ತಮಿಳಿನ ಖ್ಯಾತ ನಟ ವಿಜಯ್ ಆಂಟನಿಗೆ (Vijay Antony) ಚಿತ್ರೀಕರಣ ವೇಳೆ ದೋಣಿಯೊಂದರಲ್ಲಿ ಅಪಘಾತವಾಗಿದ್ದು ಆರೋಗ್ಯ ಸ್ಥಿತಿ ಚಿಂತಾಜನಕ ಎಂದು ಹೇಳಲಾಗುತ್ತಿದೆ. ಮಲೇಷ್ಯಾದಲ್ಲಿ (Malaysia) ವಿಜಯ್ ನಟನೆಯ ‘ಪಿಚ್ಚೈಕಾರನ್ 2’ (Picchaikaran 2) ಸಿನಿಮಾ ಶೂಟಿಂಗ್ ನಡೆಯುತ್ತಿತ್ತು. ದೋಣಿಯೊಂದರಲ್ಲಿ ನಡೆಯುತ್ತಿದ್ದ ಸಾಹಸ ಸನ್ನಿವೇಶದ ದೃಶ್ಯದಲ್ಲಿ ದೋಣಿ ಅಪಘಾತಕ್ಕೀಡಾಗಿದೆ (accident) ಎಂದು ಹೇಳಲಾಗುತ್ತಿದೆ. ಕೂಡಲೇ ಅವರನ್ನು ಆಸ್ಪತ್ರೆಗೆ ದಾಖಲಿಸಿದ್ದಾರೆ.
ಚಿತ್ರೀಕರಣದಲ್ಲಿ ಭಾಗಿಯಾಗಿದ್ದವರ ಹೇಳಿಕೆಯ ಪ್ರಕಾರ, ‘ಸಮುದ್ರ ಮಧ್ಯ ದೋಣಿಯಲ್ಲಿ ಚಿತ್ರೀಕರಣ ಮಾಡಲಾಗುತ್ತಿತ್ತು. ಒಂದು ದೋಣಿ ಮತ್ತೊಂದು ದೋಣಿಯನ್ನು ಅಟ್ಟಿಸಿಕೊಂಡು ಬರುವ ದೃಶ್ಯ ಅದಾಗಿತ್ತು. ರಭಸವಾಗಿ ದೋಣಿಗಳು ಬರುವ ವೇಳೆಯಲ್ಲಿ ಒಂದು ದೋಣಿ ನಿಯಂತ್ರಣ ತಪ್ಪಿ ಮತ್ತೊಂದು ದೋಣಿಗೆ ಢಿಕ್ಕಿ ಹೊಡೆದಿದೆ. ಈ ವೇಳೆ ವಿಜಯ್ ಆಂಟನಿ ತೀವ್ರವಾಗಿ ಗಾಯಗೊಂಡಿದ್ದಾರೆ. ಇದನ್ನೂ ಓದಿ: ಕೆ.ಎಲ್ ರಾಹುಲ್- ಅಥಿಯಾ ಶೆಟ್ಟಿ ಮನೆಯಲ್ಲಿ ಮದುವೆ ಸಂಭ್ರಮ
ಮಲೇಷ್ಯಾದ ಆಸ್ಪತ್ರೆಯ ಐಸಿಯುನಲ್ಲಿ ಚಿಕಿತ್ಸೆ ನೀಡಲಾಗುತ್ತಿದ್ದು, ವಿಷಯ ತಿಳಿಯುತ್ತಿದ್ದಂತೆಯೇ ವಿಜಯ್ ಕುಟುಂಬ ಮಲೇಷ್ಯಾಗೆ ಪ್ರಯಾಣ ಬೆಳೆಸಿದೆ. ಅಲ್ಲದೇ, ಅವರನ್ನು ಚೆನ್ನೈಗೆ ಕರೆತರುವ ಕುರಿತು ಪತ್ನಿ ಫಾತಿಮಾ ಹೇಳಿಕೆ ನೀಡಿದ್ದಾರೆ. ಸ್ಥಿತಿ ಚಿಂತಾಜನಕವಾಗಿದ್ದು, ಕುಟುಂಬ ಆತಂಕದಲ್ಲಿದೆ. ವಿಜಯ್ ಗುಣಮುಖರಾಗಲಿ ಎಂದು ಅಭಿಮಾನಿಗಳು ಪ್ರಾರ್ಥನೆ ಸಲ್ಲಿಸುತ್ತಿದ್ದಾರೆ.
ಅಪಘಾತದ ರಭಸಕ್ಕೆ ವಿಜಯ್ ಅವರ ಹಲ್ಲು ಮತ್ತು ದವಡೆಗೆ ತೀವ್ರತರಹದ ಪೆಟ್ಟು ಬಿದ್ದಿದೆ. ಮೂಳೆಗಳು ಮುರಿದಿವೆ ಎಂದು ಹೇಳಲಾಗುತ್ತಿದೆ. ನಿನ್ನೆಯಿಂದಲೇ ಅವರು ಪ್ರಜ್ಞಾಹೀನರಾಗಿದ್ದಾರೆ ಎಂದು ಕುಟುಂಬಸ್ಥರು ತಿಳಿಸಿದ್ದಾರೆ. ಪಿಚ್ಚೈಕಾರನ್ 2 ಸಿನಿಮಾವನ್ನು ಬೇಸಿಗೆಯಲ್ಲಿ ಬಿಡುಗಡೆ ಮಾಡುವುದಾಗಿ ಮೊನ್ನೆಯಷ್ಟೇ ಘೋಷಿಸಿ ಅವರು ಚಿತ್ರೀಕರಣದಲ್ಲಿ ತೊಡಗಿದ್ದರು.
Live Tv
[brid partner=56869869 player=32851 video=960834 autoplay=true]
Join our Whatsapp group by clicking the below link
https://chat.whatsapp.com/E6YVEDajTzH06LOh77r25k