ಬೆಂಗಳೂರು: ನಗರದಲ್ಲಿ ನಿರ್ಮಾಣ ಹಂತದ ನಮ್ಮ ಮೆಟ್ರೋ ಪಿಲ್ಲರ್ (Metro Pillar) ಕುಸಿದು ಬಿದ್ದು, ತಾಯಿ ಮಗು ಸಾವನ್ನಪ್ಪಿರುವ ಘಟನೆ ಬೆಂಗಳೂರಿಗರನ್ನು (Bengaluru) ತಲ್ಲಣಗೊಳಿಸಿದೆ. ಘಟನೆ ಬಗ್ಗೆ ಸಿಎಂ ಬಸವರಾಜ ಬೊಮ್ಮಾಯಿ (Basavaraj Bommai) ಆಘಾತ ವ್ಯಕ್ತಪಡಿಸಿದ್ದಲ್ಲದೇ ತುರ್ತು ಸಭೆ ನಡೆಸಿ ದುರಂತಕ್ಕೆ ಕಾರಣರಾದವರ ವಿರುದ್ಧ ಕ್ರಮ ಕೈಗೊಳ್ಳಲು ಆದೇಶಿಸಿದ್ದಾರೆ.
ಮಂಗಳವಾರ ಸಿಎಂ ಗೃಹ ಕಚೇರಿಯಲ್ಲಿ ಬೊಮ್ಮಾಯಿ ಬೆಂಗಳೂರು ನಗರ ಪೊಲೀಸ್ ಆಯುಕ್ತರು ಹಾಗೂ ಡಿಸಿಪಿಯೊಂದಿಗೆ ಸಭೆ ನಡೆಸಿದ್ದಾರೆ. ಮೆಟ್ರೋ ಅಧಿಕಾರಿಗಳಿಂದ ಘಟನೆ ಬಗ್ಗೆ ಮಾಹಿತಿ ಪಡೆದಿದ್ದು, ಕಾಮಗಾರಿಯ ಕಾಂಟ್ರಾಕ್ಟರ್ ಹಾಗೂ ಎಂಜಿನಿಯರ್ ವಿರುದ್ಧ ಕ್ರಿಮಿನಲ್ ಕೇಸ್ ದಾಖಲು ಮಾಡಲು ಸೂಚನೆ ನೀಡಿದ್ದಾರೆ.
ಸಭೆ ಬಳಿಕ ಮಾತನಾಡಿದ ಬೊಮ್ಮಾಯಿ, ಮೆಟ್ರೋ ಪಿಲ್ಲರ್ ಕುಸಿತಕ್ಕೆ ಸಂಬಂಧಪಟ್ಟಂತೆ ತಪ್ಪಿತಸ್ಥರ ವಿರುದ್ಧ ಕಾನೂನಾತ್ಮಕ ಕ್ರಮ ಕೈಗೊಳ್ಳಲು ತಿಳಿಸಿದ್ದೇನೆ. ಕಾಂಟ್ರಾಕ್ಟರ್ ಹಾಗೂ ಕಂಪನಿಯವರ ಮೇಲೆ ಕೇಸ್ ದಾಖಲಿಸಲು ಸೂಚಿಸಿದ್ದೇನೆ. ಜೊತೆಗೆ ಕಾಮಗಾರಿ ಎಂಜಿನಿಯರ್‌ನನ್ನು ಅಮಾನತು ಮಾಡಲು ಆದೇಶಿಸಿದ್ದೇನೆ ಎಂದಿದ್ದಾರೆ. ಇದನ್ನೂ ಓದಿ: ಡೆಡ್ಲಿ ಮೆಟ್ರೋಗೆ ಇಬ್ಬರು ಬಲಿ – ಪಿಲ್ಲರ್ ದುರಂತಕ್ಕೆ ಕಾರಣಗಳೇನು?
ದುರ್ಘಟನೆಗೆ ಸಂಬಂಧಿಸಿದಂತ ತನಿಖೆಯನ್ನು ಯಾವ ರೀತಿ ಮಾಡಬೇಕು ಎಂಬುದನ್ನು ಬುಧವಾರ ತೀರ್ಮಾನ ಮಾಡಲಾಗುವುದು. ಸದ್ಯ ಮೆಟ್ರೋ ಕಡೆಯವರಿಂದ ಮೃತರ ಕುಟುಂಬಕ್ಕೆ 20 ಲಕ್ಷ ರೂ. ಪರಿಹಾರ ನೀಡಲಾಗುತ್ತಿದ್ದು, ನಮ್ಮ ಕಡೆಯಿಂದ 10 ಲಕ್ಷ ರೂ. ಪರಿಹಾರ ಘೋಷಿಸಲಾಗಿದೆ ಎಂದು ತಿಳಿಸಿದರು.
ಇಲ್ಲಿ ಪರಿಹಾರ ಮುಖ್ಯವಲ್ಲ. ಈ ಘಟನೆಗೆ ಕಾರಣ ಯಾರು? ಸಮಸ್ಯೆ ಏನಾಗಿತ್ತು ಎನ್ನುವುದನ್ನು ಪತ್ತೆ ಹಚ್ಚಿ ಕ್ರಮ ತೆಗೆದುಕೊಳ್ಳಬೇಕು. ಕೂಡಲೇ ತನಿಖೆಗೆ ಆದೇಶಿಸಲಾಗಿದ್ದು, ಈ ರೀತಿಯ ಘಟನೆಗಳು ಮತ್ತೆ ನಡೆಯದಂತೆ ಸೂಚಿಸಿದ್ದೇನೆ ಎಂದು ಹೇಳಿದರು. ಇದನ್ನೂ ಓದಿ: ಮೆಟ್ರೋ ಪಿಲ್ಲರ್ ಕುಸಿತ – ಮೃತರ ಕುಟುಂಬಕ್ಕೆ 20 ಲಕ್ಷ ಪರಿಹಾರ : BMRCL
Live Tv
[brid partner=56869869 player=32851 video=960834 autoplay=true]
Join our Whatsapp group by clicking the below link
https://chat.whatsapp.com/E6YVEDajTzH06LOh77r25k