ಬೆಂಗಳೂರು ನಗರದ ಸಂಬಳದಾರರ ಮನೆ ಬಾಡಿಗೆ ಭತ್ಯೆ ಶೇ.50 ಹೆಚ್ಚಳಕ್ಕೆ ತೇಜಸ್ವಿ ಸೂರ್ಯ ಮನವಿ

Public TV
2 Min Read
Tejasvi Surya in lok sabha

ಬೆಂಗಳೂರು: ಅತ್ಯಂತ ವೇಗವಾಗಿ ಬೆಳೆಯುತ್ತಿರುವ ಬೆಂಗಳೂರು(Bengaluru) ನಗರದ ಸಂಬಳದಾರರ ಮನೆ ಬಾಡಿಗೆ ಭತ್ಯೆಯನ್ನು(HRA) ಶೇ. 50ಕ್ಕೆ ಹೆಚ್ಚಳ ಮಾಡುವಂತೆ ಬೆಂಗಳೂರು ದಕ್ಷಿಣ ಕ್ಷೇತ್ರದ ಸಂಸದ ತೇಜಸ್ವಿ ಸೂರ್ಯ(Tejasvi Surya) ಮನವಿ ಮಾಡಿದ್ದಾರೆ.

ಲೋಕಸಭೆಯ(Lok Sabha) ಶೂನ್ಯ ವೇಳೆಯಲ್ಲಿ ಸಾರ್ವಜನಿಕ ಹಿತಾಸಕ್ತಿ ವಿಷಯಗಳ ಮೇಲಿನ ಚರ್ಚೆ ಸಂದರ್ಭದಲ್ಲಿ ಮಾತನಾಡಿದ ಅವರು, ಆದಾಯ ತೆರಿಗೆ ನಿಯಮಾವಳಿಗಳಿಗೆ ಸೂಕ್ತ ತಿದ್ದುಪಡಿ ತಂದು ಪ್ರಸ್ತುತ ಶೇ. 40 ರಷ್ಟು ಇರುವ ಮನೆ ಬಾಡಿಗೆ ಭತ್ಯೆಯನ್ನು ಶೇ.50 ಕ್ಕೆ ಏರಿಸಬೇಕು. ಅತ್ಯಂತ ವೇಗವಾಗಿ ಬೆಳೆಯುತ್ತಿರುವ ಇತರ ಸಮನಾದ ನಗರಗಳ ಪಟ್ಟಿಗೆ ಬೆಂಗಳೂರನ್ನು ಸೇರ್ಪಡೆಗೊಳಿಸುವ ಮೂಲಕ ಮಧ್ಯಮ ವರ್ಗದ ಸಂಬಳದಾರರ ಹಿತಾಸಕ್ತಿ ಕಾಯುವಂತೆ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರನ್ನು ಒತ್ತಾಯಿಸಿದ್ದಾರೆ.

ತೇಜಸ್ವಿ ಸೂರ್ಯ ಮನವಿ ಏನು?
ಬೆಂಗಳೂರು ಮಹಾನಗರವು ಅತ್ಯಂತ ವೇಗವಾಗಿ ಬೆಳೆಯುತ್ತಿರುವ ಅತ್ಯಂತ ಪ್ರಮುಖ ನಗರವಾಗಿದ್ದು, ಸಂಬಳದಾರ ವರ್ಗವು ಅತಿ ಹೆಚ್ಚು ವಾಸಿಸುವ ದೇಶದ ಮುಖ್ಯ ನಗರವಾಗಿದೆ . ದೆಹಲಿ, ಚೆನ್ನೈ, ಮುಂಬೈ ಮತ್ತು ಕೋಲ್ಕತ್ತಾ ಗಳ ಸಾಲಿಗೆ ಬೆಂಗಳೂರನ್ನು ಕೂಡ ಸೇರಿಸಿದಲ್ಲಿ, ನಗರದ ಮಧ್ಯಮ ವರ್ಗದ ಸಂಬಳದಾರ ವರ್ಗದ ಜನತೆಗೆ ಸಾಕಷ್ಟು ಅನುಕೂಲವಾಗಲಿದೆ.. ಆದಾಯ ತೆರಿಗೆ ನಿಯಮಾವಳಿಗಳನ್ನು ಪರಾಮರ್ಶಿಸುವ ಮೂಲಕ ಬೆಂಗಳೂರು ನಗರದ ಜನತೆಯ ಮನೆ ಬಾಡಿಗೆ ಭತ್ಯೆ ಹೆಚ್ಚಳಕ್ಕೆ ಮನವಿ ಮಾಡುತ್ತೇನೆ.

ಬೆಂಗಳೂರು 1.18 ಕೋಟಿ ನಾಗರಿಕರನ್ನು ಹೊಂದಿದ್ದು ,ಕರ್ನಾಟಕದ ಜಿಡಿಪಿಗೆ ಶೇ.80 ರಷ್ಟು ಕೊಡುಗೆ ನೀಡುತ್ತಿದೆ. ಸಿಲಿಕಾನ್ ವ್ಯಾಲಿ ಎಂದಲೂ ಕರೆಯಲ್ಪಡುವ ಬೆಂಗಳೂರು ಅನೇಕ ಸ್ಟಾರ್ಟ್ – ಅಪ್ ಗಳ ತವರು. ಐಟಿ, ಐಟಿ ಸಂಬಂಧಿತ ಸೇವೆಗಳು, ಸಾಫ್ಟ್ ವೇರ್ ತಂತ್ರಜ್ಞಾನದ 66.80 ಬಿಲಿಯನ್ ಡಾಲರ್ ಅಥವಾ ಭಾರತದ ಶೇ.40 ರಷ್ಟು ಐಟಿ ರಪ್ತು ವಹಿವಾಟು ನಡೆಸುವ ಬಹು ಮುಖ್ಯ ನಗರವಾಗಿದೆ. ಬಯೋ ಟೆಕ್ನಾಲಜಿ ಗೆ ಸಂಬಂಧಿಸಿದ ಅತೀ ಹೆಚ್ಚಿನ ಸಂಸ್ಥೆಗಳು ಇರುವುದು ಬೆಂಗಳೂರಿನಲ್ಲಿ ಎನ್ನುವುದು ವಿಶೇಷ. ಇದನ್ನೂ ಓದಿ: ಭಾರತ, ಚೀನಾ ಸಂಘರ್ಷಕ್ಕೆ ಕಾರಣ ಏನು? ಅರುಣಾಚಲದ ಗಡಿಯಲ್ಲಿ ನಿಜವಾಗಿ ಏನಾಯ್ತು?

bengaluru city arial dh 1553098309

ದೇಶದ ಶೇ.80 ರಷ್ಟು ಸೆಮಿ ಕಂಡಕ್ಟರ್ ಉದ್ಯಮವು ಬೆಂಗಳೂರು ಕೇಂದ್ರಿತವಾಗಿದೆ. 7,500 ಸ್ಟಾರ್ಟ್-ಅಪ್ ಗಳ ಕಾರ್ಯನಿರ್ವಹಣೆಯಿಂದ ಸ್ಟಾರ್ಟ್ ಅಪ್ ಕ್ಯಾಪಿಟಲ್ ಎಂದು ಕೂಡ ಪ್ರಾಮುಖ್ಯತೆ ಪಡೆದಿದೆ.

ಬೆಂಗಳೂರು ಮತ್ತು ಇತರ ಬೆಳವಣಿಗೆ ಹೊಂದುತ್ತಿರುವ ನಗರಗಳಲ್ಲಿ ಮನೆ ಬಾಡಿಗೆ ಹೆಚ್ಚಿನ ಪ್ರಮಾಣದಲ್ಲಿ ಇರುವುದರಿಂದ, ಬೆಂಗಳೂರು ಮತ್ತು ಇಂತಹ ನಗರಗಳನ್ನು ಮಹಾ ನಗರಗಳ ಪಟ್ಟಿಯಲ್ಲಿ ಸೇರ್ಪಡೆಗೊಳಿಸಿದಲ್ಲಿ ಮಧ್ಯಮ ವರ್ಗದ ಸಂಬಳದಾರ ವರ್ಗದ ಜನತೆಗೆ ಅನುಕೂಲವಾಗಲಿದೆ ಎಂದು ಸಂಸತ್ತಿನ ಗಮನ ಸೆಳೆದರು.

Live Tv
[brid partner=56869869 player=32851 video=960834 autoplay=true]

Share This Article
Leave a Comment

Leave a Reply

Your email address will not be published. Required fields are marked *