ಸಮಂತಾ ಬಗ್ಗೆ ಹೀಗ್ಯಾಕೆ ಹೇಳಿದ್ರು ರಶ್ಮಿಕಾ ಮಂದಣ್ಣ

Public TV
1 Min Read
rashmika mandanna

ನ್ಯಾಷನಲ್ ಕ್ರಶ್ ರಶ್ಮಿಕಾ ಮಂದಣ್ಣ (Rashmika Mandanna) `ವಾರಿಸು’ (Varisu) ಸಿನಿಮಾ ಪ್ರಚಾರ ಕಾರ್ಯದಲ್ಲಿ ಬ್ಯುಸಿಯಾಗಿದ್ದಾರೆ. ಈ ನಡುವೆ ಸಮಂತಾ (Samantha) ಆರೋಗ್ಯದ ಬಗ್ಗೆ ಮಾತನಾಡಿದ್ದಾರೆ. ನಾನು ಯಾವಾಗಲೂ ಸಮಂತಾ ಪರವಾಗಿಯೇ ಇದ್ದೇನೆ ಎಂದು ಹೇಳಿದ್ದಾರೆ.

rashmika mandanna 1

`ಪುಷ್ಪ’ (Pushpa) ಸಿನಿಮಾದಲ್ಲಿ ಸಮಂತಾ ಮತ್ತು ರಶ್ಮಿಕಾ ಇಬ್ಬರೂ ಕಮಾಲ್ ಮಾಡಿದ್ದರು. ಈ ಚಿತ್ರದ ಮೂಲಕ ಇಬ್ಬರ ನಡುವೆ ಒಂದೊಳ್ಳೆ ಬಾಡಿಂಗ್ ಕ್ರಿಯೆಟ್ ಆಗಿತ್ತು. ಇದೀಗ `ವಾರಿಸು’ ಚಿತ್ರದ ಪ್ರಚಾರದ ವೇಳೆ ಸಮಂತಾ ಆರೋಗ್ಯದ ಬಗ್ಗೆ ರಶ್ಮಿಕಾ ಮಂದಣ್ಣ ರಿಯಾಕ್ಟ್ ಮಾಡಿದ್ದಾರೆ. ಇದನ್ನೂ ಓದಿ:ನಾನಿಲ್ಲಿ ಗೆದ್ದಿರುವಂಥದ್ದು ನಿಮ್ಮಿಂದ, ನೀವು ನನ್ನನ್ನು ಗೆಲ್ಲಿಸಿದ್ದೀರಿ: ರೂಪೇಶ್ ಶೆಟ್ಟಿ

ಸಮಂತಾ ವಿಚಾರದಲ್ಲಿ ನಾನು ಪೊಸೆಸಿವ್ ಎಂದು ರಶ್ಮಿಕಾ ಹೇಳಿದ್ದು, ನಾನು ಯಾವಾಗಲೂ ಅವರ ಪರವಾಗಿರುತ್ತೇನೆ. ಜೊತೆಗೆ ಅವರನ್ನು ರಕ್ಷಿಸಲು ಬಯಸುತ್ತೇನೆ. ಸದಾ ಅವರಿಗೆ ಒಳ್ಳೆಯದನ್ನೇ ಬಯಸುತ್ತೇನೆ ಎಂದು ರಶ್ಮಿಕಾ ಮಂದಣ್ಣ ಹೇಳಿದ್ದಾರೆ.

samantha 1

ಮೈಯೋಸಿಟಿಸ್ ಕಾಯಿಲೆ ಬಗ್ಗೆ ಸಮಂತಾ ಹೇಳಿಕೊಂಡಾಗ ನನಗೆ ತುಂಬಾ ಬೇಸರವಾಗಿತ್ತು. ಸದ್ಯಕ್ಕೆ ಸಮಂತಾ ಚೇತರಿಸಿಕೊಂಡಿದ್ದಾರೆ. ಶೀಘ್ರದಲ್ಲೇ ಗುಣಮುಖರಾಗಿ ಶೂಟಿಂಗ್‌ಗೆ ಮರಳುತ್ತಾರೆ ಎಂದು ನಟಿ ರಶ್ಮಿಕಾ ಹೇಳಿದ್ದಾರೆ.

Live Tv
[brid partner=56869869 player=32851 video=960834 autoplay=true]

Share This Article
Leave a Comment

Leave a Reply

Your email address will not be published. Required fields are marked *