Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading:‘ಸೈರನ್’ ಚಿತ್ರದ ಮಂಗ್ಲಿ ಹಾಡಿಗೆ ಪ್ರೇಕ್ಷಕ ಫಿದಾ
Share
NotificationShow More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Cinema | ‘ಸೈರನ್’ ಚಿತ್ರದ ಮಂಗ್ಲಿ ಹಾಡಿಗೆ ಪ್ರೇಕ್ಷಕ ಫಿದಾ

Cinema

‘ಸೈರನ್’ ಚಿತ್ರದ ಮಂಗ್ಲಿ ಹಾಡಿಗೆ ಪ್ರೇಕ್ಷಕ ಫಿದಾ

Public TV
Last updated: January 25, 2023 6:42 pm
Public TV
Share
3 Min Read
FotoJet 3 37
SHARE

ಕರವೇ ರಾಜ್ಯಾಧ್ಯಕ್ಷ ಪ್ರವೀಣ್ ಶೆಟ್ಟಿ (Praveen Shetty) ಅವರ ಮಗ ಪ್ರವೀರ್ ಶೆಟ್ಟಿ (Praveer Shetty) ಸ್ಯಂಡಲ್‌ವುಡ್‌ಗೆ ನಾಯಕನಾಗಿ ಎಂಟ್ರಿ ಕೊಡುತ್ತಿರುವುದು ನಿಮಗೆಲ್ಲಾ ಗೊತ್ತೆ ಇದೆ. ಪ್ರವೀರ್ ನಟನೆಯ ‘ಸೈರನ್’ (Siren) ಸಿನಿಮಾ ಬಿಡುಗಡೆಗೆ ಸಿದ್ದವಾಗಿದ್ದು, ಇತ್ತೀಚೆಗೆ ಈ ಚಿತ್ರದ ಹಾಡೊಂದು ಬಿಡುಗಡೆಯಾಗಿದೆ. ಜಾಲತಾಣದಲ್ಲಿ ವೈರಲ್ ಆಗುತ್ತಿರುವ ಈ ಗೀತೆಗೆ ಯುವ ಪ್ರತಿಭೆ ಚಿನ್ಮಯ ಸಾಹಿತ್ಯ ಬರೆದಿದ್ದಾರೆ. ‘ಮೈ ಆಟೋಗ್ರಾಫ್’ ಖ್ಯಾತಿಯ ಭಾರತ್ವಾಜ್ ಸಂಗೀತ ಸಂಯೋಜಿಸಿರುವ ‘ಎಣ್ಣೆ ಹೊಡೆಯೋ ಟೈಮಲ್ಲಿ …’ ಸಾಂಗ್‌ನ್ನು (Song) ಮಂಗ್ಲಿ (Mangli)  ಹಾಡಿದ್ದಾರೆ. ಲಹರಿ ಯೂಟ್ಯೂಬ್‌ನಲ್ಲಿ ಗೀತೆ ರಿಲೀಸ್ ಆಗಿದ್ದು, ಹಾಡು ಬಿಡುಗಡೆ ಕಾರ್ಯಕ್ರಮದಲ್ಲಿ ಮಾತನಾಡಿದ ಲಹರಿ ವೇಲು ‘ಇದು ಪ್ರವೀರ್ ಶೆಟ್ಟಿ ಅವರ ಮೊದಲ ಸಿನಿಮಾ ಆಗಿದ್ದು, ತಯಾರಿ ಮಾಡಿಕೊಂಡು ಚಿತ್ರರಂಗಕ್ಕೆ ಬಂದಿದ್ದಾರೆ. ಹಾಡು ಚನ್ನಾಗಿ ಬಂದಿದೆ. ಜಾನಪದ ಸೊಗಡಿನ ಮೂಲದಿಂದ ಬಂದಂತ ಸಿಂಗರ್‌ಗಳು ಹಾಡಿರುವ ಗೀತೆಗಳು ಚನ್ನಾಗಿರುತ್ತವೆ. ಹಾಗೆಯೇ ಮಂಗ್ಲಿ ಕೂಡ ಜಾನಪದ ಮೂಲದಿಂದ ಬಂದವರು. ತಾಂತ್ರಿಕವಾಗಿ ಸಿನಿಮಾ ಸ್ಟ್ರಾಂಗ್ ಆಗಿ ಬಂದಿದೆ’ ಎಂದು ಹೇಳಿದರು. ಕಾರ್ಯಕ್ರಮಕ್ಕೆ ಅಥಿತಿಯಾಗಿ ಆಗಮಿಸಿದ್ದ ನಿರ್ಮಾಪಕ ಸಂಘದ ಅಧ್ಯಕ್ಷರಾದ ಉಮೇಶ್ ಬಣಕಾರ್ ತಂಡಕ್ಕೆ ಶುಭ ಹಾರೈಸಿದರು.

FotoJet 1 53

ಅಂದಂಗೆ ಈ ಚಿತ್ರವನ್ನು ಮೂಲತಃ ತಮಿಳುನಾಡಿನವರಾದ ರಾಜಾ ವೆಂಕಯ್ಯ ನಿರ್ದೇಶಿಸಿದ್ದಾರೆ. ಕಳೆದ 30 ವರ್ಷಗಳಿಂದ ನಿರ್ದೇಶಕ ಮುರುಗ ದಾಸ್ ಸೇರಿದಂತೆ ಹಲವರ ಬಳಿ ಚಿತ್ರರಂಗದ ವಿವಿಧ ವಿಭಾಗಗಳಲ್ಲಿ ಕೆಲಸ ಮಾಡಿರುವ ರಾಜಾ ವೆಂಕಯ್ಯ ಕನ್ನಡ ಕಲಿತು ಸಿನಿಮಾಗೆ ಆ್ಯಕ್ಷನ್-ಕಟ್ ಹೇಳಿರುವುದು ವಿಶೇಷ. ಇದು ಅವರು ನಿರ್ದೇಶನದ ಮೊದಲ ಕನ್ನಡ ಸಿನಿಮಾ. “ಸೈರನ್’ ಚಿತ್ರದ ಕೆಲಸಗಳು ಈಗಾಗಲೇ ಮುಗಿದಿದ್ದು, ಫೆಬ್ರವರಿ ಮೂರನೇ ವಾರದಲ್ಲಿ ರಿಲೀಸ್ ಮಾಡುವ ಪ್ಲ್ಯಾನ್ ಇದೆ. ಈ ಸಿನಿಮಾವನ್ನು ನಾವು ಕನ್ನಡ ಮತ್ತು ತಮಿಳುನಲ್ಲಿ ಶೂಟ್ ಮಾಡಿದ್ದು, ತೆಲುಗು ಮತ್ತು ಮಲಯಾಳಂಗೆ ಡಬ್ ಮಾಡಿ ರಿಲೀಸ್ ಮಾಡುತ್ತಿದ್ದೇವೆ. ನನ್ನ ಮೊದಲ ಚಿತ್ರಕ್ಕೆ ‘ಡೆಕ್ಕನ್ ಕಿಂಗ್’ ಬ್ಯಾನರ್‌ನಲ್ಲಿ ಸಿನಿಮಾ ನಿರ್ಮಿಸಿರುವ ಬಿಜ್ಜು ಶಿವಾನಂದ್ ತುಂಬಾ ಸಪೋರ್ಟ್ ಮಾಡಿದ್ದಾರೆ. ಮೂಲತಃ ನಾನು ಸಂಕಲನಕಾರನಾಗಿ ಸಾಕಷ್ಟು ಸಿನಿಮಾಗೆ ಕೆಲಸ ಮಾಡಿದ್ದೇನೆ. ಇದೊಂದು ಇನ್ವೆಸ್ಟಿಗೇಷನ್ ಮರ್ಡರ್ ಮಿಸ್ಟರಿ ಕಥೆ ಹೊಂದಿದ್ದು, ಇಲ್ಲಿ ನಾಯಕ ಪ್ರವೀರ್ ಯಂಗ್ ಆ್ಯಂಡ್ ಯನರ್ಜಿ ಇರುವ ಇನ್ವೆಸ್ಟಿಗೇಷನ್ ಆಫೀಸರ್ ಪಾತ್ರ ಮಾಡಿದ್ದಾರೆ’ ಎಂದು ಹೇಳಿದರು. ಇದನ್ನೂ ಓದಿ: ರಾಜಮೌಳಿ ಹತ್ಯೆಗೆ ಸ್ಕೆಚ್ ಹಾಕಿದ ಡೈರೆಕ್ಟರ್ಸ್ : ಬಾಯ್ಬಿಟ್ಟ ವರ್ಮಾ

FotoJet 2 45

ನಂತರ ಮಾತನಾಡಿದ ಚಿತ್ರದ ನಾಯಕ ಪ್ರವೀರ್ ಶೆಟ್ಟಿ ‘ನಾನು ಇದರಲ್ಲಿ ಪೊಲೀಸ್ ಪಾತ್ರ ಮಾಡಿದ್ದೇನೆ. ಇದು ನನ್ನ ಮೊದಲ ಸಿನಿಮಾ. ಬಾಂಬೆಯ ಅನುಪಮ್ ಖೇರ್ ಟ್ರೈನಿಂಗ್‌ ಶಾಲೆಯಲ್ಲಿ  ತರಬೇತಿ ಪಡೆದಿದ್ದು, ಈ ಚಿತ್ರದಲ್ಲಿ ಯಂಗ್ ಇನ್ವೆಸ್ಟಿಗೇಷನ್ ಆಫೀಸರ್ ಪಾತ್ರ ಮಾಡಿದ್ದೇನೆ’ ಎಂದರು. ಮಲಯಾಳಂ ಮೂಲದ ನಾಯಕಿ ಲಾಸ್ಯ ‘ಇದು ನನ್ನ ಅಭಿನಯದ ಮೊದಲ ಸಿನಿಮಾ. ಚಿತ್ರತಂಡ ಒಳ್ಳೆ ಅವಕಾಶ ಕೊಟ್ಟಿದ್ದು, ಇದರಲ್ಲಿ ನಾನೂ ಕೂಡ ಪೋಲಿಸ್ ಆಫೀಸರ್ ಪಾತ್ರ ಮಾಡಿದ್ದೇನೆ’ ಎನ್ನುವರು. ಹೋಟೆಲ್ ಉದ್ಯಮ ನಡೆಸುತ್ತಿರುವ ಚಿತ್ರದ ನಿರ್ಮಾಪಕ ಬಿಜ್ಜು ಶಿವಾನಂದ್ ಮಾತನಾಡಿ ‘ಈ ಚಿತ್ರವನ್ನು ನಾವು ಗೆಳೆಯರು ಸೇರಿ ಕಷ್ಟಪಟ್ಟು ಮಾಡಿದ್ದೇವೆ. ಈ ಸಿನಿಮಾಗಾಗಿ ಎರಡು ವರ್ಷ ಶ್ರಮ ಹಾಕಲಾಗಿದೆ’ ಎಂದರು. ಇದೇ ಸಂದರ್ಭದಲ್ಲಿ ಕರವೇ ರಾಜ್ಯಾಧ್ಯಕ್ಷ ಪ್ರವೀಣ್ ಶೆಟ್ಟಿ ಮಗನ ಚಿತ್ರಕ್ಕೆ ಶುಭ ಹಾರೈಸಿದರು. ಚಿತ್ರಕ್ಕೆ ‘ಮೈ ಆಟೋಗ್ರಾಫ್’ ಖ್ಯಾತಿಯ ಭಾರದ್ವಾಜ್ ಸಂಗೀತ, ನಾಗೇಶ್ ಆಚಾರ್ ಛಾಯಾಗ್ರಹಣ, ಕಲೈ ಮಾಸ್ಟರ್ ನೃತ್ಯವಿದೆ. ಚಿತ್ರವನ್ನು ಲಿಖಿತ್ ಫಿಲ್ಮಸ್‌ನ ರಮೇಶ್ ಬಾಬು ವಿತರಣೆ ಮಾಡಲಿದ್ದಾರೆ.

Live Tv
[brid partner=56869869 player=32851 video=960834 autoplay=true]

Join our Whatsapp group by clicking the below link
https://chat.whatsapp.com/E6YVEDajTzH06LOh77r25k

TAGGED:Manglipraveen shettyPraveer Shettysirensongಪ್ರವೀಣ್ ಶೆಟ್ಟಿಪ್ರವೀರ್ ಶೆಟ್ಟಿಮಂಗ್ಲಿಸೈರನ್ಹಾಡು
Share This Article
FacebookWhatsappWhatsappTelegram

Cinema news

Vijay Trisha Krishnan
ತಿರುಪತಿಯಿಂದ ನೇರ ವಿಜಯ್ ಮನೆಗೆ ತೆರಳಿದ ತ್ರಿಷಾ
CinemaLatestNationalTop Stories
Trisha at tirupati
ನಟ ವಿಜಯ್‌ ಗೆಲುವಿಗಾಗಿ ತಿಮ್ಮಪ್ಪನ ಮೊರೆ ಹೋದ ತ್ರಿಷಾ
CinemaLatestNationalTop Stories
darshan 1
ಜೈಲಿನಲ್ಲಿ ಅಮಾನವೀಯ ವರ್ತನೆ, ಸಹಕೈದಿಗಳಿಂದ ಬೆದರಿಕೆ- ವೃತ್ತಿಜೀವನಕ್ಕೆ ಮರಣಗಂಟೆ: ಸುಪ್ರೀಂನಲ್ಲಿ ದರ್ಶನ್ ಅಳಲು
Bengaluru CityCinemaCourtLatestMain Post
Sara Govindu
ನಿರ್ಮಾಪಕ ಸಾ.ರಾ ಗೋವಿಂದ್ ವಿರುದ್ಧ ಎಫ್‌ಐಆರ್‌
Bengaluru CityCrimeDistrictsKarnatakaLatestSandalwoodTop Stories

You Might Also Like

ಸಾಂದರ್ಭಿಕ ಚಿತ್ರ
Latest

ಬಂಗಾಳದಲ್ಲಿ ಕೇಸರಿ ಸುನಾಮಿ – ಮಮತಾ ಆಡಳಿತಕ್ಕೆ ಅಂತ್ಯ ಹಾಡಲು ಆರ್‌ಎಸ್‌ಎಸ್ ‘ಸೈಲೆಂಟ್ ಆಪರೇಷನ್’ ಯಶಸ್ವಿ!

Public TV
ByPublic TV
14 minutes ago
Duck
Chikkamagaluru

ಬಾತುಕೋಳಿ ಹಿಡಿಯಲು ಹೋಗಿ ನಾಲ್ವರು ಮಕ್ಕಳು ನೀರುಪಾಲು – ಮುಗಿಲು ಮುಟ್ಟಿದ ಪೋಷಕರ ಆಕ್ರಂದನ

Public TV
ByPublic TV
16 minutes ago
01 1
Latest

ಗಂಗೋತ್ರಿಯಿಂದ ಗಂಗಾ ಸಾಗರದ ತನಕ ಕಮಲ ಅರಳಿದೆ, ಬಂಗಾಳ ಭಯಮುಕ್ತವಾಗಿದೆ: ಮೋದಿ

Public TV
ByPublic TV
25 minutes ago
pm modi 5
Latest

ಬಂಗಾಳದಲ್ಲಿ ಕಮಲ ಅರಳಿದೆ, ಅದ್ಭುತ ಜನಾದೇಶ ಸಿಕ್ಕಿದೆ: ಮೋದಿ ಕೃತಜ್ಞತೆ

Public TV
ByPublic TV
1 hour ago
Siddaramaiah
Bengaluru City

SIR ಮೋಸದಾಟ, ಚುನಾವಣಾ ಆಯೋಗದ ಕೈವಾಡದಿಂದ ಮಮತಾಗೆ ಸೋಲು: ಸಿದ್ದರಾಮಯ್ಯ ಆಕ್ರೋಶ

Public TV
ByPublic TV
1 hour ago
Narenndra Modi BJP Victory Specch delhi lection
Latest

ವಾಜಪೇಯಿ ಕನಸು ನನಸು – ಬಿಜೆಪಿ ಆಡಳಿತ ರಾಜ್ಯಗಳ ಸಂಖ್ಯೆ 20ಕ್ಕೆ ಏರಿಕೆ

Public TV
ByPublic TV
1 hour ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?