ಭೂಪಾಲ್: ಜಾತ್ರೆಯೊಂದರಲ್ಲಿ ಪಾನಿಪುರಿ ತಿಂದ 97 ಮಕ್ಕಳು ಅಸ್ವಸ್ಥಗೊಂಡಿರುವ ಘಟನೆ ಮಧ್ಯಪ್ರದೇಶದ ಮಂಡ್ಲಾ ಜಿಲ್ಲೆಯಲ್ಲಿ ನಡೆದಿದೆ.
ಜಿಲ್ಲಾ ಕೇಂದ್ರದಿಂದ 38 ಕಿ.ಮೀ ದೂರದಲ್ಲಿರುವ ಬುಡಕಟ್ಟು ಜನಾಂಗದ ಪ್ರಾಬಲ್ಯವಿರುವ ಸಿಂಗರಾಪುರ ಪ್ರದೇಶದಲ್ಲಿ ಆಯೋಜಿಸಿದ್ದ ಜಾತ್ರೆಯಲ್ಲಿ ಈ ಘಟನೆ ನಡೆದಿದೆ. ಅಸ್ವಸ್ಥಗೊಂಡವರೆಲ್ಲರೂ ಒಂದೇ ಅಂಗಡಿಯಲ್ಲಿ ಪಾನಿಪುರಿಯನ್ನು ತಿಂದಿದ್ದಾರೆ. ಅವರೆಲ್ಲರೂ ಸಮೀಪದ ವಿವಿಧ ಗ್ರಾಮಗಳಿಂದ ಖರೀದಿಗೆಂದು ಆಗಮಿಸಿದ್ದರು.
Advertisement
Advertisement
ಜಿಲ್ಲಾ ಆಸ್ಪತ್ರೆಯ ಸಿವಿಲ್ ಸರ್ಜನ್ ಡಾ.ಕೆ.ಆರ್.ಶಾಕ್ಯಾ ಮಾತನಾಡಿ, ಪಾನಿಪುರಿ ತಿಂದ ಮಕ್ಕಳಿಗೆಲ್ಲರಿಗೂ ವಾಂತಿ, ಹೊಟ್ಟೆನೋವು ಕಾಣಿಸಿಕೊಂಡಿದೆ ಎಂದು ತಿಳಿಸಿದ್ದಾರೆ. ಇದನ್ನೂ ಓದಿ: ಬಸ್- ಟ್ರಕ್ ಮುಖಾಮುಖಿ ಡಿಕ್ಕಿ- ಕರ್ನಾಟಕದಿಂದ ಅಯೋಧ್ಯೆಗೆ ತೆರಳುತ್ತಿದ್ದ 7 ಜನರ ದುರ್ಮರಣ
Advertisement
Advertisement
ಅಸ್ವಸ್ತಗೊಂಡ 97 ಮಕ್ಕಳನ್ನು ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿದ್ದು, ಅವರು ಅಪಾಯದಿಂದ ಪಾರಾಗಿದ್ದಾರೆ. ಈ ಬಗ್ಗೆ ಸ್ಥಳೀಯ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದ್ದು, ಘಟನೆಗೆ ಸಂಬಂಧಿಸಿ ಪಾನಿಪುರಿ ಮಾರಾಟಗಾರನನ್ನು ಬಂಧಿಸಲಾಗಿದೆ ಮತ್ತು ತಿಂಡಿಯ ಮಾದರಿಗಳನ್ನು ಪರೀಕ್ಷೆಗೆ ಕಳುಹಿಸಲಾಗಿದೆ. ಇದನ್ನೂ ಓದಿ: ಪ್ರತಿದಿನ ಸಾಯೋದಕ್ಕಿಂತ ಒಂದೇ ದಿನ ಸಾಯೋದು ಒಳಿತು – ಮೂವರು ಸಹೋದರಿಯರು ಮಕ್ಕಳೊಂದಿಗೆ ಆತ್ಮಹತ್ಯೆ