Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಎಲ್ಲವನ್ನೂ ಕೊಟ್ಟಿರುವ ಬಿಜೆಪಿ ಬಿಡುವ ಮಾತೇ ಇಲ್ಲ – ಸಚಿವ ನಾರಾಯಣಗೌಡ ಸ್ಪಷ್ಟನೆ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Bengaluru City | ಎಲ್ಲವನ್ನೂ ಕೊಟ್ಟಿರುವ ಬಿಜೆಪಿ ಬಿಡುವ ಮಾತೇ ಇಲ್ಲ – ಸಚಿವ ನಾರಾಯಣಗೌಡ ಸ್ಪಷ್ಟನೆ

Bengaluru City

ಎಲ್ಲವನ್ನೂ ಕೊಟ್ಟಿರುವ ಬಿಜೆಪಿ ಬಿಡುವ ಮಾತೇ ಇಲ್ಲ – ಸಚಿವ ನಾರಾಯಣಗೌಡ ಸ್ಪಷ್ಟನೆ

Public TV
Last updated: February 2, 2023 4:21 pm
Public TV
Share
2 Min Read
narayana gowda
SHARE

ಬೆಂಗಳೂರು: ಬಿಜೆಪಿ (BJP) ತೊರೆದು, ಕಾಂಗ್ರೆಸ್‌ (Congress) ಸೇರುತ್ತೇನೆ ಎಂಬುದು ಕೇವಲ ವದಂತಿ ಅಷ್ಟೇ ಎಂದು ರೇಷ್ಮೆ, ಯುವ ಸಬಲೀಕರಣ ಮತ್ತು ಕ್ರೀಡಾ ಸಚಿವ ಡಾ. ನಾರಾಯಣಗೌಡ (Narayana Gowda) ಸ್ಪಷ್ಟಪಡಿಸಿದ್ದಾರೆ.

ಈ ಕುರಿತು ಮಾಧ್ಯಮ ಪ್ರಕಟಣೆ ಹೊರಡಿಸಿರುವ ಅವರು, ಕೆ.ಆರ್. ಪೇಟೆಯ (K.R. Pet) ಹೊನ್ನೇನಹಳ್ಳಿಯಲ್ಲಿ ನಡೆದ ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ಪ್ರತಿಮೆ ಅನಾವರಣ ಕಾರ್ಯಕ್ರಮದಲ್ಲಿ ಸಿದ್ದರಾಮಯ್ಯನವರ ಕುರಿತು ಹೇಳಿರುವ ಮಾತನ್ನು ತಪ್ಪಾಗಿ ಅರ್ಥೈಸಲಾಗಿದೆ. ಕಾರ್ಯಕ್ರಮದಲ್ಲಿ ಸಾಂದರ್ಭಿಕವಾಗಿ ಸಿದ್ದರಾಮಯ್ಯರ ಬಗ್ಗೆ ಉಲ್ಲೇಖಿಸಲಾಯಿತು. ಅಂದ ಮಾತ್ರಕ್ಕೆ ಬಿಜೆಪಿ ತೊರೆದು ಕಾಂಗ್ರೆಸ್ ಸೇರುತ್ತೇನೆ ಎಂದಲ್ಲ. ನನಗೆ ಕಾಂಗ್ರೆಸ್ ಮತ್ತು ಜೆಡಿಎಸ್ ಎರಡೂ ಸಮಾನ ಎದುರಾಳಿಗಳು ಎಂದು ತಿಳಿಸಿದ್ದಾರೆ. ಇದನ್ನೂ ಓದಿ: ದೂರ ದೃಷ್ಟಿಯ ಜನಸ್ನೇಹಿ ಬಜೆಟ್: ಎಂಟಿಬಿ ನಾಗರಾಜು

bjp flag

ಕೆ.ಆರ್. ಪೇಟೆಯಲ್ಲಿ ಕಮಲ ಅರಳಿಸುವ ಮೂಲಕ ಮಂಡ್ಯದಲ್ಲಿ ಬಿಜೆಪಿ ಖಾತೆ ತೆರೆದ ನನಗೆ ಪಕ್ಷ ಎಲ್ಲವನ್ನೂ ನೀಡಿದೆ. ನಿಕಟಪೂರ್ವ ಮುಖ್ಯಮಂತ್ರಿಗಳಾದ ಬಿ.ಎಸ್.ಯಡಿಯೂರಪ್ಪ ಹಾಗೂ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಎರಡ್ಮೂರು ಖಾತೆಗಳನ್ನು ನೀಡುವುದರ ಜೊತೆಗೆ ಕೆ.ಆರ್. ಪೇಟೆ ಕ್ಷೇತ್ರದ ಅಭಿವೃದ್ಧಿಗೆ 2 ಸಾವಿರ ಕೋಟಿಗೂ ಹೆಚ್ಚಿನ ಅನುದಾನವನ್ನು ನೀಡಿದ್ದಾರೆ. ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರ ನೇತೃತ್ವದಲ್ಲಿ ಡಬಲ್ ಎಂಜಿನ್ ಸರ್ಕಾರದಲ್ಲಿ ಯಡಿಯೂರಪ್ಪ ಅವರ ಮಾರ್ಗದರ್ಶನ, ಬಸವರಾಜ ಬೊಮ್ಮಾಯಿ ಅವರ ನಾಯಕತ್ವದಲ್ಲಿ ಕ್ಷೇತ್ರದ ಜೊತೆಗೆ ಜಿಲ್ಲೆಯ ಸಮಗ್ರ ಅಭಿವೃದ್ಧಿಗೆ ಪಣ ತೊಟ್ಟಿದ್ದೇನೆ‌ ಎಂದು ಹೇಳಿದ್ದಾರೆ.

ಮಂಡ್ಯ ಜಿಲ್ಲೆಯಾದ್ಯಂತ ಬಿಜೆಪಿಗೆ ಉತ್ತಮ ವಾತಾವರಣವಿದ್ದು, ಈ ಬಾರಿ ನಾಲ್ಕೈದು ಕ್ಷೇತ್ರಗಳಲ್ಲಿ ಗೆಲ್ಲುವ ವಿಶ್ವಾಸವಿದೆ. ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರ ನಾಯಕತ್ವದಲ್ಲಿ, ಚುನಾವಣಾ ಚಾಣಕ್ಯ ಅಮಿತ್ ಶಾ ಅವರ ತಂತ್ರಗಾರಿಕೆಯಿಂದ ಮಂಡ್ಯ ಸೇರಿದಂತೆ ಹಳೇ ಮೈಸೂರು ಭಾಗದಲ್ಲಿ ಬಿಜೆಪಿ ಅತಿ ಹೆಚ್ಚು ಸ್ಥಾನಗಳನ್ನು ಗೆಲ್ಲುವ ಮೂಲಕ ಕಾಂಗ್ರೆಸ್-ಜೆಡಿಎಸ್‌ಗೆ ತಕ್ಕ ಪಾಠ ಕಲಿಸಲಾಗುತ್ತದೆ. ಜಿಲ್ಲೆಯಲ್ಲಿ ಬಿಜೆಪಿ ಪಕ್ಷವನ್ನು ಮತ್ತಷ್ಟು ಪ್ರಬಲವಾಗಿ ಸಂಘಟಿಸುವ ಗುರಿ ಹೊಂದಲಾಗಿದ್ದು, ಈಗಾಗಲೇ ಅಮಿತ್ ಶಾ ಅವರ ನೇತೃತ್ವದಲ್ಲಿ ಸಭೆಗಳನ್ನು ನಡೆಸಲಾಗಿದೆ‌ ಎಂದು ತಿಳಿಸಿದ್ದಾರೆ. ಇದನ್ನೂ ಓದಿ: ಜನರನ್ನು ಮರಳು ಮಾಡಲು ಕೇಂದ್ರ ಸರ್ಕಾರ ಬಜೆಟ್ ಘೋಷಣೆ ಮಾಡಿದೆ: ಹೆಚ್‍ಡಿಕೆ

ಅಮಿತ್ ಶಾ ಅವರ ಎಂಟ್ರಿಯಿಂದ ಕಾಂಗ್ರೆಸ್-ಜೆಡಿಎಸ್‌ಗೆ ನಡುಕ ಶುರುವಾಗಿದೆ. ಆದುದರಿಂದ ರಾಜಕೀಯ ಕಾರ್ಯಕ್ರಮವಲ್ಲದ, ಸಮಾಜದ ಕಾರ್ಯಕ್ರಮದ ಭಾಷಣದಲ್ಲಿ ಸಾಂದರ್ಭಿಕವಾಗಿ ಹೇಳಿದ ಮಾತನ್ನೇ ರಾಜಕೀಯ ವಿರೋಧಿಗಳು ತಪ್ಪಾಗಿ ಬಿಂಬಿಸುವ ಮೂಲಕ ನಮ್ಮ ಕಾರ್ಯಕರ್ತರಲ್ಲಿ ಗೊಂದಲ ಸೃಷ್ಟಿಸಲು ಷಡ್ಯಂತ್ರ ಮಾಡುತ್ತಿದ್ದಾರೆ. ಆದರೆ ಯಾವುದೇ ಕಾರಣಕ್ಕೂ ಪಕ್ಷ ಬಿಡುವ ಮಾತೇ ಇಲ್ಲ. ರಾಜಕೀಯ ವಿರೋಧಿಗಳು ಸೃಷ್ಟಿಸುತ್ತಿರುವ ಗೊಂದಲಗಳಿಗೆ ಕವಡೆ ಕಾಸಿನ ಕಿಮ್ಮತ್ತಿಲ್ಲ. ನಮ್ಮ ರಾಜಕೀಯ ಎದುರಾಳಿಗಳಾದ ಕಾಂಗ್ರೆಸ್-ಜೆಡಿಎಸ್ ಎದುರಿಸಿ ಮಂಡ್ಯದಲ್ಲಿ (Mandya) ಬಿಜೆಪಿ ಭದ್ರವಾಗಿ ಬೇರೂರಲಿದೆ ಎಂದು ಪ್ರಕಟಣೆ ಮೂಲಕ ಭರವಸೆ ಮಾತನ್ನಾಡಿದ್ದಾರೆ.

Live Tv
[brid partner=56869869 player=32851 video=960834 autoplay=true]

Join our Whatsapp group by clicking the below link
https://chat.whatsapp.com/E6YVEDajTzH06LOh77r25k

TAGGED:bjpDrNarayanaGowdaMandya.ನಾರಾಯಣಗೌಡಬಿಜೆಪಿಮಂಡ್ಯ
Share This Article
Facebook Whatsapp Whatsapp Telegram

Cinema news

Monalisa
ಕುಂಭಮೇಳದ ವೈರಲ್ ಹುಡುಗಿ ಮೊನಾಲಿಸಾ ಈಗ ಗರ್ಭಿಣಿ
Cinema Latest Main Post National
Ranya Rao
ಇಂದಿಗೆ ಕಾಫಿಫೋಸಾ ಅವಧಿ ಅಂತ್ಯ – ಜೈಲಿನಿಂದ ರನ್ಯಾರಾವ್‌ ಬಿಡುಗಡೆ
Cinema Crime Karnataka Latest Main Post
ranya rao 2 1
ಗೋಲ್ಡ್ ಸ್ಮಗ್ಲಿಂಗ್ ಕೇಸ್ – ಇಂದು ರನ್ಯಾ ರಾವ್ ಜೈಲಿನಿಂದ ರಿಲೀಸ್
Bengaluru City Cinema Districts Karnataka Latest Top Stories
Duniya Vijay 1
ಝಾಂಬಿ ಡ್ರಗ್ಸ್ ಕೇಸಲ್ಲಿ ನಟ ದುನಿಯಾ ವಿಜಯ್‌ಗೆ ಸಂಕಷ್ಟ – ಡಿಲೀಟ್ ವಿಡಿಯೋ ರಿಟ್ರೀವ್‌ಗಾಗಿ ಇನ್‌ಸ್ಟಾಗೆ ಪೊಲೀಸರ ಪತ್ರ
Bengaluru City Cinema Districts Karnataka Latest Sandalwood Top Stories

You Might Also Like

daily horoscope dina bhavishya
Astrology

ದಿನ ಭವಿಷ್ಯ: 23-04-2026

Public TV
By Public TV
28 minutes ago
Ravindra Jadeja
Cricket

ಜಡೇಜಾ ಜಾದೂ – ತವರಲ್ಲೇ ಜೈಂಟ್ಸ್‌ ಕೆಡವಿ ಆರ್‌ಸಿಬಿ ಹಿಂದಿಕ್ಕಿದ ರಾಯಲ್ಸ್‌

Public TV
By Public TV
8 hours ago
Shivaraj Tangadagi
Districts

ಕುಡಿವ ನೀರಿಗಾಗಿ ಸಚಿವ ತಂಗಡಗಿ ಕಾರಿಗೆ ಗ್ರಾಮಸ್ಥರ ಮುತ್ತಿಗೆ 

Public TV
By Public TV
9 hours ago
Election vote ink
Latest

ಇಂದು ತಮಿಳುನಾಡು, ಪಶ್ಚಿಮ ಬಂಗಾಳದಲ್ಲಿ ಚುನಾವಣೆ

Public TV
By Public TV
9 hours ago
BYRaghavendra
Districts

ಮೆಗ್ಗಾನ್ ಆಸ್ಪತ್ರೆಯಲ್ಲಿ ಎನ್ಐಸಿಯು ಘಟಕ ಸ್ಥಾಪನೆಗೆ ಕೇಂದ್ರದಿಂದ 5 ಕೋಟಿ ಅನುದಾನ: ಬಿವೈಆರ್

Public TV
By Public TV
9 hours ago
gas tanker overturns near kalghatagi traffic halted on national highway 63
Districts

ಕಲಘಟಗಿ ಬಳಿ ಗ್ಯಾಸ್ ಟ್ಯಾಂಕರ್ ಪಲ್ಟಿ – ರಾಷ್ಟ್ರೀಯ ಹೆದ್ದಾರಿ 63ರಲ್ಲಿ ಸಂಚಾರ ಸ್ಥಗಿತ, ಮಾರ್ಗ ಬದಲಾವಣೆ

Public TV
By Public TV
9 hours ago

Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?