ಚಾಮರಾಜನಗರ: ಕಾಂಗ್ರೆಸ್ (Congress) ಪಕ್ಷದ ಗ್ಯಾರಂಟಿ ಕಾರ್ಡ್‌ಗಳನ್ನ ಹೆಚ್ಚು ವಿತರಣೆ ಮಾಡುವವರಿಗೆ ಟಿವಿ ಗಿಫ್ಟ್ ಕೊಡುತ್ತೇನೆ ಎಂದು ಕೆಪಿಸಿಸಿ (KPCC) ಅಧ್ಯಕ್ಷ ಡಿ.ಕೆ ಶಿವಕುಮಾರ್ (DK Shivakumar) ಘೋಷಣೆ ಮಾಡಿದ್ದಾರೆ.
ಚಾಮರಾಜನಗರ (Chamarajanagar) ಜಿಲ್ಲೆ ಹನೂರು ತಾಲೂಕಿನಲ್ಲಿ ನಡೆದ ಪ್ರಜಾಧ್ವನಿ ಯಾತ್ರೆ ಕಾರ್ಯಕ್ರಮವನ್ನುದ್ದೇಶಿಸಿ ಮಾತನಾಡಿದ ಅವರು, ಕಾಂಗ್ರೆಸ್ ಪಕ್ಷದಿಂದ ಬಿಡುಗಡೆಯಾಗುವ ಗ್ಯಾರಂಟಿ ಕಾರ್ಡ್ ಮನೆ-ಮನೆಗೆ ತಲುಪಿಸಬೇಕು. ಪ್ರತಿ ಕ್ಷೇತ್ರದಲ್ಲಿ ಯಾರು ಹೆಚ್ಚು ಕಾರ್ಡ್ ವಿತರಣೆ ಮಾಡುತ್ತಾರೊ ಅವರಲ್ಲಿ 10 ಮಂದಿಗೆ ಟಿವಿ ಉಡುಗೊರೆಯಾಗಿ ಕೊಡುತ್ತೇನೆ ಎಂದು ಭರವಸೆ ನೀಡಿದರು. ಇದನ್ನೂ ಓದಿ: ಟರ್ಕಿ-ಸಿರಿಯಾದಲ್ಲಿ ಮತ್ತೆ ಭೂಕಂಪ; 8 ಸಾವು, 290ಕ್ಕೂ ಹೆಚ್ಚು ಮಂದಿಗೆ ಗಾಯ
ಇದೇ ವೇಳೆ 40 ಪರ್ಸೆಂಟ್ ಕಮಿಷನ್ ಬಗ್ಗೆ ಮಾತನಾಡಿದ ಡಿಕೆಶಿ, ಕೆ.ಎಸ್ ಈಶ್ವರಪ್ಪ (KS Eshwarappa) ಯಾಕೆ ರಾಜೀನಾಮೆ ಕೊಟ್ಟ? ಅಂತಾ ಏಕವಚನದಲ್ಲೇ ವಾಗ್ದಾಳಿ ನಡೆಸಿದ್ದಾರೆ. ಇದನ್ನೂ ಓದಿ: ಸಿದ್ದರಾಮಯ್ಯ ನಮ್ಮ ನಾಯಕ, ರಾಜ್ಯಕ್ಕೆ ಅನ್ನದಾತ – ಡಿಕೆಶಿ ಗುಣಗಾನ
ಈಶ್ವರಪ್ಪ, ಗುತ್ತಿಗೆದಾರ ಸಂತೋಷ್ ಪಾಟೀಲ್‌ನಿಂದ 40 ಪರ್ಸೆಂಟ್ ಕಮಿಷನ್ ಕೇಳಿದ್ದ. ಆತ ಮುಖ್ಯಮಂತ್ರಿಗೆ, ಪ್ರಧಾನ ಮಂತ್ರಿಗೆ ಪತ್ರ ಬರೆದರೂ ರಕ್ಷಣೆ ಸಿಗಲಿಲ್ಲ. ಆ ದುಡ್ಡನ್ನು ಕೊಡೋದಕ್ಕೆ ಆಗದೇ ಸಂತೋಷ್ ಆತ್ಮಹತ್ಯೆ ಮಾಡಿಕೊಂಡ. ಇವತ್ತಿಗೂ ಯಾವ ಕಚೇರಿಗೆ ಹೋದರೂ ಕಾಸು ಕಾಸು, ಲಂಚ ಲಂಚ ಅಂತಿದ್ದಾರೆ. ಹಾಗಾಗಿ ನಾವು ಬಿಜೆಪಿಯ ಪಾಪ, ಪುರಾಣವನ್ನ ಪತ್ರದ ಮೂಲಕ ಜನರ ಮುಂದೆ ಇಡ್ತಿದ್ದೇವೆ ಎಂದು ಹೇಳಿದ್ದಾರೆ.
LIVE TV
[brid partner=56869869 player=32851 video=960834 autoplay=true]
Join our Whatsapp group by clicking the below link
https://chat.whatsapp.com/E6YVEDajTzH06LOh77r25k