ಬೆಳಗಾವಿ: ಶಿವಸೇನೆ ವಕ್ತಾರ, ರಾಜ್ಯಸಭಾ ಸದಸ್ಯ ಸಂಜಯ್ ರಾವತ್ (Sanjay Raut) ಸೇರಿದಂತೆ ಇಬ್ಬರಿಗೆ ಬೆಳಗಾವಿಯ ಜಿಲ್ಲಾ ಮತ್ತು ಪ್ರಧಾನ ಸತ್ರ ನ್ಯಾಯಾಲಯದಿಂದ (Belagavi Court) ನಿರೀಕ್ಷಣಾ ಜಾಮೀನು (Bail) ಮಂಜೂರಾಗಿದಾಗಿದೆ.
50 ಸಾವಿರ ರೂ. ಬಾಂಡ್ ನಿಗದಿತ ಸಮಯದಲ್ಲಿ ಕೋರ್ಟ್‌ಗೆ ಹಾಜರಾಗಬೇಕೆಂದು ಕೋರ್ಟ್ ಷರತ್ತು ವಿಧಿಸಿದೆ.
ನಗರದಲ್ಲಿ 2018ರ ಮೇ 12 ರಂದು ನಡೆದಿದ್ದ ಖಾಸಗಿ ಕಾರ್ಯಕ್ರಮದಲ್ಲಿ ಸಂಜಯ್ ರಾವತ್ ವಿರುದ್ಧ ಚುನಾವಣೆ ನೀತಿ ಸಂಹಿತೆ ಉಲ್ಲಂಘಿಸಿ ಪ್ರಚೋದನಾತ್ಮಕ ಭಾಷಣ ಮಾಡಿರುವ ಆರೋಪ ಇತ್ತು. ಈ ಸಂಬಂಧ ಟಿಳಕವಾಡಿ ಠಾಣೆಯಲ್ಲಿ ಚುನಾವಣೆ ಆಯೋಗದ ಅಧಿಕಾರಿಗಳು ದೂರು ದಾಖಲಿಸಿದ್ದರು. ಇದನ್ನೂ ಓದಿ: ಮತ್ತೆ ರಮೇಶ್ ಜಾರಕಿಹೊಳಿ ದೆಹಲಿಗೆ ದಂಡಯಾತ್ರೆ – ಸಿಬಿಐ ತನಿಖೆಗೆ ತೀವ್ರ ಒತ್ತಾಯ
2 ತಿಂಗಳ ಹಿಂದಷ್ಟೇ ಸಂಜಯ್ ರಾವತ್‌ಗೆ ಬೆಳಗಾವಿಯ 4ನೇ ಜೆಎಂಎಫ್‌ಸಿ ನ್ಯಾಯಾಲಯ ಸಮನ್ಸ್ ಜಾರಿಗೊಳಿಸಿತ್ತು. ಡಿಸೆಂಬರ್ 1ಕ್ಕೆ ಕೋರ್ಟ್‌ಗೆ ಹಾಜರಾಗಿ ಸಂಜಯ್ ರಾವತ್ ಪರ ವಕೀಲರು ಸಮಯ ಕೇಳಿದ್ದರು.
Live Tv
[brid partner=56869869 player=32851 video=960834 autoplay=true]
Join our Whatsapp group by clicking the below link
https://chat.whatsapp.com/E6YVEDajTzH06LOh77r25k