Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಪೃಥ್ವಿ ಶಾ ಯಾರು ಅಂತಾನೇ ಗೊತ್ತಿಲ್ಲ, ಆತ ಕುಡಿದು ಬಂದಿದ್ದ – ಸಪ್ನಾ ಗಿಲ್
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Cinema | ಪೃಥ್ವಿ ಶಾ ಯಾರು ಅಂತಾನೇ ಗೊತ್ತಿಲ್ಲ, ಆತ ಕುಡಿದು ಬಂದಿದ್ದ – ಸಪ್ನಾ ಗಿಲ್

Cinema

ಪೃಥ್ವಿ ಶಾ ಯಾರು ಅಂತಾನೇ ಗೊತ್ತಿಲ್ಲ, ಆತ ಕುಡಿದು ಬಂದಿದ್ದ – ಸಪ್ನಾ ಗಿಲ್

Public TV
Last updated: February 18, 2023 10:32 pm
Public TV
Share
3 Min Read
Sapna Gill 2 1
SHARE

ಮುಂಬೈ: ಕ್ರಿಕೆಟಿಗ ಪೃಥ್ವಿ ಶಾ (Prithvi Shaw) ಅವರ ಕಾರಿನ ಮೇಲೆ ದಾಳಿ ನಡೆಸಿದ ಪ್ರಕರಣದಲ್ಲಿ ಬಂಧಿತರಾಗಿರುವ ಸೋಷಿಯಲ್ ಮೀಡಿಯಾ ಸ್ಟಾರ್ ಸಪ್ನಾ ಗಿಲ್ (Sapna Gill) ಅವರನ್ನ ಓಶಿವಾರಾ ಪೊಲೀಸರು ಶುಕ್ರವಾರ ಅಂಧೇರಿ ನ್ಯಾಯಾಲಯಕ್ಕೆ (Andheri Court) ಹಾಜರುಪಡಿಸಿದ್ದು, ನ್ಯಾಯಾಲಯವು ಫೆಬ್ರವರಿ 20ರ ವರೆಗೆ ಪೊಲೀಸ್ ಕಸ್ಟಡಿಗೆ ಒಪ್ಪಿಸಿದೆ.

ಶುಕ್ರವಾರ ಅಂಧೇರಿ ನ್ಯಾಯಾಲಯದಲ್ಲಿ ಸಪ್ನಾಗಿಲ್ ಪರ ವಾದ ವಕೀಲರು (lawyer) ಮಾಧ್ಯಮ ವರದಿಗಳನ್ನು ಉಲ್ಲೇಖಿಸಿ ವಾದ ಮಂಡಿಸಿದ್ದರು. ಈ ವೇಳೆ ಪೃಥ್ವಿ ಶಾಗೆ ಮದ್ಯಪಾನ ಅಭ್ಯಾಸವಿದೆ ಎಂದು ಹೇಳಿದ್ದರು. ಇದನ್ನೂ ಓದಿ: ಸೆಲ್ಫಿ ಕೊಡದಿದ್ದಕ್ಕೆ ಟೀಂ ಇಂಡಿಯಾ ಆಟಗಾರ ಪೃಥ್ವಿ ಶಾ ಕಾರಿನ ಮೇಲೆ ಅಟ್ಯಾಕ್

Sapna gill 5

ಸಪ್ನಾಗಿಲ್ 50 ಸಾವಿರ ಕೊಟ್ಟು ಕೇಸ್ ಮುಗಿಸಿ ಅಂತಾನೂ ಹೇಳಿಲ್ಲ. ಅದಕ್ಕೆ ಸಾಕ್ಷಿಗಳೂ ಇಲ್ಲ. ಅಲ್ಲದೇ ಪೃಥ್ವಿ ಶಾ 15 ಗಂಟೆಗಳ ನಂತರ ಸ್ನೇಹಿತನ ಮೂಲಕ ಪೊಲೀಸರಿಗೆ ದೂರು ಕೊಡಿಸಿದ್ದಾನೆ. ಅದೇ ದಿನ ಏಕೆ ದೂರು ನೀಡಲಿಲ್ಲ ಎಂದು ಪ್ರಶ್ನಿಸಿದರು.

ಸಪ್ನಾ ನ್ಯಾಯಾಲಯದಲ್ಲಿ ಹೇಳಿದ್ದೇನು?
ಶುಕ್ರವಾರ ಅಂಧೇರಿ ನ್ಯಾಯಾಲಯಕ್ಕೆ ಪೊಲೀಸರು ಹಾಜರುಪಡಿಸಿದಾಗ `ಪೃಥ್ವಿ ಶಾ ಯಾರೆಂದು ನನಗೆ ತಿಳಿದಿಲ್ಲ’ ಎಂದು ಆರೋಪಿ ಸಪ್ನಾ ಗಿಲ್ ಹೇಳಿದರು. ಇದನ್ನೂ ಓದಿ: ಕ್ರಿಕೆಟಿಗ ಪೃಥ್ವಿ ಶಾ ಕಾರಿನ ಮೇಲೆ ದಾಳಿ – ಸಿನಿ ತಾರೆ ಸಪ್ನಾ ಗಿಲ್ ಅರೆಸ್ಟ್

Sapna Gill 1

ನನ್ನ ಸ್ನೇಹಿತ ಅವರೊಂದಿಗೆ ಸೆಲ್ಫಿ ಕೇಳಿದ್ದ. ಅವರು ಕ್ರಿಕೆಟಿಗನೆಂದೇ ನನಗೆ ತಿಳಿದಿರಲಿಲ್ಲ. ನಾವು ಇಬ್ಬರೇ ಇದ್ದೆವು. ಆದ್ರೆ ಪೃಥ್ವಿ ಶಾ ತನ್ನ 8 ಜನ ಸ್ನೇಹಿತರ ಜೊತೆಗಿದ್ದರು. ನಾವು ಅಲ್ಲಿ ಕ್ಲಬ್‌ನಲ್ಲಿ ಪಾರ್ಟಿ ಮಾಡುತ್ತಿದ್ದಾಗ ಅವರು ಅಲ್ಲಿಗೆ ಊಟಕ್ಕೆಂದು ಕುಡಿದುಕೊಂಡು ಬಂದಿದ್ದ. ಘಟನೆ ನಂತರ ಅಲ್ಲಿಗೆ ಬಂದ ಪೊಲೀಸರು ಈ ವಿಷಯವನ್ನು ಇಲ್ಲಿಗೇ ಬಿಡುವಂತೆ ಹೇಳಿದ್ದರು.

ಮಾಧ್ಯಮಗಳೊಂದಿಗೆ ಮಾತನಾಡಿದ ಸಪ್ನಾಗಿಲ್ ಪರ ವಕೀಲರು, ಪೃಥ್ವಿ ಶಾ ಅವರ ಆರೋಪಗಳು ಸುಳ್ಳು. ಈ ಬಗ್ಗೆ ನ್ಯಾಯಾಲಯದಲ್ಲಿ ನಮ್ಮ ನಿಲುವು ಮಂಡಿಸಿದ್ದೇವೆ. ಮುಂದಿನ ವಿಚಾರಣಾ ಹಂತದಲ್ಲಿ ಸಪ್ನಾ ಗಿಲ್ ಅವರ ನ್ಯಾಯಾಂಗ ಬಂಧನಕ್ಕೆ ಒತ್ತಾಯಿಸುತ್ತೇವೆ, ನ್ಯಾಯಾಲಯ ಮಂಜೂರು ಮಾಡಿದ ತಕ್ಷಣ ಜಾಮೀನಿಗೆ ಮನವಿ ಮಾಡುತ್ತೇವೆ ಎಂದು ತಿಳಿಸಿದ್ದಾರೆ.

Sapna gill 4

ಏನಿದು ಘಟನೆ?
ಪೃಥ್ವಿ ಶಾ ಮುಂಬೈನ ಸಾಂತ್ರಾಕ್ರೂಜ್‌ನಲ್ಲಿರುವ ಪಂಚತಾರಾ ಹೋಟೆಲ್‌ಗೆ ಊಟಕ್ಕೆ ಹೋಗಿದ್ದರು. ಈ ವೇಳೆ ಸಪ್ನಾ ಗಿಲ್ ಮತ್ತು ಅವರ ತಂಡ ಪೃಥ್ವಿ ಶಾ ಅವರೊಂದಿಗೆ ಸೆಲ್ಫಿಗೆ ಒತ್ತಾಯಿಸಿದ್ದರು. ಈ ವೇಳೆ ಪೃಥ್ವಿ ಶಾ ನಿರಾಕರಿಸಿದ್ದು, ನಾನು ಸ್ನೇಹಿತರೊಂದಿಗೆ ಊಟಕ್ಕೆ ಬಂದಿದ್ದೇನೆ. ಯಾರಿಗೂ ತೊಂದರೆ ಕೊಡಲು ಬಯಸುವುದಿಲ್ಲ ಎಂದು ಹೇಳಿದ್ದರು. ಆದರೂ ಸೆಲ್ಫಿಗೆ ಒತ್ತಾಯಿಸಿದ್ದರಿಂದ ಹೋಟೆಲ್ ವ್ಯವಸ್ಥಾಪಕರಿಗೆ ಪೃಥಿ ಶಾ ತಿಳಿಸಿದ್ದರು.

Sapna gill 2

ಹೋಟೆಲ್‌ನವರು ಆ ಗುಂಪನ್ನು ಹೊರಗೆ ಕಳಿಸಿದ್ದರು. ಇದರಿಂದ ಕೆರಳಿದ ಆ ಗುಂಪು, ಅವರು ಊಟ ಮುಗಿಸಿ ಹೊರಗೆ ಬರುತ್ತಿದ್ದಂತೆ ಬೇಸ್‌ಬಾಲ್ ಬ್ಯಾಟ್‌ಗಳಿಂದ ಬಿಎಂಡಬ್ಲ್ಯೂ ಕಾರಿನ ಮೇಲೆ ಅಟ್ಯಾಕ್ ಮಾಡಿದ್ದರು. ಕಾರಿನ ಹಿಂಭಾಗ, ಮುಂಭಾಗದ ಗಾಜುಗಳನ್ನು ಚಚ್ಚಿ ಪುಡಿಪುಡಿ ಮಾಡಿದ್ದರು. ಅಷ್ಟೇ ಅಲ್ಲ, ಪೃಥ್ವಿ ಸ್ನೇಹಿತನಿಂದ 50 ಸಾವಿರ ರೂಪಾಯಿಗೆ ಬೇಡಿಕೆ ಇಟ್ಟಿದ್ದರು ಎಂದು ಆರೋಪಿಸಿ ದೂರು ನೀಡಿದ್ದರು.

ಘಟನೆಯ ನಂತರ ಓಶಿವಾರಾ ಪೊಲೀಸರು (Oshiwara Police) ಆರೋಪಿಗಳ ವಿರುದ್ಧ ಐಪಿಸಿ ಸೆಕ್ಷನ್ 143, 148, 149, 384, 437, 504, 506 ಅಡಿಯಲ್ಲಿ ಪ್ರಕರಣ ದಾಖಲಿಸಿದ್ದಾರೆ.

LIVE TV
[brid partner=56869869 player=32851 video=960834 autoplay=true]

Join our Whatsapp group by clicking the below link
https://chat.whatsapp.com/E6YVEDajTzH06LOh77r25k

TAGGED:Andheri CourtBMWmumbai policeprithvi shawSapna GillTeam indiaಇನ್‍ಸ್ಟಾಗ್ರಾಮ್ಟೀಂ ಇಂಡಿಯಾಪೃಥ್ವಿ ಶಾಮುಂಬೈ ಪೊಲೀಸ್ಸಪ್ನಾ ಗಿಲ್
Share This Article
Facebook Whatsapp Whatsapp Telegram

Cinema news

Monalisa
ಕುಂಭಮೇಳದ ವೈರಲ್ ಹುಡುಗಿ ಮೊನಾಲಿಸಾ ಈಗ ಗರ್ಭಿಣಿ
Cinema Latest Main Post National
Ranya Rao
ಇಂದಿಗೆ ಕಾಫಿಫೋಸಾ ಅವಧಿ ಅಂತ್ಯ – ಜೈಲಿನಿಂದ ರನ್ಯಾರಾವ್‌ ಬಿಡುಗಡೆ
Cinema Crime Karnataka Latest Main Post
ranya rao 2 1
ಗೋಲ್ಡ್ ಸ್ಮಗ್ಲಿಂಗ್ ಕೇಸ್ – ಇಂದು ರನ್ಯಾ ರಾವ್ ಜೈಲಿನಿಂದ ರಿಲೀಸ್
Bengaluru City Cinema Districts Karnataka Latest Top Stories
Duniya Vijay 1
ಝಾಂಬಿ ಡ್ರಗ್ಸ್ ಕೇಸಲ್ಲಿ ನಟ ದುನಿಯಾ ವಿಜಯ್‌ಗೆ ಸಂಕಷ್ಟ – ಡಿಲೀಟ್ ವಿಡಿಯೋ ರಿಟ್ರೀವ್‌ಗಾಗಿ ಇನ್‌ಸ್ಟಾಗೆ ಪೊಲೀಸರ ಪತ್ರ
Bengaluru City Cinema Districts Karnataka Latest Sandalwood Top Stories

You Might Also Like

daily horoscope dina bhavishya
Astrology

ದಿನ ಭವಿಷ್ಯ: 23-04-2026

Public TV
By Public TV
10 minutes ago
Ravindra Jadeja
Cricket

ಜಡೇಜಾ ಜಾದೂ – ತವರಲ್ಲೇ ಜೈಂಟ್ಸ್‌ ಕೆಡವಿ ಆರ್‌ಸಿಬಿ ಹಿಂದಿಕ್ಕಿದ ರಾಯಲ್ಸ್‌

Public TV
By Public TV
8 hours ago
Shivaraj Tangadagi
Districts

ಕುಡಿವ ನೀರಿಗಾಗಿ ಸಚಿವ ತಂಗಡಗಿ ಕಾರಿಗೆ ಗ್ರಾಮಸ್ಥರ ಮುತ್ತಿಗೆ 

Public TV
By Public TV
8 hours ago
Election vote ink
Latest

ಇಂದು ತಮಿಳುನಾಡು, ಪಶ್ಚಿಮ ಬಂಗಾಳದಲ್ಲಿ ಚುನಾವಣೆ

Public TV
By Public TV
9 hours ago
BYRaghavendra
Districts

ಮೆಗ್ಗಾನ್ ಆಸ್ಪತ್ರೆಯಲ್ಲಿ ಎನ್ಐಸಿಯು ಘಟಕ ಸ್ಥಾಪನೆಗೆ ಕೇಂದ್ರದಿಂದ 5 ಕೋಟಿ ಅನುದಾನ: ಬಿವೈಆರ್

Public TV
By Public TV
9 hours ago
gas tanker overturns near kalghatagi traffic halted on national highway 63
Districts

ಕಲಘಟಗಿ ಬಳಿ ಗ್ಯಾಸ್ ಟ್ಯಾಂಕರ್ ಪಲ್ಟಿ – ರಾಷ್ಟ್ರೀಯ ಹೆದ್ದಾರಿ 63ರಲ್ಲಿ ಸಂಚಾರ ಸ್ಥಗಿತ, ಮಾರ್ಗ ಬದಲಾವಣೆ

Public TV
By Public TV
9 hours ago

Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?