್ದರು ಕೂಡ ಜಿಲ್ಲೆಯ ಬರೋಬ್ಬರಿ 953 ಜನರಿಗೆ ಮತ್ತೆ ಕೊರೊನಾ ಕಾಣಿಸಿಕೊಂಡು ಆತಂಕ ಮೂಡಿಸಿದೆ.
ಮೊದಲ ಡೋಸ್ ವ್ಯಾಕ್ಸಿನ್ ಪಡೆದು ಹೇಗೆ ಬೇಕೋ ಹಾಗೆ ಓಡಾಡಿಕೊಂಡಿದ್ದ ಕೊಡಗಿನ 953 ಜನರಿಗೆ ಮತ್ತೆ ಮಹಾಮಾರಿ ಕೊರೊನಾ ವಕ್ಕರಿಸಿದೆ. ಸೋಂಕಿನ ಲಕ್ಷಣಗಳು ಕಂಡು ಬಂದ ಹಿನ್ನೆಲೆಯಲ್ಲಿ ಪರೀಕ್ಷಿಸಿದಾಗ 952 ಮಂದಿಯಲ್ಲಿ ಸೋಂಕು ಇರುವುದು ದೃಢಪಟ್ಟಿದೆ. ಎಲ್ಲರಿಗೂ ಆಸ್ಪತ್ರೆ ಮತ್ತು ಹೋಂ ಐಸೋಲೇಷನ್ ನಲ್ಲಿ ಚಿಕಿತ್ಸೆ ನೀಡಲಾಗಿದೆ. ಸದ್ಯ ಎಲ್ಲರೂ ಗುಣಮುಖರಾಗುತ್ತಿದ್ದಾರೆ ಎಂದು ಕೊಡಗು ಜಿಲ್ಲಾಧಿಕಾರಿ ಚಾರುಲತಾ ಸೋಮಲ್ ಹೇಳಿದ್ದಾರೆ. ಇದನ್ನೂ ಓದಿ: ಮೊದಲ ಬಾರಿಗೆ ತಂದೆ-ತಾಯಿಯನ್ನ ವಿಮಾನದಲ್ಲಿ ಕರೆದೊಯ್ದ ಚಿನ್ನದ ಹುಡುಗ
ಈಗಾಗಲೇ ಕೊರೊನಾ ಮಹಾಮರಿ ಮೂರನೇ ಅಲೆ ಹರಡುವ ಆತಂಕದಿಂದಾಗಿ ಜಿಲ್ಲೆಯ ಗಡಿಭಾಗದಲ್ಲಿ ಜಿಲ್ಲಾಡಳಿತ ಹೈ ಅಲರ್ಟ್ ಮಾಡಿದೆ. ಕೇರಳದಿಂದ ಬರುವವರಿಗೆ ಕಟ್ಟುನಿಟ್ಟಾಗಿ ಕೋವಿಡ್ ನಿಯಮಗಳನ್ನು ಪಾಲಿಸಬೇಕು ಎಂದು ಸೂಚನೆ ನೀಡಿದೆ. ಅದರೂ ಕೆಲವರಿಗೆ ಈಗಾಗಲೇ ವ್ಯಾಕ್ಸಿನೇಷನ್ ಮಾಡಿದವರಿಗೆ ಸೋಂಕು ಮತ್ತೆ ಹರಡುತ್ತಿದೆ. ಕಳೆದ ಒಂದು ವಾರದಿಂದ ಜಿಲ್ಲೆಯಲ್ಲಿ ಪಾಸಿಟಿವ್ ಪ್ರಮಾಣ 0.5% ಒಳಗೆ ಇತ್ತು ಅದರೆ ಇಂದು ಮತ್ತೆ ಜಿಲ್ಲೆಯಲ್ಲಿ ಕೊರೊನಾ ಸೋಂಕು ಸ್ಫೋಟಗೊಂಡಿದ್ದು ಇಂದಿನ ಪಾಸಿಟಿವ್ ದರ 2.84% ಬಂದಿದೆ. ಹೀಗಾಗಿ ಜಿಲ್ಲೆಯ ಜನರಲ್ಲಿ ಮತ್ತೆ ಆತಂಕ ಮನೆಮಾಡಿದೆ.
ನಾವು ಲಸಿಕೆ ಪಡೆದಿದ್ದೇವೆ, ಏನು ಆಗಲ್ಲ ಎಂದು ಬೇಕಾಬಿಟ್ಟಿ, ನಿರ್ಲಕ್ಷ ಮಾಡಿ ಕೋವಿಡ್ ನಿಯಮ ಉಲ್ಲಂಘಿಸುವವರಿಗೆ ಜಿಲ್ಲೆಯ ಕೊರೊನಾ ಸ್ಫೋಟ ಮತ್ತಷ್ಟು ಭಯಭೀತರಾಗುವಂತೆ ಮಾಡಿದೆ. ಇದನ್ನೂ ಓದಿ: ಗಣೇಶ ವಿಸರ್ಜನೆ ವೇಳೆ ಪೊಲೀಸರನ್ನೇ ತಳ್ಳಾಡಿದ ಯುವಕರು