ಚಿಕ್ಕೋಡಿ: ವಿಜಯಪುರ ಜ್ಞಾನ ಯೋಗಾಶ್ರಮದ ಸಿದ್ದೇಶ್ವರ ಸ್ವಾಮೀಜಿ (Siddeshwar Swamiji) ಅನಾರೋಗ್ಯ ಹಿನ್ನೆಲೆಯಲ್ಲಿ ಸಿದ್ದೇಶ್ವರ ಸ್ವಾಮೀಜಿಗಳ ಆರೋಗ್ಯ (Health) ಚೇತರಿಕೆಗಾಗಿ ಬೆಳಗಾವಿ ಜಿಲ್ಲೆಯ ಹುಕ್ಕೇರಿ ಹಿರೇಮಠದಲ್ಲಿ (Hukkeri Hiremath) ಮಹಾಮೃತ್ಯುಂಜಯ ಹೋಮ ನಡೆಸಲಾಯಿತು.
ಹಿರೇಮಠದ ಚಂದ್ರಶೇಖರ್ ಶಿವಾಚಾರ್ಯ ಮಹಾಸ್ವಾಮೀಜಿಗಳ ನೇತೃತ್ವದಲ್ಲಿ ನಡೆದ ಮಹಾಮೃತ್ಯಂಜಯ ಹೋಮದಲ್ಲಿ 20ಕ್ಕೂ ಹೆಚ್ಚು ವೇದು ವಟುಗಳು ಭಾಗಿಯಾಗಿದ್ದರು. ಸಿದ್ದೇಶ್ವರ ಸ್ವಾಮೀಜಿ ಗುಣಮುಖರಾಗಲಿ ಎಂದು ಮಹಾಮೃತ್ಯುಂಜಯ ಜಪ ಪಠಿಸಿ ಹೋಮ ಮಾಡಿ ಪ್ರಾರ್ಥನೆ ಮಡಲಾಯಿತು. ಇದನ್ನೂ ಓದಿ: ಸಿದ್ದೇಶ್ವರ ಸ್ವಾಮೀಜಿ ನನ್ನನ್ನು ಗುರುತು ಹಿಡಿದರು : ಬೊಮ್ಮಾಯಿ
ಈ ಸಂದರ್ಭದಲ್ಲಿ ಮಾತನಾಡಿದ ಹುಕ್ಕೇರಿ ಹಿರೇಮಠದ ಚಂದ್ರಶೇಖರ್ ಶಿವಾಚಾರ್ಯ ಮಹಾಸ್ವಾಮೀಜಿ, ಸಿದ್ದೇಶ್ವರ ಶ್ರೀಗಳು ಹುಕ್ಕೇರಿ ಹಿರೇಮಠದೊಂದಿಗೆ ಅವಿನಾಭಾವ ಸಂಬಂಧ ಹೊಂದಿದ್ದರು. ಶ್ರೀಗಳ ಆರೋಗ್ಯ ಚೇತರಿಕೆಯಾಗುತ್ತಿದ್ದು, ಯಾರು ಭಯ ಪಡುವ ಆತಂಕವಿಲ್ಲ. ಸುಳ್ಳು ಸುದ್ದಿಗಳಿಗೆ ಭಕ್ತರು ಕಿವಿಗೊಡೋದು ಬೇಡ. ಶ್ರೀಗಳು ಗುಣಮುಖರಾಗಲಿ. ಎಲ್ಲರೂ ಮನೆಗಳಲ್ಲಿ ಪ್ರಾರ್ಥನೆ ಪೂಜೆ ಮಾಡುವಂತೆ ಮನವಿ ಮಾಡಿದರು. ಇದನ್ನೂ ಓದಿ: ನಡೆದಾಡುವ ದೇವರು ಸಿದ್ದೇಶ್ವರ ಶ್ರೀಗಳ ಆರೋಗ್ಯ ಸ್ಥಿರ- ಭಕ್ತರಿಗೆ ದರ್ಶನ