ಬೆಳಗಾವಿ: ನಗರದ ಚಿತ್ರಮಂದಿರದಲ್ಲಿ ಶಾರುಖ್ ಖಾನ್ (Shahrukh Khan) ಅಭಿನಯದ ಪಠಾಣ್ (Pathan) ಚಿತ್ರ ಪ್ರದರ್ಶನ ಮಾಡದಂತೆ ಒತ್ತಾಯಿಸಿ ಹಿಂದೂಪರ ಸಂಘಟನೆಗಳು (Pro Hindu Organizations) ಪಠಾಣ್ ಚಿತ್ರದ ಬ್ಯಾನರ್ ಹರಿದು ಆಕ್ರೋಶ ಹೊರಹಾಕಿದರು.
ಬೆಳಗಾವಿಯ (Belagavi) ಸ್ವರೂಪ ಚಿತ್ರಮಂದಿರ ಮೇಲೆ ಹಿಂದೂಪರ ಸಂಘಟನೆಗಳ ಕಾರ್ಯಕರ್ತರ ದಾಳಿ ಮಾಡಿದ್ದು, ಸ್ವರೂಪ ಚಿತ್ರಮಂದಿರ ಬಳಿ ಹಾಕಿದ್ದ ಶಾರುಖ್ ಖಾನ್ ನಟನೆಯ ಪಠಾಣ್ ಚಿತ್ರದ ಬ್ಯಾನರ್ ಹರಿದು ಆಕ್ರೋಶ ವ್ಯಕ್ತಪಡಿಸಿದರು. ತಕ್ಷಣ ಸ್ಥಳಕ್ಕೆ ಆಗಮಿಸಿದ ಪೊಲೀಸರು (Police) ಹಿಂದೂಪರ ಸಂಘಟನೆ ಕಾರ್ಯಕರ್ತರನ್ನು ವಶಕ್ಕೆ ಪಡೆದುಕೊಂಡರು. ಇದನ್ನೂ ಓದಿ: Oscars 2023: `ಆರ್‌ಆರ್‌ಆರ್’ ಸಿನಿಮಾದ `ನಾಟು ನಾಟು’ ಸಾಂಗ್ ನಾಮಿನೇಟ್
ಬೆಳಗಾವಿಯ ಸ್ವರೂಪ ಚಿತ್ರಮಂದಿರ ಬಳಿ ಉದ್ವಿಗ್ನ ಪರಿಸ್ಥಿತಿ ಹಿನ್ನೆಲೆಯಲ್ಲಿ ಮುಂಜಾಗ್ರತಾ ಕ್ರಮವಾಗಿ ಚಿತ್ರಮಂದಿರದ ಎದುರು ಬಿಗಿ ಭದ್ರತೆ ಒದಗಿಸಲಾಗಿದೆ. ಓರ್ವ ಸಿಪಿಐ ನೇತೃತ್ವದಲ್ಲಿ ಪೊಲೀಸ್ ಬಿಗಿ ಬಂದೋಬಸ್ತ್ ನಿಯೋಜನೆ ಮಾಡಲಾಗಿದ್ದು, ಚಿತ್ರಮಂದಿರ ಬಳಿ ಒಂದು ಕೆಎಸ್‍ಆರ್‌ಪಿ ತುಕಡಿ ಇರಿಸಲಾಗಿದೆ. ಖಡೇಬಜಾರ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ. ಇದನ್ನೂ ಓದಿ: ರಾತ್ರಿ 2 ಗಂಟೆಗೆ ಅಸ್ಸಾಂ ಸಿಎಂಗೆ ಶಾರುಖ್ ಖಾನ್ ಫೋನ್ ಕಾಲ್
Live Tv
[brid partner=56869869 player=32851 video=960834 autoplay=true]
Join our Whatsapp group by clicking the below link
https://chat.whatsapp.com/E6YVEDajTzH06LOh77r25k