ಮುಂಬೈ: 2016ರಲ್ಲಿ ಕೇಂದ್ರ ಸರ್ಕಾರ ನಿಷೇಧ ಮಾಡಿದ್ದ 500 ರೂ. ಹಾಗೂ 1 ಸಾವಿರ ರೂ. ಮುಖಬೆಲೆಯ ನೋಟುಗಳಲ್ಲಿ 99.3% ನೋಟುಗಳು ಬ್ಯಾಂಕ್‍ಗೆ ವಾಪಸ್ ಆಗಿದೆ ಎಂದು ರಿಸರ್ವ್ ಬ್ಯಾಂಕ್ ಆಫ್ ಇಂಡಿಯಾ (ಆರ್‌ಬಿಐ) ತಿಳಿಸಿದೆ.
2017-18 ವಾರ್ಷಿಕ ವರದಿಯಲ್ಲಿ ಈ ಅಂಶವನ್ನು ಆರ್‌ಬಿಐ ಬಹಿರಂಗಪಡಿಸಿದ್ದು, 2016ರ ನವೆಂಬರ್ 8 ನೋಟು ನಿಷೇಧಕ್ಕೂ ಮುನ್ನ ದೇಶದಲ್ಲಿ 500 ರೂ. ಹಾಗೂ 1 ಸಾವಿರ ಮುಖಬೆಲೆಯ 15.41 ಲಕ್ಷ ಕೋಟಿ ರೂ. ಮೌಲ್ಯದ ನೋಟುಗಳು ಚಲಾವಣೆಯಲ್ಲಿ ಇದ್ದು, ಬಳಿಕ ನಡೆದ ಪ್ರಕ್ರಿಯೆಯಲ್ಲಿ 15.31 ಲಕ್ಷ ಕೋಟಿ ರೂ. ಮೌಲ್ಯದ ನೋಟುಗಳು ವಾಪಸ್ ಆಗಿದೆ. ನೋಟುಗಳ ಪರಿಶೀಲನೆ ಪ್ರಕ್ರಿಯೆ ಯಶ್ವಸಿಯಾಗಿ ಮುಕ್ತಾಯವಾಗಿದೆ ಎಂದು ವರದಿಯಲ್ಲಿ ತಿಳಿಸಿದೆ.
Advertisement
Advertisement
ನೋಟು ನಿಷೇಧದ ಬಳಿಕ 2016-17 ರ ಅವಧಿಯಲ್ಲಿ ಆರ್‌ಬಿಐ 7,965 ಕೋಟಿ ರೂ. ಗಳನ್ನು ಹೊಸ 500 ಹಾಗೂ 2 ಸಾವಿರ ರೂ. ಮುಖಬೆಲೆಯ ನೋಟು ಮುದ್ರಣಕ್ಕಾಗಿ ವೆಚ್ಚ ಮಾಡಿದೆ. ಈ ಅವಧಿಯಲ್ಲಿ ನೋಟು ಮುದ್ರಣದ ವೆಚ್ಚ ಕಳೆದ ವರ್ಷದಲ್ಲಿ ಮಾಡಿದ್ದ ವೆಚ್ಚಕ್ಕಿಂತಲೂ ಎರಡರಷ್ಟು ಹೆಚ್ಚಾಗಿದೆ. ಇನ್ನು 2017-18 (ಜುಲೈ 2017 ರಿಂದ ಜೂನ್ 2018) ಅವಧಿಯಲ್ಲಿ 4,912 ಕೋಟಿ ರೂ. ಗಳನ್ನು ನೋಟು ಮುದ್ರಣಕ್ಕಾಗಿ ಆರ್‌ಬಿಐ ವೆಚ್ಚಮಾಡಿದೆ.
Advertisement
ನೋಟು ನಿಷೇಧ ವೇಳೆ ಈ ಕ್ರಮ ಕಪ್ಪು ಹಣದ ಪತ್ತೆ, ಭ್ರಷ್ಟಚಾರ ನಿಯಂತ್ರಣ ಮತ್ತು ಖೋಟಾ ನೋಟು ಪರಿಶೀಲನೆಗೆ ಸಹಾಯವಾಗುತ್ತದೆ ಎಂಬ ವಾದ ಕೇಳಿ ಬಂದಿತ್ತು. ಆದರೆ ಈ ವೇಳೆ 500 ರೂ. ಹಾಗೂ 1 ಸಾವಿರ ರೂ ಮುಖಬೆಲೆ ನಕಲಿ ನೋಟುಗಳ ಪತ್ತೆ ಪ್ರಮಾಣ ಕ್ರಮವಾಗಿ 59.7% ಮತ್ತು 59.6% ಕಡಿಮೆ ಯಾಗಿದೆ ಎಂದು ವರದಿಯಲ್ಲಿ ಉಲ್ಲೇಖಿಸಲಾಗಿದೆ. ಆದರೆ 100 ರೂ. ಹಾಗೂ 50 ರೂ ಮುಖಬೆಲೆಯ ನಕಲಿ ನೋಟುಗಳ ಪತ್ತೆ ಪ್ರಮಾಣ ಕ್ರಮವಾಗಿ 35%, 154.3% ರಷ್ಟು ಪತ್ತೆಯಾಗಿದೆ. ನೋಟು ನಿಷೇಧ ಕ್ರಮದಿಂದಾಗಿ 2017-18 ಆರ್ಥಿಕ ವರ್ಷದ ಮೇಲೆ ಪ್ರಭಾವ ಬೀರಿತ್ತು ಎಂದು ಆರ್‌ಬಿಐ ಹೇಳಿದೆ.
Advertisement
ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv
Annual Report for the year 2017-18https://t.co/iY6XXsMsqM
— ReserveBankOfIndia (@RBI) August 29, 2018
Every rupee of the Rs 15.42 lakh crore (barring a small sum of Ra 13,000 crore) has come back to the RBI.
Remember who had said that Rs 3 lakh crore will not come back and that will be a gain for the government!?
— P. Chidambaram (@PChidambaram_IN) August 29, 2018
Of the Rs 15.41 lakh cr worth Rs 500 and Rs 1,000 notes in circulation on November 8, 2016, when the note ban was announced, notes worth Rs 15.31 lakh cr hv been returned. This means just Rs 10,720 cr of the junked currency did not return to the banking system. #DeMonetisation
— Avinash Pande (@avinashpandeinc) August 29, 2018
RBI annual reports showing 99.30% of demonetised money returned to RBI. GDP lost of 1%, Businesses were shut, lives & jobs were lost, country is going through the biggest economy crisis now with rupee at all time low. #Demonetisation is biggest govt scam. pic.twitter.com/W1KT3zb2dW
— Assam Congress (@INCAssam) August 29, 2018