ಬೆಳಗಾವಿ: ಜಿಲ್ಲೆಯ ಬೆಟಗೇರಿ ಗ್ರಾಮದಲ್ಲಿ ಗೋಕಾಕ್ (Gokak) ತಾಲೂಕು 6ನೇ ಜಿಲ್ಲಾ ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ (Kannada Sahitya Sammelana) ಮಾಜಿ ಸಚಿವ ರಮೇಶ್ ಜಾರಕಿಹೊಳಿ (Ramesh Jarkiholi) ಚಾಲನೆ ನೀಡಿದರು.
ಬೆಳಗಾವಿ ಜಿಲ್ಲೆಯ ಗೋಕಾಕ್ ತಾಲೂಕಿನ ಬೆಟಗೇರಿ ಗ್ರಾಮದಲ್ಲಿ 6ನೇ ಜಿಲ್ಲಾ ಕನ್ನಡ ಸಾಹಿತ್ಯ ಸಮ್ಮೇಳನದಲ್ಲಿ ಭುವನೇಶ್ವರಿ ಭಾವಚಿತ್ರಕ್ಕೆ ರಮೇಶ್ ಜಾರಕಿಹೊಳಿ ಪೂಜೆ ಸಲ್ಲಿಸಿ ಮೆರವಣಿಗೆಗೆ ಚಾಲನೆ ನೀಡಿದರು. ಈ ವೇಳೆ ವಿವಿಧ ಕಲಾ ತಂಡಗಳಿಂದ ಗ್ರಾಮದಲ್ಲಿ ಅದ್ಧೂರಿ ಮೆರವಣಿಗೆ ನಡೆಯಿತು. ಇದನ್ನೂ ಓದಿ: ಸತೀಶ್ ಜಾರಕಿಹೊಳಿ ಕ್ಷೇತ್ರದಲ್ಲಿ ಮತ್ತೆ ಮುನ್ನೆಲೆಗೆ ಬಂದ ‘ಹಿಂದೂ’ ವರ್ಡ್ ವಾರ್
ಸಮ್ಮೇಳನದ ಮೆರವಣಿಗೆಯಲ್ಲಿ ಕಸಾಪ ತಾಲೂಕು ಅಧ್ಯಕ್ಷೆ ಭಾರತಿ ಮದಬಾಂವಿ ಅವರು ರಮೇಶ್ ಜಾರಕಿಹೊಳಿಗೆ ಧ್ವಜ ನೀಡಿ ಸ್ವಾಗತಿಸಿದರು. ವಿವಿಧ ಕಲಾ ತಂಡಗಳಿಂದ ಗ್ರಾಮದಲ್ಲಿ ಅದ್ಧೂರಿ ಮೆರವಣಿಗೆ ನಡೆದು ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ ಚಾಲನೆ ದೊರೆತಿದೆ. ಸಾಹಿತ್ಯ ಸಮ್ಮೇಳನದಲ್ಲಿ ಹಲವು ಕಾರ್ಯಕ್ರಮಗಳು ನಡೆಯಲಿದ್ದು, ಕವಿಗೋಷ್ಠಿ, ಚಿಂತನೆ ಸೇರಿದಂತೆ ಹಲವು ಕನ್ನಡ ಪರ ಕಾರ್ಯಕ್ರಮಗಳಲ್ಲಿ ಗಣ್ಯರು ಭಾಗವಹಿಸಲಿದ್ದಾರೆ. ಇದನ್ನೂ ಓದಿ: ನಾಡು, ನುಡಿಗಾಗಿ ರಾಜಕಾರಣಿಗಳು ಏನೂ ಮಾಡಿಲ್ಲ.. ಕನ್ನಡ ಕಾರ್ಯಕ್ರಮಗಳಿಗೆ ಅವರನ್ನ ಕರೆಯಲ್ಲ – ಕರವೇ ಅಧ್ಯಕ್ಷ