Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ರಾಮ ಮಂದಿರಕ್ಕೆ ಬೆಳ್ಳಿ ಇಟ್ಟಿಗೆ, ರೇಷ್ಮೆ ಸೀರೆ, ಶಲ್ಯ ಸಮರ್ಪಿಸಿದ ಅಶ್ವಥ್ ನಾರಾಯಣ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Ayodhya Ram Mandir | ರಾಮ ಮಂದಿರಕ್ಕೆ ಬೆಳ್ಳಿ ಇಟ್ಟಿಗೆ, ರೇಷ್ಮೆ ಸೀರೆ, ಶಲ್ಯ ಸಮರ್ಪಿಸಿದ ಅಶ್ವಥ್ ನಾರಾಯಣ

Ayodhya Ram Mandir

ರಾಮ ಮಂದಿರಕ್ಕೆ ಬೆಳ್ಳಿ ಇಟ್ಟಿಗೆ, ರೇಷ್ಮೆ ಸೀರೆ, ಶಲ್ಯ ಸಮರ್ಪಿಸಿದ ಅಶ್ವಥ್ ನಾರಾಯಣ

Public TV
Last updated: December 22, 2023 1:39 pm
Public TV
Share
2 Min Read
Ashwath Narayan 4
SHARE

ಲಕ್ನೋ: ಅಯೋಧ್ಯೆಯಲ್ಲಿ (Ayodhya) ರಾಮ ಮಂದಿರ (Ram Mandir) ನಿರ್ಮಾಣ ಹಿನ್ನೆಲೆ ರಾಮನಗರ ಜಿಲ್ಲೆಯಿಂದ ಜಿಲ್ಲಾ ಉಸ್ತುವಾರಿ ಸಚಿವ ಡಾ.ಸಿ.ಎನ್ ಅಶ್ವಥ್ ನಾರಾಯಣ (Ashwath Narayan) ನೇತೃತ್ವದಲ್ಲಿ ಬೆಳ್ಳಿ ಇಟ್ಟಿಗೆ (Silver Brick), ರೇಷ್ಮೆ ಸೀರೆ ಹಾಗೂ ಶಲ್ಯವನ್ನು ಸಮರ್ಪಿಸಲಾಯಿತು.

ರಾಮನಗರದಿಂದ ತೆರಳಿರುವ 150 ಯಾತ್ರಾರ್ಥಿಗಳ ತಂಡವು ಭವ್ಯ ಶ್ರೀರಾಮ ಮಂದಿರ ನಿರ್ಮಾಣಕ್ಕೆ 1.50 ಕೆ.ಜಿ ತೂಕದ ಬೆಳ್ಳಿ ಇಟ್ಟಿಗೆ, ಸೀತಾಮಾತೆಗೆ ಸ್ಥಳೀಯ ರೇಷ್ಮೆ ಸೀರೆ, ರಾಮ-ಲಕ್ಷ್ಮಣರಿಗೆ ಶಲ್ಯಗಳನ್ನು ಇಂದು ಅರ್ಪಿಸಿದರು.

Ashwath Narayan 2

ಬೆಳಿಗ್ಗೆ 11 ಗಂಟೆ ಸುಮಾರಿಗೆ ಸಚಿವರ ನೇತೃತ್ವದಲ್ಲಿ ಭಕ್ತರ ತಂಡವು ರಾಮ ಮಂದಿರ ಆವರಣಕ್ಕೆ ಆಗಮಿಸಿತು. ನಂತರ,  ಕನ್ನಡಿಗ ಅರ್ಚಕರಾದ ಗೋಪಾಲ್‌ ಭಟ್‌ ಮತ್ತು ಅವರ ತಂಡವು ರಾಮನಗರದ ತಂಡವು ಭಕ್ತಿ-ಗೌರವಗಳೊಂದಿಗೆ ತಂದಿದ್ದ ಕಾಣಿಕೆಗಳಿಗೆ ವಿಧಿಬದ್ಧವಾಗಿ ಪೂಜೆ ಸಲ್ಲಿಸಿದರು. ಈ ಸಂದರ್ಭದಲ್ಲಿ ಅಯೋಧ್ಯೆಯ ಪವಿತ್ರ ಮೃತ್ತಿಕೆಯನ್ನು ಕೂಡ ಶಾಸ್ತ್ರೋಕ್ತವಾಗಿ ಪೂಜಿಸಿ, ಸಚಿವರು ಮತ್ತು ಅವರ ಸಹಯಾತ್ರಾರ್ಥಿಗಳಿಗೆ ವಿತರಿಸಲಾಯಿತು. ಈ ಮೃತ್ತಿಕೆಯನ್ನು ರಾಮದೇವರ ಬೆಟ್ಟಕ್ಕೆ ಸಮರ್ಪಿಸಲಾಗುವುದು ಎಂದು ಸಚಿವರು ತಿಳಿಸಿದರು.

ಬಳಿಕ, ಮಂದಿರದ ಆವರಣದಲ್ಲಿ ರಾಮ ಜನ್ಮಭೂಮಿ ತೀರ್ಥಕ್ಷೇತ್ರ ಟ್ರಸ್ಟ್‌ನ ಪ್ರಧಾನ ಕಾರ್ಯದರ್ಶಿ ಚಂಪಕ್ ರಾಯ್‌ ಮತ್ತು ನ್ಯಾಸದ ಪದಾಧಿಕಾರಿಗಳಿಗೆ ಈ ಕಾಣಿಕೆಗಳನ್ನು ರಾಮನಗರ ಜಿಲ್ಲೆಯ ಪರವಾಗಿ ಸಚಿವರು ಹಸ್ತಾಂತರಿಸಿದರು. ಈ ಸಂದರ್ಭದಲ್ಲಿ ಅವರ ಜತೆಗಿದ್ದ ಭಕ್ತಗಣವು ಭಾರತ್‌ ಮಾತಾ ಕೀ ಜೈ, ಗಂಗಾ ಮಾತಾ ಕೀ ಜೈ, ಸರಯೂ ಮಾತಾ ಕೀ ಕೈ, ಜೈ ಶ್ರೀ ರಾಮ್‌ ಮುಂತಾದ ಘೋಷಣೆಗಳನ್ನು ಉತ್ಸಾಹದಿಂದ ಮೊಳಗಿಸಿತು. ಯಾತ್ರಾರ್ಥಿಗಳ ಈ ಉತ್ಸಾಹಕ್ಕೆ ಅಶ್ವತ್ಥನಾರಾಯಣ ಅವರೂ ದನಿಗೂಡಿಸಿದರು.

Ashwath Narayan 3

ಈ ವೇಳೆ ಮಾಡತಾಡಿದ ಅಶ್ವಥ್ ನಾರಾಯಣ, ರಾಮ ದೇವರ ಬೆಟ್ಟದ ತಾಣವಾದ ರಾಮನಗರವು ಪರಮಾತ್ಮನಾದ ಶ್ರೀರಾಮನ ಹೆಸರನ್ನೇ ಹೊತ್ತಿದೆ. ಈ ಬೆಟ್ಟದಲ್ಲಿ ದೇಶದಲ್ಲೇ ಅಪರೂಪವಾಗಿರುವ ರಣಹದ್ದಿನ ಸಂತತಿ ಉಳಿದುಕೊಂಡಿದೆ. ರಾಮಾಯಣದಲ್ಲೂ ಈ ಸಂತತಿಗೆ ಸೇರಿದ ಜಟಾಯು, ಸಂಪಾತಿಗಳ ಪಾತ್ರವಿದೆ. ಹೀಗೆ ರಾಮನಗರ, ರಾಮ ಮತ್ತು ರಾಮಾಯಣದ ನಡುವೆ ಮಧುರ ಬಾಂಧವ್ಯವಿದೆ. ಹೀಗಾಗಿ ರಾಮಮಂದಿರ ನಿರ್ಮಾಣಕ್ಕೆ ಜಿಲ್ಲೆಯಿಂದ ಬೆಳ್ಳಿ ಇಟ್ಟಿಗೆ ಸಮರ್ಪಿಸಲಾಗಿದೆ ಎಂದು ತಿಳಿಸಿದರು. ಇದನ್ನೂ ಓದಿ: ಮೋದಿ ಸರ್ಕಾರದಲ್ಲಿ ಚೀನಾ ವಿರುದ್ಧ ಮಾತನಾಡಲು ಅವಕಾಶವೇ ಇಲ್ಲ – ಖರ್ಗೆ ಕಿಡಿ

ಶ್ರೀರಾಮನು ನಮ್ಮ ಪರಂಪರೆ, ಸಂಸ್ಕೃತಿ ಮತ್ತು ಭಾರತೀಯತೆಯ ಪ್ರತೀಕವಾಗಿದ್ದಾನೆ. ನಮ್ಮೆಲ್ಲರ ಪಾಲಿನ ಆದರ್ಶಮೂರ್ತಿಯಾಗಿರುವ ಶ್ರೀರಾಮನಿಗೆ ಪ್ರಧಾನಿ ನರೇಂದ್ರ ಮೋದಿ ಅವರ ನಾಯಕತ್ವದಲ್ಲಿ ಭವ್ಯವಾದ ರಾಮ ಮಂದಿರ ನಿರ್ಮಾಣವಾಗುತ್ತಿರುವುದು ಹೆಮ್ಮೆಯ ಸಂಗತಿಯಾಗಿದೆ. 2024ರ ಜನವರಿಯ ಹೊತ್ತಿಗೆ ಮಂದಿರದ ಕಾಮಗಾರಿಗಳು ಮುಗಿದು, ಜನರಿಗೆ ದರ್ಶನಕ್ಕೆ ಮುಕ್ತಗೊಳಿಸಲಾಗುವುದು ಎಂದು ಅವರು ನುಡಿದರು.

Ashwath Narayan 1 1

ರಾಮನಿಂದ ನಮ್ಮಲ್ಲಿ ರಾಮರಾಜ್ಯದ ಪರಿಕಲ್ಪನೆ ಬಂದಿದೆ. ತ್ರೇತಾಯುಗದಿಂದಲೂ ರಾಮನು ಭಾರತೀಯರನ್ನು ಒಗ್ಗೂಡಿಸುವ ಶಕ್ತಿಯಾಗಿ ಉಳಿದುಕೊಂಡು ಬಂದಿದ್ದಾನೆ. ಇಲ್ಲಿ ನಿರ್ಮಿಸಲಾಗುತ್ತಿರುವ ರಾಮ ಮಂದಿರಕ್ಕೆ ತಮ್ಮ ಕಾಣಿಕೆಯೂ ಇರಬೇಕೆಂದು ರಾಮನಗರದ ಭಕ್ತ ಮಹಾಶಯರು ಒತ್ತಾಯಿಸಿದರು. ಈ ಮೂಲಕ ರಾಮನಗರದ ಜನತೆಗೆ ಪರಮಾತ್ಮನ ಆಶೀರ್ವಾದ ಸಿಕ್ಕಿದೆ ಎಂದು ಸಚಿವರು ಬಣ್ಣಿಸಿದರು.

ಪೂಜೆಯ ಬಳಿಕ ಸಚಿವರು ಮತ್ತು ಯಾತ್ರಾರ್ಥಿಗಳು ಪ್ರಗತಿಯಲ್ಲಿರುವ ಮಂದಿರವನ್ನು ವೀಕ್ಷಿಸಿ, ದೇಗುಲದಲ್ಲಿ ದರ್ಶನ ಪಡೆದು ಪುನೀತರಾದರು. ಉಸ್ತುವಾರಿ ಸಚಿವರಿಗೆ ರಾಮನಗರ ಜಿಲ್ಲಾ ಬಿಜೆಪಿ ಅಧ್ಯಕ್ಷ ದೇವರಾಜು, ರಾಜ್ಯ ರೇಷ್ಮೆ ಕೈಗಾರಿಕೆ ಉದ್ಯಮಗಳ ನಿಗಮದ ಅಧ್ಯಕ್ಷ ಗೌತಮ್ ಗೌಡ ಸೇರಿ ಹಲವರು ಸಾಥ್ ನೀಡಿದರು. ಇದನ್ನೂ ಓದಿ: ಮಂಡ್ಯ ಬಿಜೆಪಿ ಚುನಾವಣಾ ಉಸ್ತುವಾರಿ ಕೇಂದ್ರ ಸಚಿವ ಕ್ರಿಶನ್ ಪಾಲ್ ಗುರ್ಜರ್‌

Live Tv
[brid partner=56869869 player=32851 video=960834 autoplay=true]

TAGGED:Ashwath NarayanAyodhyaRam MandirramanagaraSilver Brickಅಯೋಧ್ಯೆಅಶ್ವಥ್ ನಾರಾಯಣಬೆಳ್ಳಿ ಇಟ್ಟಿಗೆರಾಮ ಮಂದಿರರಾಮನಗರ
Share This Article
Facebook Whatsapp Whatsapp Telegram

Cinema news

Maharashtra Man Arrest
ಮಹಾರಾಷ್ಟ್ರ ‘ಲವ್ ಟ್ರ್ಯಾಪ್’ ಸಂತ್ರಸ್ತೆ ಆತ್ಮಹತ್ಯೆಗೆ ಯತ್ನ – ಮತ್ತೋರ್ವ ಆರೋಪಿ ಅಂದರ್
Cinema Latest National Top Stories
Atlee
ಹೆಣ್ಣು ಮಗು ಜನಿಸಿದ ಸಂಭ್ರಮದಲ್ಲಿ ನಿರ್ದೇಶಕ ಅಟ್ಲೀ ದಂಪತಿ
Cinema Latest Top Stories
Deepika Padukone Ranveer Singh
2ನೇ ಮಗುವಿನ ನಿರೀಕ್ಷೆಯಲ್ಲಿ ದೀಪಿಕಾ ಪಡುಕೋಣೆ, ರಣವೀರ್‌ ಸಿಂಗ್‌ ದಂಪತಿ
Bollywood Cinema Latest Top Stories
darshan ex manager mallikarjun 2 1
ದರ್ಶನ್‌, ಧ್ರುವ ಸರ್ಜಾ ನಡುವೆ ಮನಸ್ತಾಪಕ್ಕೆ ಕಾರಣ ಯಾರು? – ಮಲ್ಲಿಕಾರ್ಜುನ್‌ ಹೇಳಿದ್ದೇನು?
Bengaluru City Cinema Latest Sandalwood Top Stories

You Might Also Like

In A First Chinese Humanoid Robots Outrun Humans In Beijing Half Marathon Human world record broken Lightning Beijing E Town
Latest

21 ಕಿ.ಮೀ ದೂರವನ್ನು ಜಸ್ಟ್‌ 50 ನಿಮಿಷದಲ್ಲಿ ಓಡಿದ ಚೀನಿ ರೊಬೊಟ್‌ – ಮನುಷ್ಯರ ವಿಶ್ವ ದಾಖಲೆ ಬ್ರೇಕ್‌!

Public TV
By Public TV
23 minutes ago
Rajasthan Refinery Unit Fire
Latest

ನಾಳೆ ಪಿಎಂ ಮೋದಿ ಉದ್ಘಾಟಿಸಬೇಕಿದ್ದ 79,000 ಕೋಟಿ ಮೌಲ್ಯದ ರಿಫೈನರಿ ಘಟಕಕ್ಕೆ ಬೆಂಕಿ

Public TV
By Public TV
1 hour ago
Private Plane Flying 30 Feet Above Ground Crashes Into Tree In Chhattisgarh
Latest

ಮರಕ್ಕೆ ಡಿಕ್ಕಿಯಾಗಿ ಖಾಸಗಿ ವಿಮಾನ ಪತನ

Public TV
By Public TV
2 hours ago
bjp flag
Bengaluru City

ಭ್ರಷ್ಟಾಚಾರವೇ ಕಾಂಗ್ರೆಸ್‌ನ ಅಸಲಿ ಗ್ಯಾರಂಟಿ – ಇಡಿ ದಾಳಿಗೆ ಬಿಜೆಪಿ ಟೀಕೆ

Public TV
By Public TV
2 hours ago
Sadhvi Satish Sail
Latest

ಮಗಳು ಬಿಸಿನೆಸ್ ಮಾಡಲಿ ಅಂತ ಸಿಎಂ, ಡಿಸಿಎಂ ಬಳಿ ಬುದ್ದಿ ಹೇಳಿಸಿದ್ದೆ: ‘ಫೆಮಿನಾ ಮಿಸ್‌ ಇಂಡಿಯಾ’ ಕಿರೀಟ ಗೆದ್ದ ಮಗಳ ಬಗ್ಗೆ ಸತೀಶ್‌ ಸೈಲ್‌ ಮಾತು

Public TV
By Public TV
2 hours ago
Doctor Ramesh who was supposed to marry his wifes sister tomorrow murdered Sirsi KHB Colony
Crime

ಇಂದು ಮದುವೆ ಆಗ್ಬೇಕಿದ್ದ ವೈದ್ಯನ ಹತ್ಯೆ ಕೇಸ್‌ – ಚಿನ್ನದ ಆಸೆಗೆ ಸ್ನೇಹಿತನಿಂದಲೇ ಮರ್ಡರ್‌

Public TV
By Public TV
2 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?