ಪ್ರತಿ ಎಕರೆಗೆ 250 ರೂ. ಡೀಸೆಲ್‌ ಸಬ್ಸಿಡಿ – ತಿಂಗಳಾಂತ್ಯಕ್ಕೆ ರೈತ ಶಕ್ತಿ ಯೋಜನೆಗೆ ಚಾಲನೆ

Public TV
2 Min Read
BC Patil

ಬೆಂಗಳೂರು: ರೈತಾಪಿ ಕೃಷಿಕರ ಮೇಲಿನ ಹೊರೆ ತಪ್ಪಿಸುವ ಸಲುವಾಗಿ ಬಜೆಟ್‌ನಲ್ಲಿ ಘೋಷಿಸಿದಂತೆ ರೈತ ಶಕ್ತಿ ಯೋಜನೆಗೆ (Karnataka Raitha Shakti Scheme) ಈ ತಿಂಗಳಾಂತ್ಯಕ್ಕೆ ಸಿಎಂ ಬಸವರಾಜ ಬೊಮ್ಮಾಯಿ (Basavaraj Bommai) ಚಾಲನೆ‌ ನೀಡಲಿದ್ದಾರೆ ಎಂದು ಕೃಷಿ ಸಚಿವ ಬಿ.ಸಿ.ಪಾಟೀಲ್ (BC Patil) ಹೇಳಿದ್ದಾರೆ.

ರೈತರಿಗೆ ಕೃಷಿ ಯಾಂತ್ರೀಕರಣವು ಡೀಸೆಲ್‌ (Diesel) ಇಂಧನದ ಮೇಲೆ ಬಹುತೇಕ‌ ಅವಲಂಬಿತವಾಗಿದೆ. ಹೀಗಾಗಿ ರೈತರ (Farmers) ಮೇಲಿನ ಆರ್ಥಿಕ ಹೊರೆ ಆದಷ್ಟು ಕಡಿತಗೊಳಿಸುವ ನಿಟ್ಟಿನಲ್ಲಿ 2022 -23 ನೇ ಸಾಲಿನ ಬಜೆಟ್‌ನಲ್ಲಿ ರೈತ ಶಕ್ತಿ ಯೋಜನೆಯನ್ನು ಪ್ರಕಟಿಸಲಾಗಿತ್ತು.

bommai budget rupee

ಪ್ರತಿ ಎಕರೆಗೆ 250 ರೂ.ನಂತೆ ಗರಿಷ್ಠ ಐದು ಎಕರೆಗೆ ನೇರ ನಗದು ವರ್ಗಾವಣೆ (DBT) ಮೂಲಕ ಡೀಸೆಲ್ ಸಹಾಯಧನವನ್ನು ನೀಡಲಾಗುತ್ತದೆ. ಸುಮಾರು 45 ಲಕ್ಷಕ್ಕೂ ಹೆಚ್ಚಿನ ರೈತಾಪಿ ಕುಟುಂಬಗಳಿಗೆ ಡಿಬಿಟಿ ಮೂಲಕ ಸಬ್ಸಿಡಿಯನ್ನು ನೇರವಾಗಿ ರೈತರ ಖಾತೆಗೆ ಸಿಎಂ ನೇರವಾಗಿ ಬಿಡುಗಡೆ ಮಾಡಲಿದ್ದಾರೆ.

ರಾಜ್ಯದ ರೈತರಿಗೆ ಕೃಷಿ ಇಲಾಖೆಯ ಎಲ್ಲಾ ಯೋಜನೆಗಳನ್ನು ರೈತರಿಗೆ FRUITS ಫೋರ್ಟಲ್‌‌ ಮೂಲಕ ನೋಂದಣಿ ಗುರುತಿನ ಸಂಖ್ಯೆ ಬಳಸಿ ಕಿಸಾನ್ ತಂತ್ರಾಂಶದ ಮೂಲಕವೇ ಅನುಷ್ಠಾನ ಮಾಡಲಾಗುತ್ತಿದೆ. ಅದೇ ರೀತಿಯಲ್ಲಿ FRUITS ಪೋರ್ಟಲ್‌ನಲ್ಲಿ ನೋಂದಣಿಗೊಂಡ ರಾಜ್ಯದ ಎಲ್ಲಾ ರೈತರಿಗೆ ರೈತ ಶಕ್ತಿ ಯೋಜನೆಯನ್ನು ಕಿಸಾನ್ ತಂತ್ರಾಂಶ ಬಳಸಿಕೊಂಡು ನೇರ ವರ್ಗಾವಣೆ (DBT) ಮೂಲಕವೇ ಯೋಜನೆ ಅನುಷ್ಠಾನ ಮಾಡಲಾಗುತ್ತಿದೆ.  ಇದನ್ನೂ ಓದಿ: ಪ್ರೇಕ್ಷಕರಿಲ್ಲದೇ ಖಾಲಿ ಹೊಡೆದ ಸ್ಟೇಡಿಯಂ – ಕೇರಳ ಕ್ರೀಡಾ ಸಚಿವರ ವಿವಾದಾತ್ಮಕ ಹೇಳಿಕೆ ವಿರುದ್ಧ ನಿಲ್ಲದ ಆಕ್ರೋಶ

despite good price for paddy Raichuru farmers are disappointed 1

ನಗದು ಯೋಜನೆಯ FRUITS ಪೋರ್ಟಲ್ ನಲ್ಲಿ ನೊಂದಣಿಗೊಂಡ ರಾಜ್ಯದ ಎಲ್ಲಾ ರೈತರು ಈ ಯೋಜನೆಯ ಫಲಾನುಭವಿಗಳಾಗಿರುತ್ತಾರೆ. ಈ ಯೋಜನೆಯು ಅರ್ಹತಾಧಾರಿತ ಯೋಜನೆಯಾಗಿರುವುದರಿಂದ ಯಾವುದೇ ರೈತರು ಪ್ರತ್ಯೇಕವಾಗಿ ವೈಯಕ್ತಿಕ ಅರ್ಜಿ ಸಲ್ಲಿಸುವ ಅವಶ್ಯಕತೆಯಿರುವುದಿಲ್ಲ. ದಾಖಲೆಗಳ ಪರಿಶೀಲನೆಯನ್ನು ಸರ್ಕಾರದ FRUITS ಪೋರ್ಟಲ್ ನಲ್ಲಿ ಲಭ್ಯವಿರುವ ದತ್ತಾಂಶಗಳ ಆಧಾರದ ಮೇಲೆ ಮಾಡಲಾಗುತ್ತದೆ.

FRUITS ಪೋರ್ಟಲ್‌ನಲ್ಲಿ ನಮೂದಿಸಲಾದ ಜಾಗದ ವಿಸ್ತೀರ್ಣದ ಆಧಾರದ ಮೇಲೆ ರೈತರಿಗೆ ಡೀಸೆಲ್‌ ಸಹಾಯಧನವನ್ನು ಡಿಬಿಟಿ ಮೂಲಕ ರೈತರ ಖಾತೆಗೆ ವರ್ಗಾಯಿಸಲಾಗುತ್ತದೆ. FRUITS ತಂತ್ರಾಂಶದಲ್ಲಿ ನೋಂದಣಿಗೊಂಡ ರೈತರು ಹೊಂದಿರುವ ಭೂ ಹಿಡುವಳಿಯ ಆಧಾರದ ಮೇಲೆ ಪ್ರತಿಯೊಬ್ಬ ರೈತರಿಗೆ ಪ್ರತಿ ಎಕರೆಗೆ 250 ರೂ. ಗರಿಷ್ಠ ಐದು ಎಕರೆಗೆ 1250 ರೂ. ವರೆಗೆ ಡೀಸೆಲ್ ಸಹಾಯಧನವನ್ನು ಒದಗಿಸಲಾಗುತ್ತದೆ.

ಅರ್ಹ ರೈತರಿಗೆ ಡೀಸಲ್ ಸಹಾಯಧನದ ಮೊತ್ತವನ್ನು ಸರ್ಕಾರದ ಡಿಬಿಟಿ ವೋರ್ಟಲ್ ಮೂಲಕ ಸೀಡೆಡ್ ಬ್ಯಾಂಕ್ / ಪೋಸ್ಟ್ ಆಫೀಸ್ ಖಾತೆಗೆ ವರ್ಷಕ್ಕೊಮ್ಮೆ ವರ್ಗಾಯಿಸಲಾಗುತ್ತದೆ ಎಂದು ಕೃಷಿ ಸಚಿವರ ಕಚೇರಿ ತಿಳಿಸಿದೆ.

Live Tv
[brid partner=56869869 player=32851 video=960834 autoplay=true]

Join our Whatsapp group by clicking the below link
https://chat.whatsapp.com/E6YVEDajTzH06LOh77r25k

Share This Article
Leave a Comment

Leave a Reply

Your email address will not be published. Required fields are marked *