ಬೆಂಗಳೂರು: ರಾಜ್ಯದಲ್ಲಿ ಇಂದು ಕೂಡ ಕೊರೊನಾ ಪ್ರಕರಣಗಳ ಸಂಖ್ಯೆ ಸಾವಿರದ ಗಡಿ ತಲುಪಿದೆ. ಯಾವುದೇ ಮರಣ ಪ್ರಕರಣ ವರದಿಯಾಗಿಲ್ಲ.
ಇಂದು 989 ಮಂದಿಗೆ ಕೊರೊನಾ ಸೋಂಕು ಕಾಣಿಸಿಕೊಂಡಿದೆ. ಬೆಂಗಳೂರು ನಗರದಲ್ಲಿ 927 ಜನರಿಗೆ ಕೊರೊನಾ ಕಾಣಿಸಿಕೊಂಡಿದೆ. ಈ ಮೂಲಕ ರಾಜ್ಯದಲ್ಲಿ 6,693 ಕೊರೊನಾ ಸಕ್ರಿಯ ಪ್ರಕರಣಗಳಿವೆ. ಇಂದು 802 ಗುಣಮುಖರಾಗಿ ವಿವಿಧ ಆಸ್ಪತ್ರೆಗಳಿಂದ ಡಿಸ್ಚಾರ್ಜ್ ಆಗಿದ್ದಾರೆ.
27,535 ಜನರು ಕೋವಿಡ್-19 ಪರೀಕ್ಷೆ ಮಾಡಿಸಿಕೊಂಡಿದ್ದು, ಇಲ್ಲಿವರೆಗೂ 6,72,13,407 ಮಂದಿ ಕೋವಿಡ್ ಪರೀಕ್ಷೆ ಮಾಡಿಸಿಕೊಂಡಿದ್ದಾರೆ. ಕೋವಿಡ್-19 ಸೋಂಕಿನ ಖಚಿತ ಪ್ರಕರಣ ಶೇ.3.59 ಮತ್ತು ಮರಣ ಪ್ರಮಾಣ ಶೇ.0.00 ದಾಖಲಾಗಿದೆ. ಇದನ್ನೂ ಓದಿ: ಕಲಬುರಗಿಯಲ್ಲಿ ವರುಣಾರ್ಭಟಕ್ಕೆ ಮೊದಲ ಬಲಿ- ಜನ ಜೀವನ ಅಸ್ತವ್ಯಸ್ತ
ಇಂದು 802 ಮಂದಿ ಕೊರೊನಾ ಸೋಂಕಿನಿಂದ ಗುಣಮುಖರಾಗಿ ಡಿಸ್ಚಾರ್ಜ್ ಆಗಿದ್ದಾರೆ. ರಾಜ್ಯದಲ್ಲಿ ಇಂದು ಒಟ್ಟು 24,622 ಮಂದಿಗೆ ಕೊರೊನಾ ಲಸಿಕೆ ನೀಡಲಾಗಿದೆ. ಒಟ್ಟು 27,535 ಸ್ಯಾಂಪಲ್(ಆರ್‌ಟಿಪಿಸಿಆರ್ 20,472+ 7,063 ರ‍್ಯಾಪಿಡ್ ಆಂಟಿಜನ್)ಗಳನ್ನು ಕೊರೊನಾ ಪರೀಕ್ಷೆಗೆ ಒಳಪಡಿಸಲಾಗಿದೆ. ಇದನ್ನೂ ಓದಿ: ಶ್ರೀಲಂಕಾದಲ್ಲಿ ಜನಾಕ್ರೋಶ ಉಲ್ಬಣ – ಪ್ರಧಾನಿ ಸ್ಥಾನಕ್ಕೆ ರನಿಲ್ ವಿಕ್ರಮಸಿಂಘೆ ರಾಜೀನಾಮೆ
ಆರೋಗ್ಯ ಇಲಾಖೆಯ ಬುಲೆಟಿನ್ ಪ್ರಕಾರ ಬಳ್ಳಾರಿ 04, ಬೆಳಗಾವಿ 03, ಬೆಂಗಳೂರು ಗ್ರಾಮಾಂತರ 14, ಬೆಂಗಳೂರು ನಗರ 966, ಚಿತ್ರದುರ್ಗ 01, ದಕ್ಷಿಣ ಕನ್ನಡ 21, ಧಾರವಾಡ 8, ಹಾಸನ 03, ಮಂಡ್ಯ 01, ಶಿವಮೊಗ್ಗ 06, ಉತ್ತರ ಕನ್ನಡ 01 ಹಾಗೂ ಉಳಿದ ಜಿಲ್ಲೆಗಳಲ್ಲಿ ಶೂನ್ಯ ಪಾಸಿಟಿವ್ ಪ್ರಕರಣ ದಾಖಲಾಗಿವೆ.