‘ಪಠಾಣ್’ ಹಾಡಿನಲ್ಲಿ ಹಾಟ್ ಹಾಟ್ ಆಗಿ ಕಾಣಿಸಿಕೊಂಡ ದೀಪಿಕಾ ಪಡುಕೋಣೆ

Public TV
1 Min Read
FotoJet 3 25

ಶಾರುಖ್ ಖಾನ್ ಮತ್ತು ದೀಪಿಕಾ ಪಡುಕೋಣೆ ಕಾಂಬಿನೇಷನ್ ನ ಪಠಾಣ್ ಸಿನಿಮಾದ ಹಾಡು ಇಂದು ಬಿಡುಗಡೆ ಆಗಿದೆ. ಸಾಂಗ್ ರಿಲೀಸ್ ಆದ ಕೆಲವೇ ಗಂಟೆಗಳಲ್ಲೇ ಮಿಲಿಯನ್ ಗಟ್ಟಲೇ ವೀಕ್ಷಣೆಯನ್ನು ಅದು ಪಡೆದುಕೊಂಡಿದೆ. ಈ ಹಾಡಿನಲ್ಲಿ ದೀಪಿಕಾ ಪಡುಕೋಣೆ ಹಾಟ್ ಹಾಟ್ ಆಗಿ ಕಾಣಿಸಿಕೊಂಡು ಅಚ್ಚರಿ ಮೂಡಿಸಿದ್ದಾರೆ. ಸಖತ್ ಸಂಗೀತಕ್ಕೆ ಸೊಂಟ ಬಳುಕಿಸಿದ್ದಾರೆ. ದೀಪಿಕಾ ಕುಣಿತಕ್ಕೆ ಫ್ಯಾನ್ಸ್ ಫಿದಾ ಆಗಿದ್ದಾರೆ.

FotoJet 2 34

ಈಗಾಗಲೇ ಸಿನಿಮಾದ ಫಸ್ಟ್ ಲುಕ್ ಮೂಲಕ ಸಾಕಷ್ಟು ಭರವಸೆ ಮೂಡಿಸಿರುವ ಈ ಸಿನಿಮಾ, ಮೊದಲ ಹಾಡಿನ ಮೂಲಕ ಪ್ರಚಾರ ಆರಂಭಿಸಲಿದೆ. ದೀಪಿಕಾ ಪಡುಕೋಣೆ ಮತ್ತು ಶಾರುಖ್ ಖಾನ್ ಕಾಂಬಿಷೇನ್ ನ ಸಿನಿಮಾ ಇದಾಗಿದ್ದು, ಶುರುವಿನಿಂದ ಈವರೆಗೂ ಕುತೂಹಲವನ್ನು ಕಾಪಾಡಿಕೊಂಡೇ ಬರುತ್ತಿದೆ. ಇದನ್ನೂ ಓದಿ: ಮೊದಲ ಬಾರಿಗೆ ಮಗಳ ಮುಖ ಪರಿಚಯಿಸಿದ `ಯುವರತ್ನ’ ನಟಿ

FotoJet 45

ಇಂದು ಹಾಡು ರಿಲೀಸ್ ಆಗುತ್ತಿರುವ ವಿಷಯವನ್ನು ಸ್ವತಃ ಶಾರುಖ್ ಖಾನ್ ಅವರೇ ಸೋಷಿಯಲ್ ಮೀಡಿಯಾ ಮೂಲಕ ಹಂಚಿಕೊಂಡಿದ್ದರು. ಈ ಹಾಡನ್ನು ನೋಡಲು ತಾವೂ ಕೂಡ ಕಾತರದಿಂದ ಕಾಯುತ್ತಿರುವುದಾಗಿಯೂ ಅವರು ಹೇಳಿಕೊಂಡಿದ್ದರು. ಅಲ್ಲದೇ ಅಭಿಮಾನಿಗಳು ಕೂಡ  ಅಷ್ಟೇ ಕುತೂಹಲದಿಂದಲೇ ಹಾಡಿಗಾಗಿ ಕಾದಿದ್ದರು. ಬಿಡುಗಡೆಯಾದ ಹಾಡಿಗೆ ಅಭಿಮಾನಿಗಳು ಕೂಡ ಜೈಕಾರ ಹಾಕಿದ್ದಾರೆ.

FotoJet 1 35

ಇದು ಶಾರುಖ್ ಖಾನ್ ವೃತ್ತಿ ಜೀವನದ ಮಹತ್ವದ ಸಿನಿಮಾ ಎನ್ನಲಾಗುತ್ತಿದ್ದು, ಸತತ ಸೋಲಿನ ಬಳಿಕೆ ಬಾಲಿವುಡ್ ಗೆ ಈ ಸಿನಿಮಾ ಶಕ್ತಿ ತುಂಬಲಿದೆ ಎಂದು ಹೇಳಲಾಗುತ್ತಿದೆ. ದೀಪಿಕಾ ಪಡುಕೋಣೆ ಮತ್ತು ಶಾರುಖ್ ಕಾಂಬಿನೇಷನ್ ಇರುವುದರಿಂದ ಬಾಕ್ಸ್ ಆಫೀಸಿನಲ್ಲೂ ಈ ಸಿನಿಮಾ ಹಿಟ್ ಆಗಲಿದೆ ಎನ್ನುವುದು ಸಿನಿ ಪಂಡಿತರ ಲೆಕ್ಕಾಚಾರ. ಇಂದು ಬಿಡುಗಡೆ ಆಗಿರುವ ಹಾಡು ಅಂಥದ್ದೊಂದು ಭರವಸೆಯನ್ನೂ ಮೂಡಿಸಿದೆ.

Live Tv
[brid partner=56869869 player=32851 video=960834 autoplay=true]

Share This Article
Leave a Comment

Leave a Reply

Your email address will not be published. Required fields are marked *