ಬೆಂಗಳೂರು: ರಾಜ್ಯದಲ್ಲಿ ಇಂದು ಮತ್ತೆ 973 ಕೊರೊನಾ ಪ್ರಕರಣಗಳು ಪತ್ತೆಯಾಗಿದ್ದು, 1,217 ಜನರು ಗುಣಮುಖರಾಗಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ.
ಈ ವೆರೆಗೆ ಒಟ್ಟು ಕೊರೊನಾ ಸೋಂಕಿತರ ಸಂಖ್ಯೆ 9,18,544ಕ್ಕೆ ಏರಿಕೆಯಾಗಿದೆ. ಇಂದು ಕೊರೊನಾ ಸೋಂಕಿನಿಂದ 7 ಜನ ಮೃತಪಟ್ಟಿದ್ದು, ಈ ಮೂಲಕ ಒಟ್ಟು 12,081 ಜನ ಕೊರೊನಾಗೆ ಬಲಿಯಾದಂತಾಗಿದೆ. ರಾಜ್ಯದಲ್ಲಿ 11,610 ಸಕ್ರಿಯ ಪ್ರಕರಣಗಳಿವೆ. ರಾಜ್ಯದ ವಿವಿಧ ಆಸ್ಪತ್ರೆಗಳ ಐಸಿಯುನಲ್ಲಿ 202 ಸೋಂಕಿತರು ಚಿಕಿತ್ಸೆ ಪಡೆದುಕೊಳ್ಳುತ್ತಿದ್ದಾರೆ.
Advertisement
Advertisement
ಕೋವಿಡ್-19 ಸೋಂಕಿನ ಖಚಿತ ಪ್ರಕರಣಗಳ ಪ್ರಮಾಣ ಶೇ.0.93 ಮತ್ತು ಮರಣ ಪ್ರಮಾಣ ಶೇ.0.71ರಷ್ಟಿದೆ. ಇಂದು ಯುಕೆಯಿಂದ ಬಂದ 62 ಜನರನ್ನು ಆರ್.ಟಿ.-ಪಿಸಿಆರ್ ಮತ್ತು ಇತರೆ ಪರೀಕ್ಷೆಗೆ ಒಳಪಡಿಸಲಾಗಿದ್ದು, ಇಬ್ಬರ ವರದಿ ಪಾಸಿಟಿವ್ ಬಂದಿದೆ. 60 ಜನರ ವರದಿ ನೆಗೆಟಿವ್ ಬಂದಿದೆ. ಯುಕೆಯಿಂದ ಬಂದ 31 ಜನರು ಕೊರೊನಾ ಸೋಂಕಿತರಾಗಿದ್ದಾರೆ.
Advertisement
Advertisement
ಆರೋಗ್ಯ ಇಲಾಖೆಯ ಬುಲೆಟಿನ್ ಪ್ರಕಾರ, ಬಾಗಲಕೋಟೆ 8, ಬಳ್ಳಾರಿ 13, ಬೆಳಗಾವಿ 25, ಬೆಂಗಳೂರು ಗ್ರಾಮಾಂತರ 8, ಬೆಂಗಳೂರು ನಗರ 554, ಬೀದರ್ 7, ಚಾಮರಾಜನಗರ 12, ಚಿಕ್ಕಬಳ್ಳಾಪುರ 31, ಚಿಕ್ಕಮಗಳೂರು 8, ಚಿತ್ರದುರ್ಗ 19, ದಕ್ಷಿಣ ಕನ್ನಡ 31, ದಾವಣಗೆರೆ 8, ಧಾರವಾಡ 19, ಗದಗ 1, ಹಾಸನ 31, ಹಾವೇರಿ 6, ಕಲಬುರಗಿ 17, ಕೊಡಗು 18, ಕೋಲಾರ 7, ಕೊಪ್ಪಳ 2, ಮಂಡ್ಯ 18, ಮೈಸೂರು 34, ರಾಯಚೂರು 3, ರಾಮನಗರ 4, ಶಿವಮೊಗ್ಗ 20, ತುಮಕೂರು 28, ಉಡುಪಿ 11, ಉತ್ತರ ಕನ್ನಡ 7, ವಿಜಯಪುರ 19 ಮತ್ತು ಯಾದಗಿರಿಯಲ್ಲಿ 4 ಹೊಸ ಕೊರೊನಾ ಪ್ರಕರಣಗಳು ವರದಿಯಾಗಿವೆ.