ಗದಗ: ಪ್ರತಿಭಟನೆ (Protest) ವೇಳೆ ಬಂದ ಮಹಾರಾಷ್ಟ್ರ (Maharashtra) ಲಾರಿಗೆ (Lorry) ಕರವೇ ಕಾರ್ಯಕರ್ತರು ಮಸಿ ಬಳಿದ ಘಟನೆ ಗದಗದ (Gadag) ಮಹಾತ್ಮ ಗಾಂಧಿ ವೃತ್ತದಲ್ಲಿ ನಡೆದಿದೆ.
ಮಹಾರಾಷ್ಟ್ರ ಎಮ್.ಇ.ಎಸ್ ಹಾಗೂ ಶಿವಸೇನೆ ಪುಂಡಾಟಿಕೆ ಖಂಡಿಸಿ ನಗರದ ಮಹಾತ್ಮ ಗಾಂಧಿ ವೃತ್ತದಲ್ಲಿ ಕರವೇ ಕಾರ್ಯಕರ್ತರು ಪ್ರತಿಭಟನೆ ಮಾಡಿದರು. ಈ ವೇಳೆ ಮಹಾರಾಷ್ಟ್ರಕ್ಕೆ ಸಂಬಂಧಿಸಿದ ಲಾರಿಯೊಂದು ಬಂದಿದೆ. ಅಲ್ಲಿದ್ದ ಅನೇಕ ಕಾರ್ಯಕರ್ತರು ವಾಹನ ಮೇಲೆ ಹತ್ತಿ, ಕಪ್ಪು ಮಸಿ ಬಳಿದು ಮಹಾರಾಷ್ಟ್ರ ಸರ್ಕಾರದ ವಿರುದ್ಧ ಧಿಕ್ಕಾರ ಕೂಗಿ ಆಕ್ರೋಶ ವ್ಯಕ್ತಪಡಿಸಿದರು.
- Advertisement 2-
- Advertisement 3-
ಪರಿಸ್ಥಿತಿ ವಿಕೋಪಕ್ಕೆ ತಿರುಗುವ ಮುನ್ನ ಕಾರ್ಯಕರ್ತರನ್ನು ಕೆಳಗೆ ಇಳಿಸಲು ಪೊಲೀಸರು ಹರಸಾಹಸ ಪಡಬೇಕಾಯಿತು. ಈ ವೇಳೆ ಪೊಲೀಸರು ಹಾಗೂ ಕರವೇ ಕಾರ್ಯಕರ್ತರ ನಡುವೆ ವಾಗ್ವಾದ ನಡೆಯಿತು. ನಂತರ ಪರಿಸ್ಥಿತಿ ತಿಳಿಗೊಳಿಸಿದರು. ಕೆಲಕಾಲ ವಾಹನ ತಡೆದು, ಮಾನವ ಸರಪಳಿ ನಿರ್ಮಿಸಿ, ಎಮ್.ಇ.ಎಸ್ ಹಾಗೂ ಶಿವಸೇನೆ ಪ್ರತಿಕೃತಿ ದಹಿಸಿ ಆಕ್ರೋಶ ಹೊರಹಾಕಿದರು. ಇದನ್ನೂ ಓದಿ: ನನಗೆ ಟಿಕೆಟ್ ಕೊಟ್ರೆ ಮಾತ್ರ ಬಿಜೆಪಿ ಗೆಲ್ಲುತ್ತೆ – ಕೆ.ಎಂ ಮುನಿಯಪ್ಪ
- Advertisement 4-
ಕನ್ನಡಿಗರ ಮೇಲೆ, ಕನ್ನಡಿಗರ ಸಂಸ್ಥೆ, ಆಸ್ತಿ-ಪಾಸ್ತಿಗಳ ಮೇಲೆ ಶಿವಸೇನೆ ಕಾರ್ಯಕರ್ತರು ದಾಳಿ ಮಾಡಿ ಪುಂಡಾಟಿಕೆ ಮೆರೆಯುತ್ತಿದ್ದಾರೆ. ಗಡಿ ವಿಚಾರದಲ್ಲಿ ಪ್ರಧಾನಿ ಮಧ್ಯಸ್ಥಿಕೆ ವಹಿಸಬೇಕು. ಮಹಾರಾಷ್ಟ್ರಿಗರ ಪುಂಡಾಟಿಕೆ ಕೂಡಲೇ ನಿಲ್ಲಬೇಕು. ಮಹಾರಾಷ್ಟ್ರ ಸಚಿವರು ಕರ್ನಾಟಕಕ್ಕೆ ಬರಲು ಅನುಮತಿ ನೀಡಬಾರದು ಎಂದು ಆಗ್ರಹಿಸಿದರು. ಈ ವೇಳೆ ಅನೇಕ ಕಾರ್ಯಕರ್ತರು ಉಪಸ್ಥಿತರಿದ್ದರು. ಇದನ್ನೂ ಓದಿ: ಟಿಆರ್‌ಎಸ್ ಅಲ್ಲ, ಇನ್ಮುಂದೆ ಬಿಆರ್‌ಎಸ್ – ಕೆಸಿಆರ್ ಪಕ್ಷದ ಹೆಸರು ಬದಲಾವಣೆಗೆ ಚುನಾವಣಾ ಆಯೋಗ ಒಪ್ಪಿಗೆ