9823.21 ಕೋಟಿ ರೂ. ಮೊತ್ತದ ಬಂಡವಾಳ ಹೂಡಿಕೆ ಯೋಜನೆಗಳಿಗೆ ಅನುಮೋದನೆ – ರಾಜ್ಯದ 5,605 ಜನರಿಗೆ ಉದ್ಯೋಗಾವಕಾಶ

Public TV
1 Min Read
Siddaramaiah 2 2

ಬೆಂಗಳೂರು: ರಾಜ್ಯ ಉನ್ನತ ಮಟ್ಟದ ಒಪ್ಪಿಗೆ ನೀಡಿಕೆ ಸಮಿತಿಯ 64 ನೇ ಸಭೆಯ ಅಧ್ಯಕ್ಷತೆ ವಹಿಸಿದ್ದ ಮುಖ್ಯಮಂತ್ರಿ ಸಿದ್ದರಾಮಯ್ಯ (Siddaramaiah)ಅವರು ಒಟ್ಟು 9823.31 ಕೋಟಿ ರೂ. ಮೊತ್ತದ ಬಂಡವಾಳ ಹೂಡಿಕೆ (Capital Investment) ಯೋಜನೆಗಳಿಗೆ ಅನುಮೋದನೆ ನೀಡಿದ್ದಾರೆ. ಇದರಿಂದಾಗಿ ರಾಜ್ಯದ ಸುಮಾರು 5,605 ಜನರಿಗೆ ಉದ್ಯೋಗ ಲಭ್ಯವಾಗಲಿದೆ.

ಸಭೆಯಲ್ಲಿ ಮೂರು ಹೊಸ/ ವಿಸ್ತರಣಾ ಬಂಡವಾಳ ಹೂಡಿಕೆ ಪ್ರಸ್ತಾವನೆಗಳು ಹಾಗೂ ಆರು ಹೆಚ್ಚುವರಿ ಬಂಡವಾಳ ಹೂಡಿಕೆ ಪ್ರಸ್ತಾವನೆಗಳು ಸೇರಿದಂತೆ ಒಟ್ಟು 9 ಯೋಜನಾ ಪ್ರಸ್ತಾವನೆಗಳಿಗೆ ಅನುಮೋದನೆ ನೀಡಲಾಗಿದೆ. ಮೆ.ಡಿ.ಎನ್ ಸಲ್ಯೂಷನ್ಸ್ ಇಂಡಿಯಾ ಪ್ರೈ.ಲಿ ಸಂಸ್ಥೆಯ 998 ಕೋಟಿ ರೂ.ಗಳ ಹೊಸ ಬಂಡವಾಳ ಹೂಡಿಕೆಯ ಯೋಜನೆಯಿಂದ 467 ಉದ್ಯೋಗ , ಮೆ. ಸೈಲೆಕ್ಟ್ರಿಕ್ ಸೆಮಿಕಂಡಕ್ಟರ್ ಮ್ಯಾನುಫ್ಯಾಕ್ಷರಿಂಗ್ ಪ್ರೈ.ಲಿ ಸಂಸ್ಥೆ ಯ 3425.60 ಕೋಟಿ ರೂ. ಹೂಡಿಕೆಯಿಂದ 460 ಉದ್ಯೋಗ ಹಾಗೂ ಮೆ: ಸನ್ಸೆರಾ ಇಂಜಿನಿಯರಿಂಗ್ ಲಿಮಿಟೆಡ್ ಸಂಸ್ಥೆಯ 2150 ಕೋಟಿ ರೂ. ಹೂಡಿಕೆಯಿಂದ 3,500 ಉದ್ಯೋಗ ಸೃಷ್ಠಿಯಾಗಲಿದೆ.

ಸಭೆಯ ಮುಖ್ಯಾಂಶಗಳು
• ರಾಜ್ಯದ ವಿವಿಧ ಕೈಗಾರಿಕಾ ವಲಯಗಳಲ್ಲಿ ಒಟ್ಟು ರೂ. 9,823 ಕೋಟಿ ಮೊತ್ತದ 9 ಪ್ರಸ್ತಾವನೆಗಳಿಗೆ ಸಭೆಯಲ್ಲಿ ಅನುಮೋದನೆ.
• ಕೋಚನಹಳ್ಳಿಯ ಎಲೆಕ್ಟ್ರಾನಿಕ್ಸ್‌ ಮ್ಯಾನುಫಾಕ್ಚರಿಂಗ್‌ ಕ್ಲಸ್ಟರ್‌ ನಲ್ಲಿ ಸೆಮಿಕಂಡಕ್ಟರ್‌ ವಲಯದಲ್ಲಿ ರೂ. 3425 ಕೋಟಿ ವೆಚ್ಚದ ಪ್ರಥಮ ಯೋಜನೆಗೆ ಸಭೆಯಲ್ಲಿ ಅನುಮೋದನೆ.
• ಸಕ್ಕರೆ ಕಾರ್ಖಾನೆಗಳು ಉಪ ಉತ್ಪನ್ನಗಳ ಉತ್ಪಾದನೆ ಸಂದರ್ಭದಲ್ಲಿ ರೈತರಿಗೂ ಲಾಭಾಂಶದಲ್ಲಿ ಪಾಲು ನೀಡುವ ಕುರಿತು ಪರಿಶೀಲನೆ ನಡೆಸಬೇಕು. ಮಹಾರಾಷ್ಟ್ರ ಮತ್ತು ತಮಿಳುನಾಡಿನಲ್ಲಿ ಈ ಕುರಿತು ಅನುಸರಿಸುತ್ತಿರುವ ನಿಯಮಗಳನ್ನು ಪರಿಶೀಲಿಸಲು ಸೂಚಿಸಲಾಗಿದೆ.
• ಕೆಐಎಡಿಬಿಯಿಂದ ಕೈಗಾರಿಕೆಗಳನ್ನು ಆರಂಭಿಸಲು ಜಮೀನು ಪಡೆಯುವ ಕಂಪೆನಿಗಳು ನಿಗದಿತ ಅವಧಿಯಲ್ಲಿ ಕೈಗಾರಿಕೆಯನ್ನು ಆರಂಭಿಸದಿದ್ದರೆ ದಂಡ ವಿಧಿಸುವುದು ಸೇರಿದಂತೆ ಸೂಕ್ತ ಕ್ರಮ ಕೈಗೊಳ್ಳುವ ಕುರಿತು ಪರಿಶೀಲನೆ ನಡೆಸಲು ಸೂಚನೆ.
• ಸರ್ಕಾರದ ನಿಯಮಮಾವಳಿಗೆ ಅನುಸಾರವಾಗಿ ಕೈಗಾರಿಕೆಗಳು ಕಾರ್ಯನಿರ್ವಹಿಸುವುದನ್ನು ಖಾತ್ರಿಪಡಿಸಲು ಸಿಎಂ ಸೂಚನೆ ನೀಡಿದ್ದಾರೆ.

Share This Article