ಶಾಲಾ ಮಕ್ಕಳಿಗೆ ಆಕಾಶವಾಣಿ ಮೂಲಕ ಪಠ್ಯ ಬೋಧನೆ – ವೇಳಾಪಟ್ಟಿ ಪ್ರಕಟ

Public TV
1 Min Read
student akashavani radio

ಬೆಂಗಳೂರು: ಶಾಲಾ ಮಕ್ಕಳಿಗೆ (Student) ಆಕಾಶವಾಣಿ (Radio) ಮೂಲಕ ಪಠ್ಯ ಬೋಧನೆಯ ಹಿನ್ನೆಲೆಯಲ್ಲಿ ಶಿಕ್ಷಣ ಇಲಾಖೆಯಲ್ಲಿ ವೇಳಾಪಟ್ಟಿಯನ್ನು ಪ್ರಕಟಗೊಳಿಸಿದೆ.

ಗುಣಾತ್ಮಕ ಶಿಕ್ಷಣದ ಗುರಿ ಸಾಧನೆಯೊಂದಿಗೆ ಡಿಜಿಟಲ್‌ ಉಪಕ್ರಮದ ಅಳವಡಿಕೆ ಹಾಗೂ ತರಗತಿ ಬೋಧನಾ ಕಲಿಕಾ ಪ್ರಕ್ರಿಯೆಯಲ್ಲಿ ಏಕತಾನತೆಯನ್ನು ಹೋಗಲಾಡಿಸುವ ಉದ್ದೇಶದಿಂದ ಆಕಾಶವಾಣಿಯ ಮೂಲಕ ಶಾಲೆಗಳಲ್ಲಿ ರೇಡಿಯೋ ಪಾಠವನ್ನು ಪ್ರಸಾರ ಮಾಡುತ್ತಿದೆ. ಈ ಹಿನ್ನೆಲೆಯಲ್ಲಿ ಶಿಕ್ಷಣ ಇಲಾಖೆ ಪ್ರಕಟ ಮಾಡಿರುವ ವೇಳಾಪಟ್ಟಿಯಲ್ಲಿ ನಾಳೆಯಿಂದ ಫೆಬ್ರವರಿ 23ರವರೆಗೆ ಆಕಾಶವಾಣಿಯಲ್ಲಿ ನಿತ್ಯ ಪಠ್ಯ ಬೋಧನೆ ನಡೆಯಲಿದೆ. 1 ರಿಂದ 9ನೇ ತರಗತಿ ವಿದ್ಯಾರ್ಥಿಗಳಿಗಾಗಿ ಪಠ್ಯ ಬೋಧನೆ ನಡೆಯಲಿದ್ದು, ಬಾನ್ ದನಿ ಕಾರ್ಯಕ್ರಮದ ಮೂಲಕ ಪಠ್ಯ ಬೋಧನೆ ಮಾಡಲಾಗುವುದು ಎಂದು ಶಿಕ್ಷಣ ಇಲಾಖೆ ತಿಳಿಸಿದೆ.

akashavani radio time table student school

ಬಾನ್ ದನಿ ಕಾರ್ಯಕ್ರಮವು ನೀತಿ ಕತೆ, ಯೋಗ ಮತ್ತು ಆರೋಗ್ಯ ಶಿಕ್ಷಣ, ವೃತ್ತಿ ಶಿಕ್ಷಣ ಮತ್ತು ಶೈಕ್ಷಣಿಕ ಮಾರ್ಗದರ್ಶನ ಹಾಗೂ ಇಂಗ್ಲಿಷ್ ಕಲಿಕೆಯನ್ನೊಳಗೊಂಡ ಸಾಮಾನ್ಯ ಪಾಠಗಳನ್ನು 1 ರಿಂದ 9ನೇ ತರಗತಿಗಳಿಗೆ ಒಳಗೊಂಡಿದೆ. 4 ಹಾಗೂ 5ನೇ ತರಗತಿಗಳಿಗೆ ಕನ್ನಡ ಮತ್ತು ಗಣಿತ ವಿಷಯಗಳ ಕಲಿವಿನ ಫಲ ಆಧಾರಿತ ಪಾಠಗಳನ್ನು ಒಳಗೊಂಡಿದೆ. ಇದನ್ನೂ ಓದಿ: ಉಪವಾಸ ಸತ್ಯಾಗ್ರಹ ಮಾಡ್ತಿದ್ದ ಆಂಧ್ರ ಸಿಎಂ ಸಹೋದರಿ ಆಸ್ಪತ್ರೆಗೆ ದಾಖಲು

akashavani radio time table student school 2

ಈ ಕಾರ್ಯಕ್ರಮವು ಆಕಾಶವಾಣಿಯಲ್ಲಿ ಸೋಮವಾರದಿಂದ ಗುರುವಾರದವರೆಗೆ ಮಧ್ಯಾಹ್ನ 2.35 ರಿಂದ 3,00 ಗಂಟೆಯವರೆಗೆ ಪ್ರಸಾರಗೊಳ್ಳಲಿದ್ದು, ರಾಜ್ಯದ 13 ಆಕಾಶವಾಣಿ ಕೇಂದ್ರಗಳು ಹಾಗೂ 3 ವಿವಿಧ ಭಾರತಿ FM ಕೇಂದ್ರಗಳಿಂದ ಏಕಕಾಲದಲ್ಲಿ ರೇಡಿಯೋ ಅಲ್ಲದೆ, ಸಾಮಾನ್ಯ ಮೊಬೈಲ್, All India Radio Bangalore You Tube streaming ನಲ್ಲಿ ಮತ್ತು ಜಗತ್ತಿನಾದ್ಯಂತ Prasarabharathi news on air app ನಲ್ಲಿಯೂ ಕೇಳಬಹುದಾಗಿದೆ. ಇದನ್ನೂ ಓದಿ: ಬೆಂಗಳೂರು ಸೇರಿ ರಾಜ್ಯದ ಹಲವೆಡೆ ಇನ್ನೂ 3 ದಿನ ಮಳೆ – ಹವಾಮಾನ ಇಲಾಖೆ

Live Tv
[brid partner=56869869 player=32851 video=960834 autoplay=true]

Share This Article
Leave a Comment

Leave a Reply

Your email address will not be published. Required fields are marked *