ಹಾಸ್ಟೆಲ್ ಹುಡುಗರೆಲ್ಲ (Hostel Boys) ಸೇರಿ ಸಂಗೀತ ನಿರ್ದೇಶಕ ಅಜನೀಶ್ ಲೋಕನಾಥ್ (Ajanish Loknath) ರನ್ನು ಕಿಡ್ನಾಪ್ (Kidnap) ಮಾಡಿದ್ದಾರೆ. ಎರಡು ವಾರವಾದ್ರು ಇನ್ನೂ ಬಿಡುಗಡೆ ಮಾಡಿಲ್ಲ. ಇಷ್ಟು ದಿನ ಹಾಡು ಬಿಡುಗಡೆ ಮಾಡಿ ಎಂದು ಬೇಡಿಕೆ ಇಟ್ಟಿದ್ದ ಹುಡುಗರು ಈಗ ಬಿಡುಗಡೆಯಾಗಿರುವ ಹಾಡು ಹತ್ತು ಮಿಲಿಯನ್ ವೀವ್ಸ್ ಪಡೆದ ಮೇಲೆ ಬಿಡುಗಡೆ ಮಾಡುತ್ತೇವೆ ಎಂದು ಹಿಂಸೆ ನೀಡುತ್ತಿದ್ದಾರೆ ಎಂದು ಅಜನೀಶ್ ಲೋಕನಾಥ್ ಅಳಲು ತೋಡಿಕೊಂಡಿದ್ದಾರೆ. ಬಿಡುಗಡೆಯಾಗಿರುವ ‘ಪ್ರೊಟೆಸ್ಟ್ ಸಾಂಗ್’ ಹತ್ತು ಮಿಲಿಯನ್ ವೀವ್ಸ್ ಪಡೆಯಲು ಸಹಕರಿಸಿ ಎಂದು ಕರ್ನಾಟಕ ಜನತೆಗೆ ಪತ್ರ ಬರೆದು ಮನವಿ ಮಾಡಿದ್ದಾರೆ ಅಜನೀಶ್. ಆದ್ರೆ ಇದೆಲ್ಲ ರಿಯಲ್ ಅಲ್ಲ ರೀಲ್ ಅನ್ನೋದು ಮರೆಯೋ ಹಾಗಿಲ್ಲ. ಹೌದು, ಇದು ಬಿಡುಗಡೆಗೆ ಸಜ್ಜಾಗಿರುವ ‘ಹಾಸ್ಟೆಲ್ ಹುಡುಗರು ಬೇಕಾಗಿದ್ದಾರೆ’ ಸಿನಿಮಾ ಪ್ರಮೋಶನ್ ತಂತ್ರ.
ಸಖತ್ ಕ್ರಿಯೇಟಿವ್ ಆಗಿ ಸಿನಿಮಾ ಪ್ರಮೋಷನ್ ಮಾಡುತ್ತ ಕಲಾರಸಿಕರುನ್ನು ತನ್ನತ್ತ ಸೆಳೆಯುತ್ತಿರುವ, ಕುತೂಹಲ ಹುಟ್ಟು ಹಾಕಿರುವ ಸಿನಿಮಾ ‘ಹಾಸ್ಟೆಲ್ ಹುಡುಗರು ಬೇಕಾಗಿದ್ದಾರೆ’. ಕಳೆದ ವಾರ ಚಿತ್ರತಂಡ ‘ಪ್ರೊಟೆಸ್ಟ್ ಸಾಂಗ್’ ಬಿಡುಗಡೆ ಮಾಡಿತ್ತು. ಚಿತ್ರದ ಮೊದಲ ಸಾಂಗ್ ಬಿಡುಗಡೆಯಾಗುತ್ತಿದ್ದಂತೆ ಕೆಲವೇ ಗಂಟೆಗಳಲ್ಲಿ ಒಂದು ಮಿಲಿಯನ್ಗೂ ಅಧಿಕ ವೀವ್ಸ್ ಪಡೆದುಕೊಂಡಿತ್ತು. ಯೋಗರಾಜ್ ಭಟ್ ಕ್ಯಾಚಿ ಲಿರಿಕ್ಸ್, ಅಜನೀಶ್ ಲೋಕನಾಥ್ ಕಿಕ್ ಕೊಡೋ ಮ್ಯೂಸಿಕ್ ಹಾಗೂ ಹಾಡು ಉತ್ತಮ ರೆಸ್ಪಾನ್ಸ್ ಗಿಟ್ಟಿಸಿಕೊಂಡಿತ್ತು. ಇದೀಗ ಈ ಹಾಡು ಹತ್ತು ಮಿಲಿಯನ್ ವೀವ್ಸ್ ಕಾಣಬೇಕೆಂಬುದು ಹಾಸ್ಟೆಲ್ ಹುಡುಗರ ಮಹದಾಸೆ. ಅದಕ್ಕೆಂದೇ ಚಿತ್ರದ ಸಂಗೀತ ನಿರ್ದೇಶಕ ಅಜನೀಶ್ ಲೋಕನಾಥ್ ರಿಂದ ಪತ್ರ ಬರೆಸಿ ಮನವಿ ಮಾಡಿದೆ. ಈ ಪತ್ರ ಸಾಮಾಜಿಕ ಜಾಲತಾಣದಲ್ಲಿ ಸಖತ್ ವೈರಲ್ ಆಗಿದೆ. ಇದನ್ನೂ ಓದಿ: ಬಾಲಿವುಡ್ ಸಿನಿಮಾದಲ್ಲಿ ಹಾಟ್ ಹಾಟ್ ಆಗಿ ಕಾಣಿಸಿಕೊಂಡ ರಾಗಿಣಿ
ಯೂತ್ ಸಬ್ಜೆಕ್ಟ್ ಒಳಗೊಂಡ ‘ಹಾಸ್ಟೆಲ್ ಹುಡುಗರು ಬೇಕಾಗಿದ್ದಾರೆ’ ಚಿತ್ರವನ್ನು ನಿತಿನ್ ಕೃಷ್ಣಮೂರ್ತಿ ನಿರ್ದೇಶನ ಮಾಡಿದ್ದಾರೆ. ಹಲವು ರಂಗಭೂಮಿ ಪ್ರತಿಭೆಗಳು ತಾರಾಗಣದಲ್ಲಿರುವ ಈ ಚಿತ್ರದಲ್ಲಿ ಸ್ಯಾಂಡಲ್ ವುಡ್ ಸ್ಟಾರ್ ನಟರ ಗೆಸ್ಟ್ ಅಪಿಯರೆನ್ಸ್ ಕೂಡ ಇರಲಿದೆ. ಪುನೀತ್ ರಾಜ್ ಕುಮಾರ್, ಸುದೀಪ್, ರಮ್ಯಾ, ರಕ್ಷಿತ್ ಶೆಟ್ಟಿ ಹೀಗೆ ಸ್ಟಾರ್ ನಟ ನಟಿಯರು ಈ ಸಿನಿಮಾಗೆ ಸಾಥ್ ನೀಡಿದ್ದಾರೆ. ಯೂನೀಕ್ ಕಾನ್ಸೆಪ್ಟ್ ಮೂಲಕ ಚಿತ್ರದ ಪ್ರಚಾರ ಕಾರ್ಯ ಮಾಡಿ ಅಪಾರ ನಿರೀಕ್ಷೆ ಹುಟ್ಟು ಹಾಕಿರುವ ಈ ಚಿತ್ರವನ್ನು ರಕ್ಷಿತ್ ಶೆಟ್ಟಿ ಪರಂವಃ ಪಿಕ್ಚರ್ಸ್ ಮೂಲಕ ಪ್ರಸ್ತುತ ಪಡಿಸುತ್ತಿದ್ದಾರೆ. ವರುಣ್ ಸ್ಟುಡಿಯೋಸ್ ಹಾಗೂ ಗುಲ್ ಮೋಹರ್ ಫಿಲಂಸ್ ಬ್ಯಾನರ್ ನಡಿ ನಿರ್ಮಾಣವಾಗಿರುವ ಈ ಚಿತ್ರಕ್ಕೆ ಅರವಿಂದ್ ಕಶ್ಯಪ್ ಛಾಯಾಗ್ರಹಣ, ಸುರೇಶ್ ಸಂಕಲನವಿದೆ.
Live Tv
[brid partner=56869869 player=32851 video=960834 autoplay=true]
Join our Whatsapp group by clicking the below link
https://chat.whatsapp.com/E6YVEDajTzH06LOh77r25k