ನವದೆಹಲಿ: ಲೈಂಗಿಕತೆಗೆ ಒಪ್ಪಿಗೆಯ ವಯಸ್ಸನ್ನು ಕಡಿಮೆ ಮಾಡುವ ಯಾವುದೇ ಯೋಜನೆಯನ್ನು ಕೇಂದ್ರ ಹೊಂದಿಲ್ಲ ಎಂದು ಕೇಂದ್ರ ಸಚಿವೆ ಸ್ಮೃತಿ ಇರಾನಿ ತಿಳಿಸಿದರು.
ಈ ವಯಸ್ಸನ್ನು 18 ರಿಂದ 16 ವರ್ಷಕ್ಕೆ ಬಸಲಾಯಿಸುವ ಕುರಿತು ರಾಜ್ಯಸಭೆಯಲ್ಲಿ (Rajya Sabha) ಸಿಪಿಐ ಸಂಸದ ಬಿನೋಯ್ ವಿಶ್ವಂ ಕೇಳಿದ ಪ್ರಶ್ನೆಗೆ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವೆ ಸ್ಮೃತಿ ಇರಾನಿ (Smriti Irani) ಲಿಖಿತ ಉತ್ತರ ನೀಡಿದರು. ಮಕ್ಕಳನ್ನು ಲೈಂಗಿಕ ದೌರ್ಜನ್ಯದಿಂದ ರಕ್ಷಿಸಲು ಪೋಸ್ಕೋ ಕಾಯಿದೆ 2012 ಅಡಿಯಲ್ಲಿ ವಯಸ್ಸು ನಿಗದಿಪಡಿಸಲಾಗಿದೆ. ಈ ಬಗ್ಗೆ ಪ್ರಶ್ನೆ ಉದ್ಭವಿಸುವುದೇ ಇಲ್ಲ ಎಂದು ತಿಳಿಸಿದರು.
ವಿಶೇಷ ನ್ಯಾಯಾಲಯದ ಮುಂದೆ ಯಾವುದೇ ವಿಚಾರಣೆಯ ಇಂತಹ ಪ್ರಶ್ನೆ ಉದ್ಭವಿಸಿದರೆ, ಅಂತಹ ಪ್ರಶ್ನೆಯನ್ನು ನ್ಯಾಯಾಲಯವು ನಿರ್ಧರಿಸುತ್ತದೆ ಎಂದು ಹೇಳಿದರು. ಸರ್ಕಾರದ ನಿಲುವನ್ನು ದೃಢವಾಗಿ ಮಂಡಿಸಿದ ಕಾರಣ ಈ ಪ್ರತಿಕ್ರಿಯೆ ಮಹತ್ವ ಪಡೆದಿತ್ತು.
ಡಿ.11ರಂದು ಸಿಜೆಐ ಡಿವೈ ಚಂದ್ರಚೂಡ್ ಅವರು ಪೋಕ್ಸ್ ಕಾಯ್ದೆ ಅನ್ವಯ ಒಪ್ಪಿಗೆಯ ವಯಸ್ಸಿನ ಬಗ್ಗೆ ಹೆಚ್ಚುತ್ತಿರುವ ಕಾಳಜಿಯ ಸರ್ಕಾರದ ನಿಲುವು ತಿಳಿಸುವಂತೆ ಸೂಚಿಸಿದ್ದರು. ಇದನ್ನೂ ಓದಿ: ಕಾಫಿನಾಡಲ್ಲಿ ಲವರ್ಸ್ ಆತ್ಮಹತ್ಯೆ ಪ್ರಕರಣಕ್ಕೆ ಟ್ವಿಸ್ಟ್ – ಪ್ರೇಮಿಗಳ ಸಾವಿಗೆ ಮೂರನೇಯವಳು ಕಾರಣ?
ಅಪ್ರಾಪ್ತ ವಯಸ್ಕರಲ್ಲಿ ವಾಸ್ತವಿಕವಾಗಿ ಸಮ್ಮತಿ ಇದೆಯೇ ಎಂಬುದನ್ನು ಕಾಯ್ಕೆ ಪರಿಗಣಿಸುವುದಿಲ್ಲ. 18 ವರ್ಷದೊಳಗಿನ ಮಕ್ಕಳ ಮೇಲೆ ನಡೆಯುವ ಎಲ್ಲಾ ಲೈಂಗಿಕ ಕ್ರಿಯೆಯನ್ನು ಅಪರಾಧ ಎಂದೇ ಕಾಯ್ದೆ ಹೇಳುತ್ತದೆ. ಇದನ್ನೂ ಓದಿ: ಅಪ್ರಾಪ್ತ ವಿದ್ಯಾರ್ಥಿನಿಯರಿಗೆ ಲೈಂಗಿಕ ಕಿರುಕುಳ ಆರೋಪ – ವಸತಿ ಶಾಲೆಯ ಪ್ರಾಂಶುಪಾಲ ಬಂಧನ