ನವದೆಹಲಿ: 2023 ಹೊಸ ವರ್ಷದ (Newyear 2023) ಮೊದಲದಿನವೇ ತೈಲ ಕಂಪನಿಗಳು ವಾಣಿಜ್ಯ ಬಳಕೆಯ ಎಲ್‌ಪಿಜಿ (Commercial LPG) ಸಿಲಿಂಡರ್‌ಗಳ ದರವನ್ನು 25 ರೂ.ಗಳಷ್ಟು ಹೆಚ್ಚಿಸಿದೆ.
नए साल का पहला गिफ्ट ????????
कॉमर्शियल गैस सिलेंडर 25 रुपए महंगा हो गया।
अभी तो ये शुरुआत है…#HappyNewYear
— Congress (@INCIndia) January 1, 2023
ಹೊಸ ದರದ ಪ್ರಕಾರ 19 ಕೆಜಿಯ ವಾಣಿಜ್ಯ ಸಿಲಿಂಡರ್ ಕರ್ನಾಟಕ ರಾಜ್ಯದ ಬೆಂಗಳೂರಿನಲ್ಲಿ 1,685.5 ರೂ., ದೆಹಲಿಯಲ್ಲಿ (NewDelhi) 1,768 ರೂ., ಮುಂಬೈನಲ್ಲಿ (Mumbai) 1,721 ರೂ., ಕೋಲ್ಕತ್ತಾದಲ್ಲಿ 1,870 ರೂ. ಮತ್ತು ಚೆನ್ನೈನಲ್ಲಿ 1,971 ರೂ. ಏರಿಕೆಯಾಗಿದೆ. ಗೃಹ ಬಳಕೆಯ ಸಿಲಿಂಡರ್‌ಗಳ ಬೆಲೆ ಯಥಾ ಸ್ಥಿತಿಯಲ್ಲಿ ಮುಂದುವರಿಯಲಿದೆ. ಸಿಲಿಂಡರ್ ದರ ಏರಿಕೆಯಿಂದ ರೆಸ್ಟೋರೆಂಟ್ ಹಾಗೂ ಹೋಟೆಲ್ ಸೇವೆಗಳ ದರ ಏರಿಕೆಯಾಗುವ ಸಾಧ್ಯತೆಯಿದೆ.
ಕಾಂಗ್ರೆಸ್ ಟೀಕೆ:
`ಹೊಸ ವರ್ಷದ ಮೊದಲ ದಿನವೇ ವಾಣಿಜ್ಯ ಎಲ್‌ಪಿಜಿ ದರ ಏರಿಕೆಯಾಗಿದ್ದು, ಇದು ಬಿಜೆಪಿ (BJP) ನೇತೃತ್ವದ ಕೇಂದ್ರ ಸರ್ಕಾರದ (Government Of India) ಉಡುಗೊರೆ, ಇದು ಕೇವಲ ಆರಂಭ ಅಷ್ಟೇ’ ಎಂದು ಹಿಂದಿಯಲ್ಲಿ ಟ್ವೀಟ್ ಮಾಡಿ ಕಾಂಗ್ರೆಸ್ ತೀವ್ರ ವಾಗ್ದಾಳಿ ನಡೆಸಿದೆ. ಇದನ್ನೂ ಓದಿ: ಆಧುನಿಕ ಭಾರತದ ಪಿತಾಮಹ ದೇಶಕ್ಕಾಗಿ ಏನ್ ಮಾಡಿದ್ದಾರೆ – ನಿತೀಶ್ ಕುಮಾರ್ ಪ್ರಶ್ನೆ
2014ರಿಂದ ಬಿಜೆಪಿ ಅಧಿಕಾರಕ್ಕೆ ಬಂದ ನಂತರ 410 ರೂ. ಇದ್ದ ಗೃಹ ಬಳಕೆಯ ಎಲ್‌ಪಿಜಿ ಸಿಲಿಂಡರ್ 1,000ಕ್ಕೆ ಏರಿಕೆಯಾಗಿದೆ. ಅಲ್ಲದೇ ಅಗತ್ಯ ವಸ್ತುಗಳ ಬೆಲೆಯೂ ಏರಿಕೆಯಾಗಿದ್ದು, ಕುಟುಂಬಗಳ ಮೇಲೆ ಆರ್ಥಿಕ ಒತ್ತಡ ಬೀಳುತ್ತಿದೆ. ಆದರೆ ಇಂಧನ ಬೆಲೆ ಏರಿಕೆ ಬಗ್ಗೆ ಪ್ರಶ್ನಿಸಿದಾಗೆಲ್ಲಾ ಬಿಜೆಪಿ ಸರ್ಕಾರವು ಕಚ್ಚಾ ತೈಲದ ಅಂತಾರಾಷ್ಟ್ರೀಯ ಮಾರುಕಟ್ಟೆ ದರಗಳನ್ನು ತೋರಿಸಿದೆ. ಈಗ ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿ ದರ ಇಳಿಕೆಯಾಗಿದ್ದರೂ ಏಕೆ ಕಡಿತಗೊಳಿಸಿಲ್ಲ ಎಂದು ಪ್ರತಿಪಕ್ಷಗಳು ಪ್ರಶ್ನಿಸಿವೆ.
ನವೆಂಬರ್ 1 ರಂದು ವಾಣಿಜ್ಯ ಬಳಕೆಯ ಸಿಲಿಂಡರ್ ಬೆಲೆ 115 ರೂ. ಇಳಿಕೆಯಾಗಿತ್ತು. ಇದನ್ನೂ ಓದಿ: ಹೊಸ ವರ್ಷಾಚರಣೆ ನಡುವೆ ಮೈಮರೆತ ಪ್ರೇಮಿಗಳು – ರಸ್ತೆ ಬ್ಲಾಕ್‍ಮಾಡಿ ನೋಡ್ಕೊಂಡು ನಿಂತಿದ್ದವರ ಮೇಲೆ ಲಾಠಿಚಾರ್ಜ್