ಬೆಂಗಳೂರು: 2023ರ ಚುನಾವಣೆಗೆ ಪಕ್ಷ ಸಂಘಟನೆ ಹಾಗೂ ಕಾಂಗ್ರೆಸ್ (Congress) ಪಕ್ಷಕ್ಕೆ ಬೂಸ್ಟ್ ತುಂಬಲು ಸೋಮವಾರ ಪ್ರಿಯಾಂಕಾ ಗಾಂಧಿ (Priyanka Gandhi) ರಾಜ್ಯಕ್ಕೆ ಆಗಮಿಸುತ್ತಿದ್ದಾರೆ.
ಕಾಂಗ್ರೆಸ್ ಮಹಿಳಾ ಘಟಕದಿಂದ ಮಹಿಳೆಯರ ಸಂಘಟನೆಗಾಗಿ ಹಮ್ಮಿಕೊಂಡಿದ್ದ ನಾ ನಾಯಕಿ (Na Nayaki) ಸಮಾರೋಪ ಸಮಾರಂಭ ನಡೆಯಲಿದ್ದು,ಈ ಕಾರ್ಯಕ್ರಮದಲ್ಲಿ ಪ್ರಿಯಾಂಕಾ ಗಾಂಧಿ ಭಾಗಿಯಾಗಲಿದ್ದಾರೆ. ಇದನ್ನೂ ಓದಿ: ಕಾರ್ಯಕ್ರಮ ಉದ್ಘಾಟನೆ ವೇಳೆ ಸುಪ್ರಿಯಾ ಸುಳೆ ಸೀರೆಗೆ ಹೊತ್ತಿಕೊಂಡ ಬೆಂಕಿ
ಅರಮನೆ ಮೈದಾನದಲ್ಲಿ ಕಾರ್ಯಕ್ರಮ ಆಯೋಜನೆ ಮಾಡಲಾಗಿದೆ. ಒಂದು ಲಕ್ಷ ಮಹಿಳಾ ಕಾರ್ಯಕರ್ತರನ್ನು ಕಾರ್ಯಕ್ರಮದಲ್ಲಿ ಸೇರಿಸುವ ಯೋಜನೆಯನ್ನು ಕಾಂಗ್ರೆಸ್ ಹಾಕಿಕೊಂಡಿದೆ. ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಕೆಪಿಸಿಸಿ ಅಧ್ಯಕ್ಷ ಡಿಕೆಶಿವಕುಮಾರ್, ವಿಪಕ್ಷ ನಾಯಕ ಸಿದ್ದರಾಮಯ್ಯ ಮಹಿಳಾ ಘಟಕದ ಅಧ್ಯಕ್ಷೆ ಪುಷ್ಪಾ ಅಮರನಾಥ್ ಸೇರಿದಂತೆ ಹಲವು ನಾಯಕರು ಭಾಗವಹಿಸಲಿದ್ದಾರೆ.
ಅರಮನೆ ಮೈದಾನದಲ್ಲಿ ನಡೆಯಲಿರುವ ಕಾರ್ಯಕ್ರಮಕ್ಕೆ ಸಕಲ ಸಿದ್ದತೆಗಳನ್ನ ಮಾಡಿಕೊಳ್ಳಲಾಗಿದೆ. ಮಹಿಳಾ ಕಾರ್ಯಕರ್ತರನ್ನು ಕುರಿತು ಪ್ರಿಯಾಂಕಾ ಗಾಂಧಿ ಮಾತನಾಡಲಿದ್ದು, ಮುಂದಿನ ಚುನಾವಣೆ ದೃಷ್ಟಿಯಿಂದ ಈ ಸಮಾವೇಶ ಕಾಂಗ್ರೆಸ್ ಪಾಳಯಕ್ಕೆ ಹುರುಪು ತುಂಬುವ ಕಾರ್ಯಕ್ರಮ ಆಗಿದೆ.
Live Tv
[brid partner=56869869 player=32851 video=960834 autoplay=true]
Join our Whatsapp group by clicking the below link
https://chat.whatsapp.com/E6YVEDajTzH06LOh77r25k