ಬೆಂಗಳೂರು: ಕರ್ನಾಟಕ ವಿಧಾನಸಭೆ ಚುನಾವಣೆಗೆ ಮೂರು ದಿನ ಬಾಕಿ ಇರುವಂತೆ ರಾಜ್ಯ ರಾಜಕಾರಣ ಹೊಸ ಆಯಾಮಕ್ಕೆ ತಿರುಗಿದೆ.
ಬೆಂಗಳೂರಿನ ಜಾಲಹಳ್ಳಿಯ ಅಪಾರ್ಟ್ ಮೆಂಟ್‍ನಲ್ಲಿ ಸಿಕ್ಕ ರಾಶಿರಾಶಿ ವೋಟರ್ ಐಡಿ, ಮಿಡ್‍ನೈಟ್ ರಾಜಕಾರಣಕ್ಕೆ ಸಾಕ್ಷಿಯಾಯ್ತು. ಮಂಗಳವಾರ ಸಂಜೆ 4 ಗಂಟೆ ಸುಮಾರಿಗೆ ಎಸ್‍ಎಲ್ ವಿ ಅಪಾರ್ಟ್ ಮೆಂಟ್‍ಗೆ ಲಗ್ಗೆ ಇಟ್ಟಿದ್ದ ಚುನಾವಣಾ ಆಯೋಗದ ಅಧಿಕಾರಿಗಳಿಗೆ ಬರೋಬ್ಬರಿ 9,746 ವೋಟರ್ ಐಡಿ ಪತ್ತೆಯಾಗಿತ್ತು.
Advertisement
Advertisement
ಈ ವಿಷಯ ತಿಳಿಯುತ್ತಿದ್ದಂತೆ ಅಪಾರ್ಟ್ ಮೆಂಟ್ ಬಳಿ ಜಮಾಯಿಸಿದ ಬಿಜೆಪಿ-ಜೆಡಿಎಸ್ ಕಾರ್ಯಕರ್ತರು, ಹಣದ ಆಮಿಷವೊಡ್ಡಿ ಮತದಾರರಿಂದ ವೋಟರ್ ಐಡಿಗಳನ್ನು ಸಂಗ್ರಹ ಮಾಡಿಕೊಳ್ಳಲಾಗ್ತಿದೆ ಅಂತ ಆರೋಪಿಸಿ ಪ್ರತಿಭಟನೆ ನಡೆಸಿದ್ರು. ಬಳಿಕ ಜೆಡಿಎಸ್ ವರಿಷ್ಠ ಹೆಚ್.ಡಿ. ದೇವೇಗೌಡ, ಕೇಂದ್ರ ಸಚಿವ ಡಿ.ವಿ ಸದಾನಂದಗೌಡ ಕೂಡ ಭೇಟಿ ನೀಡಿದ್ರು. ಈ ಬೆನ್ನಲ್ಲೇ ಚುನಾವಣಾ ಆಯೋಗ ರಾತ್ರಿ 11.30ರ ಸುಮಾರಿಗೆ ತುರ್ತು ಸುದ್ದಿಗೋಷ್ಠಿ ನಡೆಸಿ ಪ್ರಕರಣದ ಬಗ್ಗೆ ತನಿಖೆ ನಡೆಸಿ ತಪ್ಪಿತಸ್ಥರ ವಿರುದ್ಧ ಕ್ರಮಕೈಗೊಳ್ಳೋದಾಗಿ ಮುಖ್ಯ ಚುನಾವಣಾಧಿಕಾರಿ ಸಂಜೀವ್ ಕುಮಾರ್ ಹೇಳಿದ್ರು.
Advertisement
ಅಪಾರ್ಟ್‍ಮೆಂಟ್‍ನಲ್ಲಿ ಸಿಕ್ಕಿದ್ದೇನು..?
* 9,746 ವೋಟರ್ ಐಡಿ
* 5 ಲ್ಯಾಪ್‍ಟಾಪ್
* 2 ಸ್ಟೀಲ್ ಟ್ರಂಕ್
* ವೋಟರ್ ಐಡಿ ಹೆಸರು ಸೇರ್ಪಡೆ ಮಾಡಿಕೊಳ್ಳು ಫಾರ್ಮ್ 6 ಅರ್ಜಿ
Advertisement