Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಕರ್ನಾಟಕ ಚಲನಚಿತ್ರ ಪತ್ರಕರ್ತರ ಸಂಘ ಉದ್ಘಾಟನೆ: ಗಿರೀಶ್ ಕಾಸರವಳ್ಳಿ ಮೆಚ್ಚುಗೆ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Cinema | ಕರ್ನಾಟಕ ಚಲನಚಿತ್ರ ಪತ್ರಕರ್ತರ ಸಂಘ ಉದ್ಘಾಟನೆ: ಗಿರೀಶ್ ಕಾಸರವಳ್ಳಿ ಮೆಚ್ಚುಗೆ

Cinema

ಕರ್ನಾಟಕ ಚಲನಚಿತ್ರ ಪತ್ರಕರ್ತರ ಸಂಘ ಉದ್ಘಾಟನೆ: ಗಿರೀಶ್ ಕಾಸರವಳ್ಳಿ ಮೆಚ್ಚುಗೆ

Public TV
Last updated: January 17, 2023 11:24 am
Public TV
Share
3 Min Read
FotoJet 44
SHARE

ಕನ್ನಡದ ಒಟ್ಟು ಸಿನಿಮಾ ಬೆಳವಣಿಗೆ, ಇತಿಹಾಸವನ್ನು ರಾಷ್ಟ್ರೀಯ ನೆಲೆಯಲ್ಲಿ ವಿಶ್ಲೇಷಣೆ ಮಾಡುವುದು ತುರ್ತು ಅಗತ್ಯವಿದೆ ಎಂದು ಹಿರಿಯ ನಿರ್ದೇಶಕ ಪದ್ಮಶ್ರೀ ಗಿರೀಶ್ ಕಾಸರವಳ್ಳಿ ಇಂದಿಲ್ಲಿ ಹೇಳಿದರು. ‘ಸಂಸ್ಕಾರ’ , ‘ಸ್ಕೂಲ್ ಮಾಸ್ಟರ್ ‘ ರೀತಿಯ ಚಿತ್ರಗಳನ್ನು ಸರಿಯಾಗಿ ಬಿಂಬಿಸುವ ಕೆಲಸ ಆಗಿಲ್ಲ. ರೌಡಿಸಂ ಮಾದರಿಯ ಸಿನಿಮಾಗಳನ್ನು‌ ಹೆಚ್ಚು ಹೆಚ್ಚು ಪ್ರೊಜೆಕ್ಟ್ ಮಾಡಿ ರಾಜ್ಯದ ಹೊರಗೂ ಕನ್ನಡ ಚಿತ್ರಗಳ ಕುರಿತಂತೆ ನಾವೇ ತಪ್ಪು ಕಲ್ಪನೆ ಮೂಡಿಸಿದ್ದೇವೆ,  ಅದನ್ನು ಹೋಗಲಾಡಿಸುವ ಅಗತ್ಯವಿದೆ’ ಎಂದರು. ಕರ್ನಾಟಕ ಚಲನಚಿತ್ರ ಪತ್ರಕರ್ತರ ಸಂಘವನ್ನು  ಉದ್ಘಾಟಿಸಿ, ಲಾಂಛನ ಬಿಡುಗಡೆ ಮಾಡಿ ಮಾತನಾಡಿದ ಅವರು, ‘ಕನ್ನಡದ ಅಸ್ಮಿತೆ, ಕಲಾತ್ಮಕ ಹೆಗ್ಗಳಿಕೆ ತೋರಿಸಬೇಕು, ಆ ಕೆಲಸ ಆಗಬೇಕು. ಬೆಂಗಳೂರು ಅಲ್ಲದೆ ರಾಜ್ಯದ  ಆಚೆಗೂ  ಕನ್ನಡದಲ್ಲಿ ಈ ರೀತಿ ಸಾಧನೆ ಆಗಿದೆ ಎನ್ನುವುದು ತಿಳಿಸಬೇಕು’ ಎಂದು ಅವರು ಸಲಹೆ ನೀಡಿದರು.

FotoJet 3 22

‘ಕನ್ನಡದಲ್ಲಿ  ಒಳ್ಳೆಯ ಸಿನಿಮಾಗಳನ್ನು ಪ್ರೊಜೆಕ್ಟ್ ಮಾಡುತ್ತಿಲ್ಲ. ‘‌ಕಾಂತಾರ ‘ ತನ್ನ ಅಸ್ಮಿತೆಯಿಂದ ದೇಶವಿದೇಶಗಳಲ್ಲಿ ಯಶಸ್ಸು ಗಳಿಸಿತು. ಆದರೆ ‘ಕೆಜಿಎಫ್’ ಹಾಗಲ್ಲ, ಅದರ ಗೆಲುವಿಗೆ ಬೇರೆಯದೇ  ಆದ ಕಾರಣ ಇದೆ. ಕನ್ನಡದಲ್ಲಿ ಬೇರೆಯೇ ರೀತಿಯ ಚಿತ್ರಗಳು ಕಳೆದ ನಾಲ್ಕೈದು ವರ್ಷಗಳಲ್ಲಿ ಆಗಿದೆ. ‘ಬಳೆ ಕೆಂಪ’,  ‘ಪಿಂಕಿ ಎಲ್ಲಿ’, ‘ನಾನು ಕುಸುಮ’, ‘ಪೆದ್ರೋ’, ‘ಶಿವಮ್ಮ’ ಮುಂತಾದ ಚಿತ್ರಗಳು ಜಗತ್ತಿನಾದ್ಯಂತ  ಸದ್ದು ಮಾಡುತ್ತಿವೆ. ಅವುಗಳು ಜನರಿಗೆ ತಲುಪುತ್ತಿಲ್ಲ ಅಷ್ಟೇ’ ಎಂದು ಅವರು ಹೇಳಿದರು.  ಇದನ್ನೂ ಓದಿ: ಸತತ ಸೋಲಿನಿಂದ ಬೇಸತ್ತ ಪೂಜಾಗೆ ನಿರ್ದೇಶಕ ತ್ರಿವಿಕ್ರಮ್ ಸಲಹೆ

FotoJet 1 30

ದಲಿತ, ಬಂಡಾಯ ಸಾಹಿತ್ಯ ಕನ್ನಡ ಚಿತ್ರರಂಗದಲ್ಲಿ ಚಿತ್ರ ಗೀತೆಯಲ್ಲಿ ಬಂದಿದೆ. ಆದರೆ  ಸಿನಿಮಾದಲ್ಲಿ ಬಂದಿಲ್ಲ. ‌ಅದನ್ನು ದಾಖಲು ಮಾಡವ ಅಗತ್ಯವಿದೆ ಎಂದ ಅವರು, ‘ಕೃತಿಯನ್ನು ಸಮಾಜದ ಬೆಳವಣಿಗೆ, ಕಾಲ ಮತ್ತು ಕಾಲಾತೀತವಾಗಿ ನೋಡಬೇಕಾಗಿದೆ. ಪುಟ್ಟಣ್ಣ ಅವರು ಸಾಂಸ್ಕೃತಿಕ, ಧಾರ್ಮಿಕ ನಿಲುವು ಇಟ್ಟುಕೊಂಡು ವಿಶ್ಲೇಷಣೆ ಮಾಡಬೇಕು. ಸಿನಿಮಾ ಶೂನ್ಯದಲ್ಲಿ ಸೃಷ್ಠಿ ಆಗುವುದಿಲ್ಲ’ ಎಂದು ಹೇಳಿದರು.

FotoJet 5 14

‘ನಾನು ಚಿತ್ರರಂಗ ಪ್ರವೇಶಿಸಿದ್ದು 1975ರಲ್ಲಿ.  ಆಗ ಚಲನಚಿತ್ರ ಪತ್ರಕರ್ತಕರು ಬೆನ್ನೆಲುಬಾಗಿದ್ದರಿಂದ ಈ ಮಟ್ಟಕ್ಕೆ ಬೆಳೆಯಲು ಸಹಕಾರಿಯಾಯಿತು.  ಕೃತಿಕಾರ ಇಲ್ಲದಿದ್ದರೆ ವಿಮರ್ಶಕನ ಅಗತ್ಯವಿಲ್ಲ. ವಿಮರ್ಶಕ ಆಮ್ಲಜನಕದ ರೀತಿ ಕೆಲಸ ಮಾಡುತ್ತಾರೆ. ಸಿನಿಮಾ ವಿಮರ್ಶೆ ಮಾಡದಿದ್ದರೆ ನನ್ನನ್ನು ನಾನು ಅರ್ಥ ಮಾಡಿಕೊಳ್ಳಲು ಸಾಧ್ಯವಾಗುವುದಿಲ್ಲ’ ಎಂದು ಹಿಂದೆ ಪತ್ರಕರ್ತರ ಪರಿಷತ್ ಪ್ರತಿ ವಾರ ನಡೆಸುತ್ತಿದ್ದ ವಿಮರ್ಶೆಗಳ ವಿಮರ್ಶೆ ಸಂವಾದ ಕಾರ್ಯಕ್ರಮ ನಿರ್ದೇಶಕರನ್ನು ಉತ್ತೇಜಿಸುತ್ತಿದ್ದುದನ್ನು ಹೇಳಿದರು.   ‘ವಿಮರ್ಶಕರಿಂದ ಮಾಧ್ಯಮ, ಉದ್ಯಮ ಬೆಳೆಯಲಿದೆ. ಇಲ್ಲದಿದ್ದರೆ ಸ್ಥಗಿತವಾಗಲಿದೆ. ಚಲನಚಿತ್ರ  ಪತ್ರಕರ್ತರ ಸಂಘ ಮತ್ತೊಮ್ಮೆ ಉದ್ಘಾಟನೆಯಾಗಿರುವುದು ಖುಷಿಕೊಟ್ಟಿದೆ’  ಎಂದರು.

FotoJet 4 18

ಹಿರಿಯ ಪರ್ತಕರ್ತೆ ಡಾ. ವಿಜಯಾ ಮಾತನಾಡಿ, ‘ಹಿಂದಿನ ಸಂಘಟನೆಗಳು, ತಮ್ಮ ವೈಯಕ್ತಿಕ ಹಿತಾಸಕಿಗಳನ್ನು ಮರೆತು,  ಚಿತ್ರರಂಗದ ಬೆಳವಣಿಗೆಯನ್ನಷ್ಟೇ ಬಯಸಿದವು, ಇಲ್ಲಿ ಹಾಗಾಗದಂತೆ ಗಮನಹರಿಸಿದ್ದೀರಿ’ ಎಂದು ಕನ್ನಡ ಚಿತ್ರರಂಗದ ಬೆಳವಣಿಗೆಯಲ್ಲಿ ಪತ್ರಕರ್ತರ ಕೊಡುಗೆ ಮತ್ತು ವಿವಿಧ ವಿಷಯಗ‌ಳ‌ ಮೇಲೆ ಬೆಳಕು ಚೆಲ್ಲಿದರು.

FotoJet 2 25

ಸಂಘದ ಅಧ್ಯಕ್ಷ ಬಾ.ನಾ. ಸುಬ್ರಹ್ಮಣ್ಯ ಸಂಘದ ಕಾರ್ಯ ಚಟುವಟಿಕೆ ಉದ್ದೇಶಗಳ ಕುರಿತು ವಿವರಿಸಿದರು. ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿ ಅಧ್ಯಕ್ಷ ಭಾ.ಮ. ಹರೀಶ್, ಚಲನಚಿತ್ರ ಅಕಾಡಮಿ ಅಧ್ಯಕ್ಷ ಅಶೋಕ್ ಕಶ್ಯಪ್,  ನಿರ್ಮಾಪಕರ ಸಂಘದ ಅಧ್ಯಕ್ಷ ಉಮೇಶ್ ಬಣಕಾರ್,  ನಿರ್ದೇಶಕರ ಸಂಘದ ಅಧ್ಯಕ್ಷ ನಾಗೇಂದ್ರ ಅರಸ್, ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಶಿವಾನಂದ ತಗಡೂರು, ಅಖಿಲ ಬಾರತ ಕಾರ್ಯನಿರತ  ಒಕ್ಕೂಟದ ಅಧ್ಯಕ್ಷ ಬಿ.ವಿ ಮಲ್ಲಿಕಾರ್ಜುನಯ್ಯ, ಮಾಧ್ಯಮ ತಜ್ಞ ಜಿ.ಎನ್. ಮೋಹನ್,  ಹಿರಿಯ ಚಲನಚಿತ್ರ ಪತ್ರಕರ್ತರು ಸೇರಿದಂತೆ ಅನೇಕರು ಉಪಸ್ಥಿತರಿದ್ದರು.

ಸಂಸ್ಥಾಪಕ ಆಡಳಿತ ಮಂಡಳಿ : 

ಬಿ.ಎನ್. ಸುಬ್ರಹ್ಮಣ್ಯ – ಅಧ್ಯಕ್ಷರು

ಸುನಯನಾ ಸುರೇಶ್ – ಉಪಾಧ್ಯಕ್ಷರು

ನಾಡಿಗೇರ್ ಚೇತನ್ – ಕಾರ್ಯಾಧ್ಯಕ್ಷರು

ಅರುಣ್ ಕುಮಾರ್. ಜಿ – ಪ್ರಧಾನ ಕಾರ್ಯದರ್ಶಿ

ಜಗದೀಶ್ ಕುಮಾರ್ ಎಸ್ –  ಕಾರ್ಯದರ್ಶಿ

ಹರೀಶ್ ಸೀನಪ್ಪ – ಸಹ ಕಾರ್ಯದರ್ಶಿ

ಕೆ.ಎಸ್.ವಾಸು – ಖಜಾಂಚಿ

ಕಾರ್ಯಕಾರಿ ಸಮಿತಿಯ ಸದಸ್ಯರು

ಮನೋಹರ್‌ ಆರ್

ಮಂಜುನಾಥ್ ಎನ್

ದೇಶಾದ್ರಿ ಹೆಚ್

ಲಕ್ಷ್ಮೀನಾರಾಯಣ

ಸಿ.ಜಿ. ರಮೇಶ್

ವಿಜಯ್ ಆರ್

ಅವಿನಾಶ್ ಜಿ.ಆರ್

ಹರ್ಷವರ್ಧನ್ ಎಸ್‌.ಆರ್‌

ಮಾಲತೇಶ ಹೆಚ್. ಜಗ್ಗೇನ್

ಶಶಿಧರ ಚಿತ್ರದುರ್ಗ

Live Tv
[brid partner=56869869 player=32851 video=960834 autoplay=true]

Join our Whatsapp group by clicking the below link
https://chat.whatsapp.com/E6YVEDajTzH06LOh77r25k

TAGGED:associationBa.Na.SubramanyafilmGirish KasaravallijournalistVijayaಗಿರೀಶ್ ಕಾಸರವಳ್ಳಿಚಲನಚಿತ್ರಪತ್ರಕರ್ತಬಾ.ನಾ.ಸುಬ್ರಮಣ್ಯವಿಜಯಾಸಂಘ
Share This Article
Facebook Whatsapp Whatsapp Telegram

Cinema news

Dhurandhar 2 1
ಗಲ್ಲಾಪೆಟ್ಟಿಗೆಯಲ್ಲಿ ಸದ್ದು ಮಾಡ್ತಿದೆ ‘ಧುರಂಧರ್‌ 2’; 800 ಕೋಟಿ ಕ್ಲಬ್‌ ಸೇರುವತ್ತ ಓಟ
Bollywood Cinema Latest Top Stories
Dhurandhar 2
ಬಾಕ್ಸಾಫೀಸ್‌ನಲ್ಲಿ ಧೂಳೆಬ್ಬಿಸಿದ ‘ಧುರಂಧರ್‌ 2’ – ಮೂರೇ ದಿನದಲ್ಲಿ ವಿಶ್ವಾದ್ಯಂತ 500 ಕೋಟಿ ಕಲೆಕ್ಷನ್‌
Bollywood Cinema Latest Top Stories
Puneeth Rajakumar
800 ಕೆ.ಜಿ ಕಂಚಿನ ಅಪ್ಪು ಪುತ್ಥಳಿ ಅನಾವರಣ
Bengaluru City Cinema Districts Karnataka Latest Sandalwood Top Stories
Moogathi Malli
ಮೂಗುತಿ ಮಲ್ಲಿ: ಚೂಟಿ ಹುಡುಗಿ, ಘಾಟಿ ಬೆಡಗಿ!
Cinema Latest Sandalwood Top Stories

You Might Also Like

Dharwad
Dharwad

ಧಾರವಾಡ | ಕಾರಿನಲ್ಲಿ ಸುಟ್ಟ ಸ್ಥಿತಿಯಲ್ಲಿ ಶವ ಪತ್ತೆ – ಮಾಜಿ ಶಾಸಕರ ಪುತ್ರ ರಾಜು ಬೋಳಶಟ್ಟಿಯ ಕೊಲೆ ಶಂಕೆ

Public TV
By Public TV
5 minutes ago
Basavaraj Rayareddy Shivalinge Gowda UT Khader
Bengaluru City

ವಿಧಾನಸಭೆಯಲ್ಲಿ ಶಿವಲಿಂಗೇಗೌಡ VS ರಾಯರೆಡ್ಡಿ ಇಂಗ್ಲೀಷ್ ವಾರ್

Public TV
By Public TV
20 minutes ago
21 people arrested from 2 communities Mundaragi Gadgag
Districts

ನೀರಿನ ವಿಚಾರಕ್ಕೆ ಗಲಾಟೆ – 2 ಸಮುದಾಯದ 21 ಮಂದಿ ಅರೆಸ್ಟ್‌

Public TV
By Public TV
35 minutes ago
7 Dogs Kidnapped Outsmart Thieves And Walk 17 km Back Home In Incredible True Story
Latest

ಮಾಂಸದ ವ್ಯಾಪಾರಿಗಳಿಂದ ಪಾರಾಗಿ 17 ಕಿ.ಮೀ. ಕ್ರಮಿಸಿ ಮರಳಿ ಹಳ್ಳಿ ಸೇರಿದ 7 ನಾಯಿಗಳು

Public TV
By Public TV
53 minutes ago
Supreme Court
Court

ಹಿಂದೂ, ಬೌದ್ಧ, ಸಿಖ್‌ ಬಿಟ್ಟು ಬೇರೆ ಧರ್ಮಕ್ಕೆ ಮತಾಂತರಗೊಂಡರೆ ಎಸ್‌ಸಿ ಸ್ಥಾನಮಾನ ರದ್ದು: ಸುಪ್ರೀಂ ಕೋರ್ಟ್

Public TV
By Public TV
54 minutes ago
Delhi Assembly Bomb Threat
Crime

ದೆಹಲಿ ವಿಧಾನಸಭೆ, ಮೆಟ್ರೋ ಸ್ಟೇಷನ್‌ಗೆ ಬಾಂಬ್ ಬೆದರಿಕೆ

Public TV
By Public TV
1 hour ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?