Public TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Font ResizerAa
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
  • National
  • World
  • Cinema
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Bengaluru City

ರೋಹಿಣಿ, ರೂಪಾರನ್ನು ಅಮಾನತು ಮಾಡಿ ತನಿಖೆ ನಡೆಸಿ: ಹೆಚ್.ವಿಶ್ವನಾಥ್ ಆಗ್ರಹ

Public TV
Last updated: February 22, 2023 4:05 pm
Public TV
Share
2 Min Read
H Vishwanath 3
SHARE

ಬೆಂಗಳೂರು: ಐಎಎಸ್ (IAS) ಅಧಿಕಾರಿ ರೋಹಿಣಿ ಸಿಂಧೂರಿ (Rohini Sindhuri) ಮತ್ತು ಐಪಿಎಸ್ (IPS) ಅಧಿಕಾರಿ ಡಿ.ರೂಪಾ (D Roopa) ನಡುವಿನ ಕಿತ್ತಾಟ ಪ್ರಕರಣ ವಿಧಾನ ಪರಿಷತ್‌ನಲ್ಲಿ (Legislative Council) ಸದ್ದು ಮಾಡಿದೆ. ಶೂನ್ಯ ವೇಳೆಯಲ್ಲಿ ಬಿಜೆಪಿ (BJP) ಸದಸ್ಯ ಹೆಚ್ ವಿಶ್ವನಾಥ್ (H Vishwanath) ವಿಷಯ ಪ್ರಸ್ತಾಪ ಮಾಡಿ ಅಧಿಕಾರಿಗಳನ್ನು ಅಮಾನತು ಮಾಡುವಂತೆ ಆಗ್ರಹಿಸಿದರು.

ವಿಧಾನ ಪರಿಷತ್ ಶೂನ್ಯ ವೇಳೆಯಲ್ಲಿ ವಿಷಯ ಪ್ರಸ್ತಾಪಿಸಿದ ಬಿಜೆಪಿ ಸದಸ್ಯ ಹೆಚ್ ವಿಶ್ವನಾಥ್, ರಾಜ್ಯದ ಹಿರಿಯ ಅಧಿಕಾರಿಗಳಾದ ರೂಪಾ ಮೌದ್ಗಿಲ್ ಮತ್ತು ರೋಹಿಣಿ ಸಿಂಧೂರಿ ಬೀದಿ ಜಗಳ ಸಾಮಾಜಿಕ ಜಾಲತಾಣ, ಮಾಧ್ಯಮಗಳಲ್ಲಿ ಧಾರಾವಾಹಿಯಾಗಿ 3 ದಿನಗಳಿಂದ ಪ್ರಾರಂಭವಾಗಿದೆ ಎಂದು ಕುಟುಕಿದರು.

rohini sindhuri roopa

ರೋಹಿಣಿ ಸಿಂಧೂರಿ ಮತ್ತು ಶಾಸಕ ಸಾ.ರಾ ಮಹೇಶ್ ನಡುವಿನ ಆರೋಪಗಳ ಬಗ್ಗೆ ಸಂಧಾನವನ್ನು ಖಾಸಗಿ ಹೋಟೆಲ್ ಒಂದರಲ್ಲಿ ನಡೆಸುತ್ತಿರುವ ಐಎಎಸ್ ಅಧಿಕಾರಿ ಪಿ ಮಣಿವಣ್ಣನ್ ಅವರಿಗೆ ಸರ್ಕಾರ ಅಧಿಕಾರ ಕೊಟ್ಟಿದೆಯಾ? ರೋಹಿಣಿ ಸಿಂಧೂರಿ ವಿರುದ್ಧ ಮಹೇಶ್ ಮಾಡಿರುವ ಆರೋಪಗಳು ಇನ್ನೂ ಮುಕ್ತಾಯವಾಗದೇ ಇರುವ ಸಂದರ್ಭದಲ್ಲಿ ಸಂಧಾನ ನಡೆಸಲು ಪ್ರಯತ್ನಿಸಿದ್ದು ಎಷ್ಟು ಸರಿ ಎಂದು ಪ್ರಶ್ನಿಸಿದರು.

ರೂಪಾ ಮೌದ್ಗಿಲ್ ಮೇಲೂ ಸಹ ಕರಕುಶಲ ನಿಗಮದಲ್ಲಿ ಹಲವಾರು ಆಪಾದನೆಗಳಿದ್ದು, ಇಲಾಖೆಗೆ ಸಂಬಂಧಿಸಿದ ಹಿರಿಯ ಅಧಿಕಾರಿಗಳು ಮತ್ತು ಮುಖ್ಯ ಕಾರ್ಯದರ್ಶಿಯವರು ಮೌನವಾಗಿದ್ದಾರೆ. ಇವೆಲ್ಲವನ್ನೂ ಮಾಧ್ಯಮಗಳ ಮೂಲಕ ನೋಡುತ್ತಿರುವ ನಾಡಿನ ಜನರು ನಮ್ಮ ಆಡಳಿತದ ವ್ಯವಸ್ಥೆಯ ಬಗ್ಗೆ ಕೆಟ್ಟದಾಗಿ ಅರ್ಥೈಸುತ್ತಿದ್ದಾರೆ ಮತ್ತು ಸರ್ಕಾರದ ಕ್ಷಮತೆಯ ಬಗ್ಗೆ ನಂಬಿಕೆ ಕಳೆದುಕೊಳ್ಳುತ್ತಿದ್ದಾರೆ ಎಂದು ತಿಳಿಸಿದರು.

D Roopa Rohini sindhuri

ಸಾಮಾಜಿಕ ಜಾಲತಾಣಕ್ಕೆ ಇವರ ಪರವಾಗಿ ಹಣ ಕಟ್ಟುತ್ತಿರುವವರು ಇವರೇ ಸೃಷ್ಟಿಸಿಕೊಂಡಿರುವ ಇವರ ಅಭಿಮಾನಿಗಳು ಎಂದು ಅವರೇ ಹೇಳಿಕೊಳ್ಳುತ್ತಿದ್ದಾರೆ. ನಾಡಿನ ಆಡಳಿತ ಮತ್ತು ಅಭಿವೃದ್ಧಿಯ ಹಿತಕ್ಕೆ ಮಾರಕವಾಗಿರುವ ಇಬ್ಬರು ಮಹಿಳಾ ಅಧಿಕಾರಿಗಳನ್ನು ಸರ್ಕಾರ ತಕ್ಷಣದಿಂದಲೇ ಜಾರಿಗೆ ಬರುವಂತೆ ಅಮಾನತಿನಲ್ಲಿಟ್ಟು, ವಿಚಾರಣೆ ಪ್ರಾರಂಭಿಸಿ. ಕಾನೂನು ಪ್ರಕಾರ ಕ್ರಮ ತೆಗೆದುಕೊಂಡು ಅಧಿಕಾರಿಗಳ ಇಂತಹ ನಡವಳಿಕೆಗಳನ್ನು ಸರ್ಕಾರ ಸಹಿಸುವುದಿಲ್ಲ ಎಂದು ಜನರಲ್ಲಿ ಭಾವನೆ ಮೂಡಿಸಬೇಕು ಎಂದರು. ಇದನ್ನೂ ಓದಿ: ಬಿಜೆಪಿಯಿಂದ ಪ್ರಣಾಳಿಕೆ ರಚನಾ ಕಾರ್ಯ ಚುರುಕು; ಜನರಿಂದ ಸಲಹೆ ಸಂಗ್ರಹಕ್ಕೆ ಚಾಲನೆ

ನೈತಿಕತೆ ಕಳೆದುಕೊಂಡ ನಡತೆಗೆಟ್ಟ ಇಂತಹ ಅಧಿಕಾರಿಗಳು ನಮ್ಮ ನಾಡಿಗೆ ಬೇಕಾ? ಕೂಡಲೇ ಈ ಅಧಿಕಾರಿಗಳನ್ನು ಅಮಾನತು ಮಾಡಿ ತನಿಖೆ ನಡೆಸಬೇಕು ಎಂದು ವಿಶ್ವನಾಥ್ ರಾಜ್ಯ ಸರ್ಕಾರವನ್ನು ಒತ್ತಾಯಿಸಿದರು. ಇದಕ್ಕೆ ಸರ್ಕಾರದ ಪರವಾಗಿ ಉತ್ತರಿಸಿದ ಉನ್ನತ ಶಿಕ್ಷಣ ಸಚಿವ ಡಾ. ಅಶ್ವಥ್ ನಾರಾಯಣ್, ಸರ್ಕಾರದ ಎಲ್ಲಾ ವಿಚಾರಗಳನ್ನು ಸಾರ್ವಜನಿಕ ವಲಯದಲ್ಲಿ ತಿಳಿಸುವ ಅಧಿಕಾರಿಗಳು ಇವರು. ಈಗಾಗಲೇ ಈ ಚಟುವಟಿಕೆ ಗಮನಿಸಿ ಇಬ್ಬರೂ ಅಧಿಕಾರಿಗಳನ್ನು ವರ್ಗಾವಣೆ ಮಾಡಿದ್ದೇವೆ. ಆದರೆ ಅವರಿಗೆ ಜಾಗ ತೋರಿಸಿಲ್ಲ. ಈ ಪ್ರಕರಣದಲ್ಲಿ ಬಿಗಿಯಾದ ಕ್ರಮ ವಹಿಸುವುದಾಗಿ ಭರವಸೆ ನೀಡಿದರು.

H Vishwanath 1

ಈ ಚರ್ಚೆ ನಡೆಯುವಾಗ ವಿಧಾನ ಪರಿಷತ್ತಿನ ಅಧಿಕಾರಿಗಳ ಗ್ಯಾಲರಿಯಲ್ಲಿ ರೂಪಾ ಮೌದ್ಗಿಲ್ ಪತಿ ಮನೀಷ್ ಮೌದ್ಗಿಲ್ ಕುಳಿತಿದ್ದು ವಿಶೇಷವಾಗಿತ್ತು. ಇದನ್ನೂ ಓದಿ: ರಾಜ್ಯದಲ್ಲಿ ಕೋವಿಡ್‌ನಿಂದ ಮೃತರಾದ ಕುಟುಂಬಕ್ಕೆ 446 ಕೋಟಿ ಪರಿಹಾರ ನೀಡಲಾಗಿದೆ: ಆರ್ ಅಶೋಕ್

LIVE TV
[brid partner=56869869 player=32851 video=960834 autoplay=true]

Join our Whatsapp group by clicking the below link
https://chat.whatsapp.com/E6YVEDajTzH06LOh77r25k

TAGGED:D roopah vishwanathIASipsLegislative CouncilRohini Sindhuriಐಎಎಸ್ಐಪಿಎಸ್ಡಿ ರೂಪಾರೋಹಿಣಿ ಸಿಂಧೂರಿವಿಧಾನ ಪರಿಷತ್ಹೆಚ್.ವಿಶ್ವನಾಥ್
Share This Article
Facebook Whatsapp Whatsapp Telegram
2 Comments

Leave a Reply

Your email address will not be published. Required fields are marked *

Cinema News

Dhanush
ಧನುಷ್ ನನ್ನ ಗೆಳೆಯ – ಡೇಟಿಂಗ್ ವದಂತಿಗೆ ತೆರೆ ಎಳೆದ ಮೃಣಾಲ್ ಠಾಕೂರ್
Cinema Latest South cinema Top Stories
Love me like you do forever to go Yash Radhika Pandit Engagement 9th anniversary
ಉಂಗುರಕ್ಕೆ 9ನೇ ವರ್ಷದ ಸಂಭ್ರಮ – ವಿಶೇಷ ನೆನಪು ಹಂಚಿಕೊಂಡ ರಾಧಿಕಾ
Cinema Latest Sandalwood Top Stories
rajinikanth upendra
`ಭಾಷಾ’ಗಿಂತ `ಓಂ’ ಸಿನಿಮಾ ಹತ್ತು ಪಟ್ಟು ಬೆಟರ್- ಉಪ್ಪಿ ಹೊಗಳಿದ ರಜನಿಕಾಂತ್
Cinema Latest Main Post South cinema
darshan pavithra gowda
ರೇಣುಕಾಸ್ವಾಮಿ ಕೊಲೆ ಕೇಸ್; ದರ್ಶನ್, ಪವಿತ್ರಾ ಗೌಡ ಸೇರಿ ಆರೋಪಿಗಳು ನ್ಯಾಯಾಲಯಕ್ಕೆ ಹಾಜರು
Bengaluru City Cinema Court Latest Main Post Sandalwood
Darshan 11
ರೇಣುಕಾಸ್ವಾಮಿ ಕೊಲೆ ಕೇಸ್ – ಇಂದು ಕೋರ್ಟ್‌ಗೆ ಹಾಜರಾಗಲಿರುವ ‘ಡಿ’ ಗ್ಯಾಂಗ್
Bengaluru City Cinema Court Latest Sandalwood Top Stories

You Might Also Like

yellow line metro 1
Bengaluru City

ಈಚೆಗಷ್ಟೇ ಆರಂಭವಾದ ಯೆಲ್ಲೋ ಲೈನ್‌ ಮೆಟ್ರೋ – ರೈಲು ಮಿಸ್‌ ಮಾಡಿಕೊಂಡ ಪ್ರಯಾಣಿಕನಿಗೆ ಬಿತ್ತು ದಂಡ!

Public TV
By Public TV
26 minutes ago
Chitradurga Auto Driver Murder Arrest
Crime

ಆಟೋ ಚಾಲಕನ ಕೊಲೆಗೈದು ಮೂಟೆ ಕಟ್ಟಿ ಎಸೆದ ಪ್ರಕರಣ – ಆರೋಪಿ ಪತ್ನಿ, ಪುತ್ರ, ಪ್ರಿಯಕರ ಅರೆಸ್ಟ್

Public TV
By Public TV
35 minutes ago
Byrati Basavaraj 1
Bengaluru City

ಬಿಕ್ಲು ಶಿವ ಕೊಲೆ ಕೇಸ್‌ – ಶಾಸಕ ಬೈರತಿ ಬಸವರಾಜ್‌ಗೆ ಬಿಗ್‌ ರಿಲೀಫ್‌

Public TV
By Public TV
45 minutes ago
Dharwad Suspend
Dharwad

ಕರ್ತವ್ಯ ಲೋಪ; ಧಾರವಾಡ ಜಿಲ್ಲಾ ಪಂಚಾಯಿತಿ ಯೋಜನಾಧಿಕಾರಿ ಅಮಾನತು

Public TV
By Public TV
1 hour ago
ramalinga reddy
Bengaluru City

ಮುಜರಾಯಿ ದೇವಾಲಯಗಳಲ್ಲಿ ಕನ್ನಡ ಶ್ಲೋಕ ಹೇಳಲು ಕಲಿಕೆಗೆ ಸೂಚನೆ: ರಾಮಲಿಂಗಾರೆಡ್ಡಿ

Public TV
By Public TV
1 hour ago
ramalingareddy
Bengaluru City

ಹೈಕೋರ್ಟ್ ಆದೇಶದಂತೆ ಬೈಕ್ ಟ್ಯಾಕ್ಸಿ ಸೇವೆ ಬಗ್ಗೆ ತೀರ್ಮಾನ – ರಾಮಲಿಂಗಾ ರೆಡ್ಡಿ

Public TV
By Public TV
1 hour ago
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?