ನವದೆಹಲಿ: ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ (Nirmala Sitharaman) ಅವರು ಇಂದು ದೆಹಲಿಯ ಆಲ್ ಇಂಡಿಯಾ ಇನ್ಸ್ಟಿಟ್ಯೂಟ್ ಆಫ್ ಮೆಡಿಕಲ್ ಸೈನ್ಸಸ್ನ (AIIMS) ಆಸ್ಪತ್ರೆಗೆ (Hospital) ದಾಖಲಾಗಿದ್ದರು. ಸಣ್ಣಮಟ್ಟದ ಹೊಟ್ಟೆ ಸಂಬಂಧಿ ಸಮಸ್ಯೆಯ ಹಿನ್ನೆಲೆ ಸಚಿವೆ ಆಸ್ಪತ್ರೆ ದಾಖಲಾಗಿದ್ದು, ಅವರ ಸ್ಥಿತಿ ಇದೀಗ ಸ್ಥಿರವಾಗಿದೆ ಎಂದು ಮೂಲಗಳು ತಿಳಿಸಿವೆ.
ಸಚಿವೆ ಹೊಟ್ಟೆ ಸಂಬಂಧಿ ಸಮಸ್ಯೆಗೆ ರುಟಿನ್ ಚೆಕಪ್ಗಾಗಿ (Routine Checkup) ಆಸ್ಪತ್ರೆ ದಾಖಲಾಗಿದ್ದು, ಖಾಸಗಿ ವಾರ್ಡ್ನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಅವರನ್ನು ಮಧ್ಯಾಹ್ನ 12 ಗಂಟೆ ಸುಮಾರಿಗೆ ಆಸ್ಪತ್ರೆಗೆ ಕರೆದುಕೊಂಡು ಹೋಗಲಾಗಿದ್ದು, ಅವರು ಶೀಘ್ರವೇ ಡಿಸ್ಚಾರ್ಜ್ ಆಗುವ ಸಾಧ್ಯತೆಯಿದೆ. ಇದನ್ನೂ ಓದಿ: ಸಾಲ ವಂಚನೆ ಪ್ರಕರಣ – ವೀಡಿಯೋಕಾನ್ ಅಧ್ಯಕ್ಷ ವೇಣುಗೋಪಾಲ್ ಧೂತ್ ಬಂಧನ
ಸೀತಾರಾಮನ್ ಶನಿವಾರ ಚೆನ್ನೈನಲ್ಲಿರುವ ತಮಿಳುನಾಡು ಡಾ. ಎಂಜಿಆರ್ ವೈದ್ಯಕೀಯ ವಿಶ್ವವಿದ್ಯಾಲಯದ 35 ನೇ ವಾರ್ಷಿಕ ಘಟಿಕೋತ್ಸವದಲ್ಲಿ ಭಾಗವಹಿಸಿದ್ದರು. ನಿನ್ನೆ ಅವರು ಮಾಜಿ ಪ್ರಧಾನಿ ಅಟಲ್ ಬಿಹಾರಿ ವಾಜಪೇಯಿ ಅವರ ಜನ್ಮದಿನದ ಹಿನ್ನೆಲೆ ನವದೆಹಲಿಯ ‘ಸದೈವ್ ಅಟಲ್’ನಲ್ಲಿ ಪುಷ್ಪ ನಮನ ಸಲ್ಲಿಸಿದ್ದರು. ಇದನ್ನೂ ಓದಿ: ಕಾಂಗ್ರೆಸ್ ಶಾಸಕನ ಬಂಗಲೆಯಲ್ಲಿ ವಿದ್ಯಾರ್ಥಿ ಆತ್ಮಹತ್ಯೆ