`ನಂದಿನಿ’ ಕನ್ನಡಿಗರ ಜೀವನಾಡಿ, ಅದರ ತಂಟೆಗೆ ಬಂದ್ರೆ ಬಿಜೆಪಿ ಭಸ್ಮವಾಗುತ್ತೆ HDK ಎಚ್ಚರಿಕೆ

Public TV
3 Min Read
HDKumaraswamy

ಬೆಂಗಳೂರು: `ನಂದಿನಿ’ (Nandini) ಕನ್ನಡಿಗರ ಜೀವನಾಡಿ. ಅದರ ತಂಟೆಗೆ ಬಂದರೆ ಬಿಜೆಪಿ (BJP) ಭಸ್ಮವಾಗುತ್ತದೆ. ಕರ್ನಾಟಕವನ್ನು ಆಕ್ರಮಣ ಮಾಡಿಕೊಳ್ಳುವ ಹಾಗೂ ಆರ್ಥಿಕ, ಕೈಗಾರಿಕಾ ಕ್ಷೇತ್ರಗಳಲ್ಲಿ ರಾಜ್ಯವನ್ನು ಹತ್ತಿಕ್ಕುವ ಹುನ್ನಾರ ಯಶಸ್ಸು ಕಾಣದು ಎಂದು ಮಾಜಿ ಸಿಎಂ ಹೆಚ್.ಡಿ ಕುಮಾರಸ್ವಾಮಿ (HD Kumaraswamy) ಎಚ್ಚರಿಕೆ ನೀಡಿದ್ದಾರೆ.

`ಗುಜರಾತ್‌ನ `ಅಮೂಲ್’ (Amul) ಜತೆ ಕರ್ನಾಟಕದ `ನಂದಿನಿ’ಯನ್ನು (KMF) ಒಂದುಗೂಡಿಸಲು ಮುಂದಿನ ದಿನಗಳಲ್ಲಿ ಕ್ರಮ ಕೈಗೊಳ್ಳಲಾಗುವುದು’ ಎಂಬ ಕೇಂದ್ರ ಗೃಹ ಸಚಿವ ಅಮಿತ್ ಶಾ (Amit Shah) ಹೇಳಿಕೆ ವಿರುದ್ಧ ಸರಣಿ ಟ್ವೀಟ್‌ಗಳ ಮೂಲಕ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಇದನ್ನೂ ಓದಿ: ಸಾಲ ಮಾಡಿ ವಿದೇಶಕ್ಕೆ ಪರಾರಿ – ಫೆಬ್ರವರಿಯಲ್ಲಿ ನೀರವ್‌ ಮೋದಿ ಆಸ್ತಿ ಹರಾಜು

ಟ್ವೀಟ್ ನಲ್ಲಿ ಏನಿದೆ?
ನೆಲ, ಜಲ, ನುಡಿಯ ಬಗ್ಗೆ ಕನ್ನಡ ಮತ್ತು ಕರ್ನಾಟಕದ ಮೇಲೆ ಸದಾ ಪ್ರಹಾರ ನಡೆಸುತ್ತಿರುವ ಬಿಜೆಪಿ ಕನ್ನಡಿಗರ ವಿರುದ್ಧ ತನ್ನ ರಕ್ಕಸ ನೀತಿಗಳನ್ನು ಮುಂದುವರಿಸಿದೆ. ಈಗ ಕರ್ನಾಟಕದ ಹಾಲಿನಲ್ಲೂ ಗುಜರಾತಿನ ಹುಳಿ ಹಿಂಡಲು ಕೇಂದ್ರ ಗೃಹ ಸಚಿವ ಅಮಿತ್ ಶಾ ಹೊರಟಿದ್ದಾರೆ.

ಕನ್ನಡದ ಮೇಲೆ ಹಿಂದಿ ಹೇರಿಕೆ ಮಾಡಲು ಹೊರಟ ವ್ಯಕ್ತಿ, ಗಡಿ ವಿಚಾರದಲ್ಲಿ ಮಹಾರಾಷ್ಟ್ರದ ಕಿವಿ ಹಿಂಡದ ವ್ಯಕ್ತಿ ಈಗ ಕನ್ನಡ ನೆಲದ ಮಣ್ಣಿನಮಕ್ಕಳ ಜೀವನಾಡಿ ಕರ್ನಾಟಕ ಹಾಲು ಮಹಾ ಮಂಡಳಿ (KMF – ನಂದಿನಿ) ಯನ್ನು ಗುಜರಾತಿನ ಅಮುಲ್ ನಲ್ಲಿ ವಿಲೀನ ಮಾಡುವ ಹೇಳಿಕೆ ನೀಡಿರುವುದು ಕನ್ನಡಿಗರಿಗೆ ಮಾಡಲು ಹೊರಟಿರುವ ಘೋರ ಅನ್ಯಾಯ.

ಕರ್ನಾಟಕ (Karnataka) ರಾಜ್ಯವನ್ನು ಗುಜರಾತ್ (Gujarat) ಮಾಡುವ ಧೂರ್ತ ಹುನ್ನಾರ ಇದು. ಅಷ್ಟೇ ಅಲ್ಲ, ಗುಜರಾತ್ ಗೆ ಕರ್ನಾಟಕವೇ ಪ್ರತಿಸ್ಪರ್ಧಿ ಎನ್ನುವ ಕಾರಣಕ್ಕೆ ಅಭಿವೃದ್ಧಿಯಲ್ಲಿ ಕರ್ನಾಟಕವನ್ನು ಮುಗಿಸೇಬೀಡಬೇಕು ಎನ್ನುವ ದುರಾಲೋಚನೆ ಅಮಿತ್ ಶಾ ಅವರಿಗೆ ಸ್ಪಷ್ಟವಾಗಿ ಇದ್ದಂತಿದೆ. ಇದನ್ನೂ ಓದಿ: ಚಲಿಸುತ್ತಿದ್ದ ಬೈಕ್‌ಟ್ಯಾಂಕ್ ಮೇಲೆ ಕುಳಿತು ಪ್ರಿಯಕರನೊಂದಿಗೆ ರೊಮ್ಯಾನ್ಸ್ – ಪೊಲೀಸರು ಕೊಟ್ರು ಶಾಕ್

ದೇಶದ ಬೇರಾವ ರಾಜ್ಯದ ಮೇಲೆಯೂ ಇಲ್ಲದ ಅಸಹನೆ, ಅಸೂಯೆ, ವೈಷಮ್ಯ ಕರ್ನಾಟಕದ ಮೇಲೇಕೆ ಅಮಿತ್ ಶಾ ಅವರೇ ಎಂದು ನಾನು ಕೇಳುತ್ತಿದ್ದೇನೆ. ಕನ್ನಡಿಗರನ್ನು ಶತ್ರುಗಳಂತೆ ನೋಡುತ್ತಿದ್ದಾರೆ. ಕನ್ನಡಿಗರನ್ನು ಗುಜರಾತಿನ ಗುಲಾಮರನ್ನಾಗಿ ಮಾಡಲು ಶಾ ಅವರು ಷಡ್ಯಂತ್ರ ರೂಪಿಸಿದ್ದಾರೆ ಎನ್ನುವುದು ನನ್ನ ಅನುಮಾನ.

ನಂದಿನಿ ಕನ್ನಡಿಗರ ಜೀವನಾಡಿ. ಅದರ ತಂಟೆಗೆ ಬಂದರೆ ಬಿಜೆಪಿ ಭಸ್ಮವಾಗುತ್ತದೆ. ಇಡೀ ದೇಶವನ್ನೇ ಆಳಿದ ಕನ್ನಡಿಗರು ಯಾರೊಬ್ಬರ ಗುಲಾಮರಲ್ಲ. ಕರ್ನಾಟಕವನ್ನು ಆಕ್ರಮಣ ಮಾಡಿಕೊಳ್ಳುವ ಹಾಗೂ ಆರ್ಥಿಕ, ಕೈಗಾರಿಕೆ ಕ್ಷೇತ್ರಗಳಲ್ಲಿ ರಾಜ್ಯವನ್ನು ಹತ್ತಿಕ್ಕುವ ಹುನ್ನಾರ ಯಶಸ್ಸು ಕಾಣದು. ಬಿಜೆಪಿಯ ಬ್ರಹ್ಮರಾಕ್ಷಸ ರೂಪ ಕನ್ನಡಿಗರಿಗೆ ಈಗ ಅರಿವಾಗುತ್ತಿದೆ.

ಬ್ಯಾಂಕಿಂಗ್ ಕ್ಷೇತ್ರದಲ್ಲಿ ದೇಶಕ್ಕೇ ಮಾದರಿಯಾಗಿದ್ದ ಕರ್ನಾಟಕವನ್ನು ಉತ್ತರ ಭಾರತದ ಬ್ಯಾಂಕ್ ಗಳಿಗೆ ಅಡಿಯಾಳನ್ನಾಗಿಸಿ, ಹಿಂದಿ ಭಾಷಿಗರ ಉದ್ಧಾರಕ್ಕಾಗಿ ಕನ್ನಡಿಗರ ಅನ್ನ ಕಸಿದುಕೊಂಡ ಬಿಜೆಪಿ, ಈಗ ನಂದಿನಿಯನ್ನು ಹೊಡೆದುಕೊಂಡು ಹೋಗಲು ಹಿಡನ್ ಅಜೆಂಡಾ ರೂಪಿಸಿದಂತಿದೆ. ಕರ್ನಾಟಕ ಎಂದಿಗೂ ಗುಜರಾತಿನ ವಸಾಹತು ಆಗುವುದಿಲ್ಲ.

ಅಮುಲ್ ಜತೆ ನಂದಿನಿ ವಿಲೀನ ಸಾಧ್ಯವಿಲ್ಲ. ನಮ್ಮ ರೈತರ ಅನ್ನ ಕಸಿಯುವ ಕೆಲಸವನ್ನು ಸಹಿಸುವ ಪ್ರಶ್ನೆಯೇ ಇಲ್ಲ. ಕೆಎಂಎಫ್ ಕನ್ನಡಿಗರ ಜೀವನಾಡಿ ಮಾತ್ರವಲ್ಲ, ಸಮಸ್ತ ಕನ್ನಡಿಗರ ಆಸ್ತಿ ಮತ್ತು ಅಸ್ಮಿತೆ. ಅಮಿತ್ ಶಾ ಅವರು ಇದೆಲ್ಲವನ್ನು ಅರ್ಥ ಮಾಡಿಕೊಂಡರೆ ಒಳ್ಳೆಯದು ಎಂದು ಎಚ್ಚರಿಕೆ ನೀಡಿದ್ದಾರೆ.

ಶಾ ಹೇಳಿದ್ದೇನು?
ಇತ್ತೀಚೆಗೆ ಮಂಡ್ಯದಲ್ಲಿ ನಡೆದ ಮಿಲ್ಕ್ ಡೈರಿ ಉದ್ಘಾಟನಾ ಕಾರ್ಯಕ್ರಮದಲ್ಲಿ ಅಮಿತ್ ಶಾ, ಗುಜರಾತ್‌ನ `ಅಮೂಲ್’ ಜತೆ ಕರ್ನಾಟಕದ `ನಂದಿನಿ’ಯನ್ನು ಒಂದುಗೂಡಿಸಲು ಮುಂದಿನ ದಿನಗಳಲ್ಲಿ ಕ್ರಮ ಕೈಗೊಳ್ಳಲಾಗುವುದು ಎಂದು ಹೇಳಿದ್ದರು.

ಗುಜರಾತ್‌ನಲ್ಲಿ ಸಹಕಾರ ಒಕ್ಕೂಟವು ಪ್ರಗತಿಯ ಹಾದಿಯಲ್ಲಿದೆ. ಹಾಗೆಯೇ 1975 ರಿಂದಲೂ ಕೆಎಂಎಫ್ ಕೂಡ ಅಭಿವೃದ್ಧಿ ಹೊಂದುತ್ತಿದೆ. ಅಮೂಲ್ ಹಾಗೂ ನಂದಿನಿ ಒಂದಾದರೆ ಕರ್ನಾಟಕದ ಹಾಲು ಉತ್ಪಾದಕರಿಗೆ ಇನ್ನಷ್ಟು ಅನುಕೂಲವಾಗುತ್ತದೆ. ಮುಂದಿನ ಮೂರು ವರ್ಷಗಳಲ್ಲಿ ದೇಶದಲ್ಲಿ 2 ಲಕ್ಷಕ್ಕೂ ಅಧಿಕ ಪ್ರಾಥಮಿಕ ಡೈರಿಗಳನ್ನು ಗ್ರಾಮ ಪಂಚಾಯಿತಿ ಮಟ್ಟದಲ್ಲಿ ಸ್ಥಾಪನೆ ಮಾಡಲಾಗುವುದು. ಆ ಮೂಲಕ ಹಾಲಿನ ಉತ್ಪನ್ನಗಳನ್ನು ಇತರ ರಾಷ್ಟ್ರಗಳಿಗೆ ರಫ್ತು ಮಾಡುವ ಗುರಿ ಹೊಂದಲಾಗಿದೆ ಎಂದು ತಿಳಿಸಿದ್ದರು.

Live Tv
[brid partner=56869869 player=32851 video=960834 autoplay=true]

Share This Article
Leave a Comment

Leave a Reply

Your email address will not be published. Required fields are marked *