ಬೆಂಗಳೂರು: ರಾಜ್ಯಾದ್ಯಂತ ಕೋವಿಡ್ ಪ್ರಕರಣಗಳ ಸಂಖ್ಯೆ ಏರಿಳಿತ ಕಾಣುತ್ತಿದೆ. ನಿನ್ನೆ ಬೆಂಗಳೂರಿನಲ್ಲಿ ಕೋವಿಡ್ ಕೇಸ್ಗಳ ಸಂಖ್ಯೆ ಸಾವಿರದ ಗಡಿ ದಾಟಿದ್ದು, ಇಂದು ರಾಜ್ಯದಲ್ಲಿ ಒಟ್ಟು 975 ಪ್ರಕರಣಗಳು ದಾಖಲಾಗಿವೆ. ಒಂದು ಮರಣ ಪ್ರಕರಣ ದಾಖಲಾಗಿದೆ.
Advertisement
ಇಂದು ಬೆಂಗಳೂರಿನಲ್ಲಿ 871 ಪ್ರಕರಣ ಪತ್ತೆಯಾಗಿದ್ದು, ಸಕ್ರಿಯ ಪ್ರಕರಣಗಳ ಸಂಖ್ಯೆ 6,075 ಇದೆ. ಇಡೀ ರಾಜ್ಯದಲ್ಲಿ 975 ಪ್ರಕರಣಗಳು ವರದಿಯಾಗಿದ್ದು, ಒಟ್ಟು ಸಕ್ರಿಯ ಪ್ರಕರಣಗಳ ಸಂಖ್ಯೆ 6,440 ಇದೆ. ರಾಜ್ಯದ ಇಂದಿನ ಪಾಸಿಟಿವಿಟಿ ರೇಟ್ ಶೇ.3.74 ಇದೆ. ಶಿವಮೊಗ್ಗದಲ್ಲಿ 1 ಮರಣ ಪ್ರಕರಣ ವರದಿಯಾಗಿದೆ. ಇದನ್ನೂ ಓದಿ: 8 ವರ್ಷಗಳಲ್ಲಿ ದೇಶದ ಒಟ್ಟು ಸಾಲ 102 ಲಕ್ಷ ಕೋಟಿ ರೂ. ಪ್ರತಿಯೊಬ್ಬರ ತಲೆ ಮೇಲೆ 1.70 ಲಕ್ಷ ರೂ. ಸಾಲ: ಸಿದ್ದು
Advertisement
Advertisement
ಇಂದು 668 ಮಂದಿ ಗುಣಮುಖರಾಗಿ ವಿವಿಧ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. ರಾಜ್ಯದಲ್ಲಿ ಈವರೆಗೆ ಒಟ್ಟು 40,077 ಮರಣ ಪ್ರಕರಣ ಪತ್ತೆಯಾಗಿದೆ. ಈವರೆಗೆ ರಾಜ್ಯದಲ್ಲಿ ಒಟ್ಟು 39,71,459 ಮಂದಿಗೆ ಕೊರೊನಾ ಬಂದಿದೆ. ಒಟ್ಟು 39,24,900 ಮಂದಿ ಈವರೆಗೆ ಆಸ್ಪತ್ರೆಯಿಂದ ಬಿಡುಗಡೆ ಹೊಂದಿದ್ದಾರೆ.
Advertisement
ರಾಜ್ಯದಲ್ಲಿ ಇಂದು ಒಟ್ಟು 41,887 ಮಂದಿಗೆ ಕೊರೊನಾ ಲಸಿಕೆ ನೀಡಲಾಗಿದೆ. ಒಟ್ಟು 26,061 ಸ್ಯಾಂಪಲ್ (ಆರ್ಟಿ-ಪಿಸಿಆರ್ 19,158 + 6,903 ರ್ಯಾಪಿಡ್ ಆಂಟಿಜನ್)ಗಳನ್ನು ಕೊರೊನಾ ಪರೀಕ್ಷೆಗೆ ಒಳಪಡಿಸಲಾಗಿದೆ. ಇದನ್ನೂ ಓದಿ: ನಾನು ಚೇತರಿಸಿಕೊಂಡಿದ್ದೇನೆ: ಸರ್ಜರಿ ಬಳಿಕ ಸೋಷಿಯಲ್ ಮೀಡಿಯಾದಲ್ಲಿ ಕಾಣಿಸಿಕೊಂಡ ದಿಗಂತ್
ಆರೋಗ್ಯ ಇಲಾಖೆಯ ಬುಲೆಟಿನ್ ಪ್ರಕಾರ ಬಾಗಲಕೋಟೆ 2, ಬಳ್ಳಾರಿ 1, ಬೆಳಗಾವಿ 3, ಬೆಂಗಳೂರು ಗ್ರಾಮಾಂತರ 5, ಬೆಂಗಳೂರು ನಗರ 871, ಬೀದರ್ 2, ಚಾಮರಾಜನಗರ 0, ಚಿಕ್ಕಬಳ್ಳಾಪುರ 2, ಚಿಕ್ಕಮಗಳೂರು 0, ಚಿತ್ರದುರ್ಗ 0, ದಕ್ಷಿಣ ಕನ್ನಡ 14, ದಾವಣಗೆರೆ 0, ಧಾರವಾಡ 9, ಗದಗ 0, ಹಾಸನ 2, ಹಾವೇರಿ 0, ಕಲಬುರಗಿ 3, ಕೊಡಗು 0, ಕೋಲಾರ 9, ಕೊಪ್ಪಳ 0, ಮಂಡ್ಯ 1, ಮೈಸೂರು 22, ರಾಯಚೂರು 2, ರಾಮನಗರ 4, ಶಿವಮೊಗ್ಗ 6, ತುಮಕೂರು 5, ಉಡುಪಿ 6, ಉತ್ತರ ಕನ್ನಡ 6, ವಿಜಯಪುರ ಮತ್ತು ಯಾದಗಿರಿಯಲ್ಲಿ 0 ಪಾಸಿಟಿವ್ ಪ್ರಕರಣ ದಾಖಲಾಗಿದೆ.
Live Tv