ಶಾರುಖ್ ಖಾನ್ (Shahrukh Khan) ನಟನೆಯ ‘ಪಠಾಣ್’ (Pathan) ಸಿನಿಮಾ ಅಚ್ಚರಿ ಎನ್ನುವಂತೆ ಬಾಕ್ಸ್ ಆಫೀಸಿನಲ್ಲಿ ಗೆಲುವು ದಾಖಲಿಸುತ್ತಿದೆ. ಜನವರಿ 25ರಂದು ವಿಶ್ವದಾದ್ಯಂತ ಬಿಡುಗಡೆ ಆಗಿರುವ ಸಿನಿಮಾ, ಈವರೆಗೂ 901 ಕೋಟಿ ರೂಪಾಯಿ ಗಳಿಕೆ ಮಾಡುವ ಮೂಲಕ ಹೊಸ ದಾಖಲೆಯನ್ನು ಸೃಷ್ಟಿ ಮಾಡಿದೆ. ಭಾರತವೊಂದರಲ್ಲೇ 558.40 ಕೋಟಿ ಹಣ ಬಾಚಿದ್ದರೆ, ವಿದೇಶಗಳಲ್ಲಿ 342.60 ಕೋಟಿ ಲಾಭ ಮಾಡಿದೆಯಂತೆ. ಈ ಮಾಹಿತಿಯನ್ನು ಸ್ವತಃ ನಿರ್ಮಾಣ ಸಂಸ್ಥೆಯೇ ನೀಡಿದೆ. ತನ್ನ ಅಧಿಕೃತ ಸೋಷಿಯಲ್ ಮೀಡಿಯಾ ಖಾತೆಯಲ್ಲಿ ಹಂಚಿಕೊಂಡಿದೆ.
ನಾನಾ ಕಾರಣಗಳಿಂದ ಈ ಸಿನಿಮಾ ಬಾಕ್ಸ್ ಆಫೀಸಿನಲ್ಲಿ ಸೋಲಲಿದೆ ಎಂದು ವಿಶ್ಲೇಷಣೆ ಮಾಡಲಾಗಿತ್ತು. ಈ ಸಿನಿಮಾದ ಹಾಡೊಂದರಲ್ಲಿ ಕೇಸರಿ ಬಣ್ಣಕ್ಕೆ ಅವಮಾನ ಮಾಡಲಾಗಿದೆ ಎಂದು ಹಿಂದೂಪರ ಸಂಘಟನೆಗಳು ‘ಬಾಯ್ಕಾಟ್ ಪಠಾಣ್’ ಅಭಿಯಾನ ಶುರು ಮಾಡಿದ್ದವು. ದೇಶವಿರೋಧಿ ಚಟುವಟಿಕೆಯಲ್ಲಿ ಭಾಗಿಯಾದವರ ಜೊತೆ ದೀಪಿಕಾ ಪಡುಕೋಣೆ (Deepika Padukone) ಕಾಣಿಸಿಕೊಂಡಿದ್ದರು ಎನ್ನುವ ಕಾರಣಕ್ಕೂ ಸಿನಿಮಾವನ್ನು ವಿರೋಧಿಸಲಾಯಿತು. ಶಾರುಖ್ ವಿರುದ್ಧವೂ ಪ್ರತಿಭಟನೆಗಳು ನಡೆದಿದ್ದವು. ಈ ಎಲ್ಲ ಕಾರಣದಿಂದಾಗಿ ಸಿನಿಮಾ ಮಕಾಡೆ ಮಲಗಲಿದೆ ಎಂದು ಹೇಳಲಾಗಿತ್ತು. ಇದನ್ನೂ ಓದಿ:`ಕಾಂತಾರ’ ಚಿತ್ರ ಪ್ಯಾನ್ ಇಂಡಿಯಾ ಸಿನಿಮಾವಾಗಿ ಗೆಲ್ಲಲು ಅಸಲಿ ಕಾರಣ ಬಿಚ್ಚಿಟ್ಟ ರಿಷಬ್ ಶೆಟ್ಟಿ
ಆದರೆ, ಎಲ್ಲರ ನಿರೀಕ್ಷೆಯನ್ನೂ ಮೀರಿ ಈ ಸಿನಿಮಾ ಗೆದ್ದಿದೆ. ಬಿಡುಗಡೆಯಾದ ಬಹುತೇಕ ಚಿತ್ರಮಂದಿರಗಳಲ್ಲಿ ಈಗಲೂ ಹೌಸ್ ಫುಲ್ ಪ್ರದರ್ಶನ ಕಾಣುತ್ತಿದೆ. ಇತ್ತೀಚಿನ ದಿನಗಳಲ್ಲಿ ಈ ಪ್ರಮಾಣದಲ್ಲಿ ಹಣ ಗಳಿಕೆ ಮಾಡಿದ ಮೊದಲ ಸಿನಿಮಾ ಎನ್ನುವ ಹೆಗ್ಗಳಿಕೆಯೂ ಇದರದ್ದು. ಈ ಕುರಿತು ಶಾರುಖ್ ಕೂಡ ಮಾತನಾಡಿದ್ದು, ಒಳ್ಳೆಯ ಸಿನಿಮಾಗಳಿಗೆ ಜಯ ಇದ್ದೆ ಇರುತ್ತದೆ ಎಂದಿದ್ದಾರೆ. ಸಿನಿಮಾ ಗೆಲ್ಲಿಸಿದವರಿಗೆ ಧನ್ಯವಾದ ಕೂಡ ಹೇಳಿದ್ದಾರೆ.
Live Tv
[brid partner=56869869 player=32851 video=960834 autoplay=true]
Join our Whatsapp group by clicking the below link
https://chat.whatsapp.com/E6YVEDajTzH06LOh77r25k