ಬೆಂಗಳೂರು: ಇಂದು 9,543 ಮಂದಿಗೆ ಕೊರೊನಾ ಸೋಂಕು ಬಂದಿದ್ದು, ಆಸ್ಪತ್ರೆಯಿಂದ 6,522 ಮಂದಿ ಡಿಸ್ಚಾರ್ಜ್ ಆಗಿದ್ದಾರೆ. ಇಂದು 79 ಮಂದಿ ಮೃತಪಟ್ಟಿದ್ದಾರೆ.
ಒಟ್ಟು ಸೋಂಕಿತರ ಸಂಖ್ಯೆ 5,75,566 ಏರಿಕೆಯಾಗಿದೆ. ಈ ಪೈಕಿ 4,62,241 ಮಂದಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದು 1,04,724 ಸಕ್ರಿಯ ಪ್ರಕರಣಗಳಿವೆ.
ಒಟ್ಟು 8,582 ಮಂದಿ ಮೃತಪಟ್ಟಿದ್ದು, 835 ಮಂದಿ ಐಸಿಯುನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಇಂದು ಒಟ್ಟು 67,857 ಮಂದಿಗೆ ಕೊರೊನಾ ಪರೀಕ್ಷೆ ನಡೆಸಿದ್ದು, ಇಲ್ಲಿಯವರೆಗೆ 45,86,780 ಮಂದಿಗೆ ಪರೀಕ್ಷೆ ನಡೆಸಲಾಗಿದೆ.
ಎಂದಿನಂತೆ ಬೆಂಗಳೂರು ನಗರದಲ್ಲಿ 4,217 ಮಂದಿಗೆ ಸೋಂಕು ಬಂದಿದ್ದರೆ 3,306 ಮಂದಿ ಬಿಡುಗಡೆಯಾಗಿದ್ದಾರೆ. ಮೈಸೂರಿನಲ್ಲಿ 952, ದಕ್ಷಿಣ ಕನ್ನಡ 460, ಹಾಸನ 408 ಮಂದಿಗೆ ಸೋಂಕು ಬಂದಿದೆ.
ಐಸಿಯುನಲ್ಲಿ ಒಟ್ಟು 835 ಮಂದಿ ಚಿಕಿತ್ಸೆ ಪಡೆಯುತ್ತಿದ್ದು, ಬೆಂಗಳೂರು ನಗರದಲ್ಲಿ 264, ಧಾರವಾಡ 93, ಹಾಸನ 62 ಮಂದಿ ಐಸಿಯುನಲ್ಲಿದ್ದಾರೆ.