ರಾಯಚೂರು: 9ನೇ ತರಗತಿ ವಿದ್ಯಾರ್ಥಿನಿ ಗರ್ಭಿಣಿಯಾಗಿದ್ದು (Student Pregnant), ವೈದ್ಯಕೀಯ ಪರೀಕ್ಷೆ ವೇಳೆ ದೃಢಪಟ್ಟಿರುವ ಘಟನೆ ರಾಯಚೂರಿನ (Raichur) ಮಸ್ಕಿ ತಾಲೂಕಿನ ಹಳ್ಳಿಯೊಂದರಲ್ಲಿ ನಡೆದಿದೆ.
ಘಟನೆ ಬಳಿಕ ಪೋಕ್ಸೋ ಕೇಸ್ (POSCO Case) ದಾಖಲಿಸಿಕೊಂಡ ಪೊಲೀಸರು ಆರೋಪಿ ಯುವಕನನ್ನ ಬಂಧಿಸಿ ಜೈಲಿಗಟ್ಟಿದ್ದಾರೆ. ಇದನ್ನೂ ಓದಿ: ದಟ್ಟ ಅರಣ್ಯದಲ್ಲಿ ಕಳೆದು ಹೋಗಿದ್ದ 75ರ ವೈದ್ಯನನ್ನು ಪತ್ತೆ ಮಾಡಿದ ಪೊಲೀಸ್ ಡಾಗ್
25ರ ಯುವಕ ವಿದ್ಯಾರ್ಥಿಯನಿಯನ್ನ ಪುಸಲಾಯಿಸಿ ಕರೆದೊಯ್ದಿದ್ದಾನೆ ಎಂಬ ಆರೋಪ ಕೇಳಿಬಂದಿತ್ತು. ಬಳಿಕ ಪೊಲೀಸರು ಇಬ್ಬರನ್ನೂ ಪತ್ತೆಹಚ್ಚಿ ಕರೆತಂದಿದ್ದರು. ಈ ವೇಳೆ ವಿದ್ಯಾರ್ಥಿನಿಯನ್ನ ವೈದ್ಯಕೀಯ ಪರೀಕ್ಷೆಗೆ ಒಳಪಡಿಸಿದಾಗ ಆಕೆ ಗರ್ಭಿಣಿಯಾಗಿರುವುದು ದೃಢವಾಗಿದೆ.
ಬಳಿಕ ಯುವಕನನ್ನ ಜೈಲಿಗಟ್ಟಿದ ಪೊಲೀಸರು ವಿದ್ಯಾರ್ಥಿನಿಯನ್ನ ಆಸ್ಪತ್ರೆಗೆ ದಾಖಲಿಸಿದ್ದಾರೆ. ಇದನ್ನೂ ಓದಿ: ಹೈದರಾಬಾದ್ ವ್ಯಕ್ತಿಗೆ ಸಹಕರಿಸುವಂತೆ ಪೊಲೀಸರಿಗೆ ಕರೆ ಮಾಡಿದ್ದ ಕೇಸ್ – ಜೆಡಿಎಸ್‌ನಿಂದ ಸಚಿವ ಜಮೀರ್ ವಿರುದ್ಧ ರಾಜ್ಯಪಾಲರಿಗೆ ದೂರು

