ನಾಳೆ ಮತ್ತೆ ಕರ್ನಾಟಕಕ್ಕೆ ಮೋದಿ – ಒಂದೇ ದಿನ 6 ಕಾರ್ಯಕ್ರಮಗಳಿಗೆ ಚಾಲನೆ

Public TV
1 Min Read
NARENDRA MODI BASAVARAJ BOMMAI

ಬೆಂಗಳೂರು: ಪ್ರಧಾನಿ ನರೇಂದ್ರ ಮೋದಿ (Narendra Modi) ಫೆಬ್ರವರಿ 6 ರಂದು ರಾಜ್ಯದ ಬೆಂಗಳೂರು (Bengaluru) ಹಾಗೂ ತುಮಕೂರು (Tumkur) ಜಿಲ್ಲೆಗಳಿಗೆ ಆಗಮಿಸಲಿದ್ದು, ಹಲವು ಮಹತ್ತರ ಯೋಜನೆಗಳಿಗೆ ಚಾಲನೆ ನೀಡಲಿದ್ದಾರೆ.

PM Narendra Modi to inaugurate HALs new helicopter manufacturing facility in Karnatakas Tumakuru district 3

ಬೆಂಗಳೂರಿನಲ್ಲಿ ಭಾರತ ಇಂಧನ ಸಪ್ತಾಹ ಉದ್ಘಾಟಿಸಲಿದ್ದಾರೆ. ವಿವಿಧ ರಾಜ್ಯಗಳ 67 ಬಂಕ್‌ಗಳಲ್ಲಿ ಪ್ರಾಯೋಗಿಕವಾಗಿ ಶೇ.20 ಎಥೆನಾಲ್ ಮಿಶ್ರಿತ ಪೆಟ್ರೋಲ್ ವಿತರಣೆಗೂ ಚಾಲನೆ ನೀಡಲಿದ್ದಾರೆ. ಬಳಿಕ ಏಕ ಬಳಕೆ ಪ್ಲಾಸ್ಟಿಕ್‌ನಿಂದ ತಯಾರಿಸಿದ ಸಮವಸ್ತç ಬಿಡುಗಡೆ ಮಾಡಲಿದ್ದಾರೆ. ಇದನ್ನೂ ಓದಿ: ದೈವದ ಹೆಸರಿನಲ್ಲಿ ಮಹಿಳೆಗೆ ಮದುವೆ ಅಭಯ- ಜನಾಕ್ರೋಶದ ಬೆನ್ನಲ್ಲೇ ನರ್ತಕ ಪಲಾಯನ

PM Narendra Modi to inaugurate HALs new helicopter manufacturing facility in Karnatakas Tumakuru district 1

ನಂತರ ತುಮಕೂರಿಗೆ ತೆರಳಲಿರುವ ಪ್ರಧಾನಿ ಮೋದಿ, ಗುಬ್ಬಿ ತಾಲೂಕಿನ ಬಿದರಿಳ್ಳದಲ್ಲಿ 615 ಎಕರೆ ಪ್ರದೇಶದಲ್ಲಿ ನಿರ್ಮಾಣವಾಗಿರುವ ದೇಶದ ಅತಿದೊಡ್ಡ ಹೆಲಿಕಾಪ್ಟರ್ ತಯಾರಿಕಾ ಘಟಕ ಹಾಗೂ ತುಮಕೂರು ಕೈಗಾರಿಕಾ ಟೌನ್‌ಶಿಪ್ ಉದ್ಘಾಟನೆ ನೆರವೇರಿಸಲಿದ್ದಾರೆ. ಇದನ್ನೂ ಓದಿ: ಡೆತ್ ಚೇಂಬರ್ ಆಯ್ತ ಚಾರ್ಮಾಡಿ ಘಾಟ್?- 3 ವರ್ಷಗಳಲ್ಲಿ 30ಕ್ಕೂ ಹೆಚ್ಚು ಶವಗಳು ಪತ್ತೆ

ಬಳಿಕ ತಿಪಟೂರು, ಚಿಕ್ಕನಾಯಕನಹಳ್ಳಿ ವ್ಯಾಪ್ತಿಯ ಶುದ್ಧ ಕುಡಿಯುವ ನೀರು ಒದಗಿಸುವ 2 ಜಲಜೀವನ್ ಮಿಶನ್ (Jal Jeevan Mission) ಯೋಜನೆಗೆ ಗುದ್ದಲಿ ಪೂಜೆ ನೆರವೇರಿಸಲಿದ್ದಾರೆ. ಒಟ್ಟಿನಲ್ಲಿ ಒಂದೇ ದಿನದಲ್ಲಿ 6 ಕಾರ್ಯಕ್ರಮಗಳಲ್ಲಿ ಮೋದಿ ಮೋದಿ ಭಾಗಿಯಾಗಲಿದ್ದಾರೆ.

Live Tv
[brid partner=56869869 player=32851 video=960834 autoplay=true]

Join our Whatsapp group by clicking the below link
https://chat.whatsapp.com/E6YVEDajTzH06LOh77r25k

Share This Article
Leave a Comment

Leave a Reply

Your email address will not be published. Required fields are marked *