ಮುಂಬೈ: ಸೆಲ್ಫಿ ಕೊಡಲು ನಿರಾಕರಿಸಿದ್ದಕ್ಕೆ ಅಪರಿಚಿತರ ಗುಂಪೊಂದು ಭಾರತ ಕ್ರಿಕೆಟ್ ತಂಡದ (Team India) ಆಟಗಾರ ಪೃಥ್ವಿ ಶಾ (Prithvi Shaw) ಅವರು ಪ್ರಯಾಣಿಸುತ್ತಿದ್ದ ಕಾರಿನ ಮೇಲೆ ದಾಳಿ ನಡೆಸಿದ ಘಟನೆ ಮುಂಬೈನ (Mumbai) ಪಂಚತಾರಾ ಹೋಟೆಲ್ ಬಳಿ ನಡೆದಿದೆ.
ಘಟನೆ ಸಂಬಂಧ ಓಶಿವಾರಾ ಪೊಲೀಸ್ ಠಾಣೆಯಲ್ಲಿ (Oshiwara Police Station) ದಾಖಲಾದ ದೂರಿನ ಅನ್ವಯ 8 ಮಂದಿ ವಿರುದ್ಧ ಕೇಸ್ ದಾಖಲಿಸಲಾಗಿದೆ. ಇದನ್ನೂ ಓದಿ: ದೀಪ್ತಿ ಶರ್ಮಾ ದಾಖಲೆ- ಭಾರತಕ್ಕೆ 6 ವಿಕೆಟ್‌ಗಳ ಸುಲಭ ಜಯ
ಪೃಥ್ವಿ ಶಾ ಅವರ ಸ್ನೇಹಿತ ಆಶಿಶ್ ಸುರೇಂದ್ರ ಯಾದವ್ ನೀಡಿದ ದೂರಿನ ಪ್ರಕಾರ, ಮೊದಲು ಅಪರಿಚಿತರ ಗುಂಪೊಂದು ಬೇಸ್‌ಬಾಲ್ ಬ್ಯಾಟ್‌ಗಳಿಂದ ಕಾರಿನ ಮೇಲೆ ದಾಳಿ ನಡೆಸಿತು. ನಂತರ ಹಣ ಕೊಡದಿದ್ದರೇ ಸುಳ್ಳು ಕೇಸ್ ದಾಖಲಿಸುವುದಾಗಿ ಬೆದರಿಕೆ ಹಾಕಿತು ಎಂದು ತಿಳಿಸಿದ್ದಾರೆ.
ಘಟನೆಯ ನಂತರ ಓಶಿವಾರಾ ಪೊಲೀಸರು 8 ಮಂದಿ ವಿರುದ್ಧ ಐಪಿಸಿ ಸೆಕ್ಷನ್ 143, 148, 149, 384, 437, 504, 506 ಅಡಿಯಲ್ಲಿ ಪ್ರಕರಣ ದಾಖಲಿಸಿದ್ದಾರೆ. ಇದನ್ನೂ ಓದಿ: WPL Auction 2023 ಹರಾಜು ನಡೆಸಿಕೊಟ್ಟ ಮಲ್ಲಿಕಾಗೆ ಬೇಷ್ ಎಂದ ಡಿಕೆ
ಏನಿದು ಘಟನೆ?
ಪೃಥ್ವಿ ಶಾ ಮುಂಬೈನ ಸಾಂತ್ರಾಕ್ರೂಜ್‌ನಲ್ಲಿರುವ ಪಂಚತಾರಾ ಹೋಟೆಲ್‌ಗೆ ಊಟಕ್ಕೆ ಹೋಗಿದ್ದರು. ಈ ವೇಳೆ ಅಪರಿಚಿತರ ಗುಂಪು ಅವರ ಸೆಲ್ಫಿಗೆ ಒತ್ತಾಯಿಸಿದರು. ಈ ವೇಳೆ ಪೃಥ್ವಿ ಶಾ ನಿರಾಕರಿಸಿದ್ದು, ನಾನು ಸ್ನೇಹಿತರೊಂದಿಗೆ ಊಟಕ್ಕೆ ಬಂದಿದ್ದೇನೆ. ಯಾರಿಗೂ ತೊಂದರೆ ಕೊಡಲು ಬಯಸುವುದಿಲ್ಲ ಎಂದು ಹೇಳಿದ್ದಾರೆ. ಆದರೂ ಸೆಲ್ಫಿಗೆ ಒತ್ತಾಯಿಸಿದ್ದರಿಂದ ಹೋಟೆಲ್ ವ್ಯವಸ್ಥಾಪಕರಿಗೆ ಪೃಥಿ ಶಾ ತಿಳಿಸಿದ್ದಾರೆ.
ಬಳಿಕ ಹೋಟೆಲ್‌ನವರು ಆ ಗುಂಪನ್ನು ಹೊರಗೆ ಕಳಿಸಿದ್ದಾರೆ. ಇದರಿಂದ ಕೆರಳಿದ ಆ ಗುಂಪು, ಅವರು ಊಟ ಮುಗಿಸಿ ಹೊರಗೆ ಬರುತ್ತಿದ್ದಂತೆ ಬೇಸ್‌ಬಾಲ್ ಬ್ಯಾಟ್‌ಗಳಿಂದ ಬಿಎಂಡಬ್ಲ್ಯೂ ಕಾರಿನ ಮೇಲೆ ಅಟ್ಯಾಕ್ ಮಾಡಿದ್ದಾರೆ. ಕಾರಿನ ಹಿಂಭಾಗ, ಮುಂಭಾಗದ ಗಾಜುಗಳನ್ನು ಚಚ್ಚಿ ಪುಡಿಪುಡಿ ಮಾಡಿದ್ದಾರೆ. ಅಷ್ಟೇ ಅಲ್ಲ, ಪೃಥ್ವಿ ಸ್ನೇಹಿತನಿಂದ 50 ಸಾವಿರ ರೂಪಾಯಿಗೆ ಬೇಡಿಕೆ ಇಟ್ಟಿದ್ದಾರೆ. ಅಷ್ಟರಲ್ಲಿ ಪೃಥ್ವಿ ಶಾ ಅವರನ್ನು ಬೇರೆ ಕಾರಿನಲ್ಲಿ ಕಳುಹಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಘಟನೆ ಸಂಬಂಧ ವಿವಿಧ ಸೆಕ್ಷನ್‌ಗಳ ಅಡಿಯಲ್ಲಿ ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ಆರೋಪಿಗಳಿಗಾಗಿ ಬಲೆ ಬೀಸಿದ್ದಾರೆ. ಆರೋಪಿಗಳಲ್ಲಿ ಇಬ್ಬರನ್ನು ಸನಾ ಅಲಿಯಾಸ್ ಸಪ್ನಾ ಗಿಲ್ ಮತ್ತು ಶೋಭಿತ್ ಠಾಕೂರ್ ಎಂದು ಗುರುತಿಸಲಾಗಿದೆ.
Live Tv
[brid partner=56869869 player=32851 video=960834 autoplay=true]
Join our Whatsapp group by clicking the below link
https://chat.whatsapp.com/E6YVEDajTzH06LOh77r25k