ಬೆಂಗಳೂರು: ಕೊರೊನಾ ಅಬ್ಬರ ಇಳಿಕೆಯಾಗಿದ್ದು, ಇಂದು ರಾಜ್ಯದಲ್ಲಿ ಸಾವಿರಕ್ಕೂ ಕಡಿಮೆ ಪ್ರಕರಣಗಳು ದಾಖಲಾಗಿದೆ. ರಾಜ್ಯದಲ್ಲಿ 973 ಜನಕ್ಕೆ ಸೋಂಕು ತಗುಲಿದ್ದು, 15 ಮಂದಿ ಸಾವನ್ನಪ್ಪಿದ್ದಾರೆ.
ಸದ್ಯ ರಾಜ್ಯದಲ್ಲಿ 18,392 ಸಕ್ರಿಯ ಪ್ರಕರಣಗಳಿದ್ದು, ಇಂದು 1,324 ಜನರು ಗುಣಮುಖರಾಗಿ ಡಿಸ್ಚಾರ್ಜ್ ಆಗಿದ್ದಾರೆ. ಕೋವಿಡ್-19 ಸೋಂಕು ಹರಡುವಿಕೆ ಶೇಕಡಾವಾರು ಪ್ರಮಾಣ ಶೇ.0.64 ಮತ್ತು ಮರಣ ಪ್ರಮಾಣ ಶೇ.1.54ಕ್ಕೆ ಇಳಿಕೆಯಾಗಿದೆ. ರಾಜ್ಯದಲ್ಲಿ ಇದುವರೆಗೂ 29,48,228 ಕೊರೊನಾ ಪ್ರಕರಣಗಳು ವರದಿಯಾಗಿದ್ದು, ಸಾವನ್ನಪ್ಪಿದವರ ಸಂಖ್ಯೆ 37,293ಕ್ಕೆ ಏರಿಕೆಯಾಗಿದೆ.
ಇಂದು ಒಟ್ಟು 1,51,219 ಮಾದರಿಗಳನ್ನು ಕೊರೊನಾ ಪರೀಕ್ಷೆಗೆ ಒಳಪಡಿಸಲಾಗಿತ್ತು. ಈ ಸಂಖ್ಯೆ ಕಳೆದ ಎರಡು ದಿನಗಳಿಗಿಂತ ಕಡಿಮೆಯಾಗಿದೆ. ಇತ್ತ ಮಹಾನಗರಿ ಬೆಂಗಳೂರು ಜನರು ನಿಟ್ಟುಸಿರು ಬಿಡುವ ಪರಿಸ್ಥಿತಿ ಬಂದಿದ್ದು, ಇಂದು 264 ಜನರಿಗೆ ಸೋಂಕು ತಗುಲಿದೆ. ಸದ್ಯ ಬೆಂಗಳೂರಿನಲ್ಲಿ 7,343 ಸಕ್ರಿಯ ಪ್ರಕರಣಗಳಿವೆ.
ಆರೋಗ್ಯ ಇಲಾಖೆಯ ಬುಲೆಟಿನ್ ಪ್ರಕಾರ, ಬಾಗಲಕೋಟೆ 0, ಬಳ್ಳಾರಿ 4, ಬೆಳಗಾವಿ 18, ಬೆಂಗಳೂರು ಗ್ರಾಮಾಂತರ 6, ಬೆಂಗಳೂರು ನಗರ 264, ಬೀದರ್ 0, ಚಾಮರಾಜನಗರ 9, ಚಿಕ್ಕಬಳ್ಳಾಪುರ 1, ಚಿಕ್ಕಮಗಳೂರು 14, ಚಿತ್ರದುರ್ಗ 10, ದಕ್ಷಿಣ ಕನ್ನಡ 193, ದಾವಣಗೆರೆ 5, ಧಾರವಾಡ 6, ಗದಗ 1, ಹಾಸನ 74, ಹಾವೇರಿ 1, ಕಲಬುರಗಿ 1, ಕೊಡಗು 42, ಕೋಲಾರ 38, ಕೊಪ್ಪಳ 2, ಮಂಡ್ಯ 10, ಮೈಸೂರು 73, ರಾಯಚೂರು 0, ರಾಮನಗರ 4, ಶಿವಮೊಗ್ಗ 38, ತುಮಕೂರು 21, ಉಡುಪಿ 98, ಉತ್ತರ ಕನ್ನಡ 39, ವಿಜಯಪುರ 0 ಮತ್ತು ಯಾದಗಿರಿಯಲ್ಲಿ 1 ಹೊಸ ಕೊರೊನಾ ಪ್ರಕರಣಗಳು ವರದಿಯಾಗಿವೆ. ಇದನ್ನೂ ಓದಿ: ಸೆ. 6ರಿಂದ 6 ರಿಂದ 8ನೇ ತರಗತಿ ಶಾಲೆ ಆರಂಭ – ದಕ್ಷಿಣ ಕನ್ನಡ, ಕೊಡಗಿನಲ್ಲಿ ನಿರ್ಬಂಧ ಮುಂದುವರಿಕೆ