ಬೆಂಗಳೂರು: ರಾಜ್ಯದಲ್ಲಿ ಕೊರೊನಾ ಪಾಸಿಟಿವ್ ಕೇಸ್ಗಳ ಸಂಖ್ಯೆ ಇಂದು ಎರಡಂಕಿಗೆ ಇಳಿಮುಖಗೊಂಡಿದೆ. ಒಟ್ಟು 98 ಪಾಸಿಟಿವ್ ಪ್ರಕರಣ ಇಂದು ದಾಖಲಾಗಿದೆ.
ನಿನ್ನೆ ರಾಜ್ಯದಲ್ಲಿ 126 ಕೇಸ್ ದಾಖಲಾಗಿತ್ತು. ಇಂದು 98 ಕೇಸ್ ದಾಖಲಾಗುವ ಮೂಲಕ ನಿನ್ನೆಗಿಂತ ಇಂದು 28 ಕಡಿಮೆ ಪ್ರಕರಣ ದಾಖಲಾಗಿದೆ. ಬೆಂಗಳೂರು ನಗರದಲ್ಲಿ ಇಂದು 89 ಪಾಸಿಟಿವ್ ಕೇಸ್ಗಳು ವರದಿಯಾಗಿದ್ದು, ಇಂದು 149 ಮಂದಿ ಗುಣಮುಖರಾಗಿ ವಿವಿಧ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. ರಾಜ್ಯದ ಇಂದಿನ ಪಾಸಿಟಿವಿಟಿ ರೇಟ್ ಶೇ. 0.83 ದಾಖಲಾಗಿದ್ದು, ರಾಜ್ಯದ ಒಟ್ಟು ಸಕ್ರಿಯ ಪ್ರಕರಣಗಳ ಸಂಖ್ಯೆ 1,840ಕ್ಕೆ ತಲುಪಿದೆ. ಇಂದು ಕೂಡ ಶೂನ್ಯ ಮರಣ ಮುಂದುವರಿದಿದೆ. ರಾಜ್ಯದಲ್ಲಿ ಈವರೆಗೆ ಒಟ್ಟು 40,063 ಮರಣ ಪ್ರಕರಣ ಪತ್ತೆಯಾಗಿ ಕೆಲದಿನಗಳಿಂದ ಸ್ಥಿರವಾಗಿದೆ. ಇದನ್ನೂ ಓದಿ: ಕೋವಿಡ್-19 ಲಸಿಕೆ ಕಾರ್ಬೆವಾಕ್ಸ್ ಬೆಲೆ 250 ರೂ.ಗೆ ಇಳಿಕೆ
ಈವರೆಗೆ ರಾಜ್ಯದಲ್ಲಿ ಒಟ್ಟು 39,49,773 ಮಂದಿಗೆ ಕೊರೊನಾ ಬಂದಿದೆ. ಒಟ್ಟು 39,07,828 ಮಂದಿ ಈವರೆಗೆ ಆಸ್ಪತ್ರೆಯಿಂದ ಬಿಡುಗಡೆ ಹೊಂದಿದ್ದಾರೆ. ರಾಜ್ಯದಲ್ಲಿ ಇಂದು ಒಟ್ಟು 51,853 ಮಂದಿಗೆ ಕೊರೊನಾ ಲಸಿಕೆ ನೀಡಲಾಗಿದೆ. ಒಟ್ಟು 11,704 ಸ್ಯಾಂಪಲ್ (ಆರ್ಟಿಪಿಸಿಆರ್ 9,441 + 2,263 ರ್ಯಾಪಿಡ್ ಆಂಟಿಜನ್)ಗಳನ್ನು ಕೊರೊನಾ ಪರೀಕ್ಷೆಗೆ ಒಳಪಡಿಸಲಾಗಿದೆ. ಇದನ್ನೂ ಓದಿ: ಚಿಕ್ಕಬಳ್ಳಾಪುರದಲ್ಲಿ ಪದೇ ಪದೇ ಭೂಕಂಪನ – ಬಾಗೇಪಲ್ಲಿ ತಾಲೂಕಿನ ಹಲವೆಡೆ ಭೀಕರ ಶಬ್ದ
ಆರೋಗ್ಯ ಇಲಾಖೆಯ ಬುಲೆಟಿನ್ ಪ್ರಕಾರ ಬೆಂಗಳೂರು ನಗರ 89, ಮೈಸೂರು 3, ಬಳ್ಳಾರಿ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ದಕ್ಷಿಣ ಕನ್ನಡ, ತುಮಕೂರು ಮತ್ತು ಉಡುಪಿಯಲ್ಲಿ ತಲಾ ಒಂದೊಂದು ಪ್ರಕರಣ ಸೇರಿ ಒಟ್ಟು 98 ಪ್ರಕರಣ ವರದಿಯಾಗಿದೆ.