ಬೆಂಗಳೂರು: ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ (D.K.Shivakumar) ಮಾಲೀಕತ್ವದ ಶಿಕ್ಷಣ ಸಂಸ್ಥೆ ಮೇಲೆ ಸಿಬಿಐ (CBI) ಅಧಿಕಾರಿಗಳ ತಂಡ ದಾಳಿ ನಡೆಸಿದೆ.
ಇಲ್ಲಿನ ರಾಜರಾಜೇಶ್ವರಿ ನಗರದಲ್ಲಿರುವ ಗ್ಲೋಬಲ್ ಕಾಲೇಜಿನ (Global College) ಮೇಲೆ ಸಿಬಿಐ ದಾಳಿ ನಡೆಸಿದ್ದು, ದಾಖಲೆಗಳನ್ನು ಪರಿಶೀಲಿಸುತ್ತಿದೆ. ಆಸ್ತಿ ಮೌಲ್ಯಮಾಪನ ಕಾರ್ಯ ನಡೆಸಲಾಗುತ್ತಿದೆ. ಇದನ್ನೂ ಓದಿ: ಬೆಳಗಾವಿಯಲ್ಲಿ MES ಪುಂಡರಿಂದ ನಾಡದ್ರೋಹಿ ಘೋಷಣೆ – 20ಕ್ಕೂ ಹೆಚ್ಚು ಮಂದಿ ವಶ
ಕಳೆದೆರಡು ತಿಂಗಳ ಹಿಂದೆ ರಾಮನಗರದಲ್ಲಿ ಮೌಲ್ಯಮಾಪನ ಮಾಡಲಾಗಿತ್ತು. ಸಿಬಿಐ ಅಧಿಕಾರಿಗಳು ಈಗ ಡಿಕೆಶಿ ಮಾಲೀಕತ್ವದ ಎಲ್ಲಾ ಆಸ್ತಿಗಳ ಮೌಲ್ಯಮಾಪನ ಮಾಡುತ್ತಿದ್ದಾರೆ. ಅಕ್ರಮ ಆಸ್ತಿಗೆ ಸಂಬಂಧಿಸಿದಂತೆ ಮೌಲ್ಯಮಾಪನ ನಡೆಸಲಾಗುತ್ತಿದೆ.
ಗ್ಲೋಬಲ್ ಕಾಲೇಜಿಗೆ ಡಿ.ಕೆ.ಶಿವಕುಮಾರ್ ಅಧ್ಯಕ್ಷರಾಗಿದ್ದು, ಅವರ ಪುತ್ರಿ ಐಶ್ವರ್ಯ ಅವರು ಕಾರ್ಯದರ್ಶಿಯಾಗಿದ್ದಾರೆ. ಇದನ್ನೂ ಓದಿ: ಜೆಡಿಎಸ್‌ನ 93 ಅಭ್ಯರ್ಥಿಗಳ ಪಟ್ಟಿ ಬಿಡುಗಡೆ – ಯಾವ ಕ್ಷೇತ್ರದಲ್ಲಿ ಯಾರಿಗೆ ಟಿಕೆಟ್?
2013 ರಿಂದ 2018ರ ವರೆಗೆ ಆದಾಯಕ್ಕಿಂತ ಹೆಚ್ಚಿನ ಆಸ್ತಿ ಹೊಂದಿದ್ದ ಹಿನ್ನೆಲೆಯಲ್ಲಿ 2020ರ ಅಕ್ಟೋಬರ್ ತಿಂಗಳಲ್ಲೂ ಸಿಬಿಐ ದಾಳಿ ನಡೆಸಿತ್ತು. 74.92 ಕೋಟಿ ಆದಾಯಕ್ಕಿಂತ ಹೆಚ್ಚಿನ ಆಸ್ತಿ ಹೊಂದಿದ್ದ ಆರೋಪದಡಿ ಎಫ್‌ಐಆರ್ ದಾಖಲಿಸಿದ್ದ ಸಿಬಿಐ, ಡಿಕೆಶಿ ಮತ್ತು ಡಿ.ಕೆ.ಸುರೇಶ್ ಸೇರಿದಂತೆ 14 ಸ್ಥಳಗಳಲ್ಲಿ ದಾಳಿ ನಡೆಸಿತ್ತು.