ಬೆಂಗಳೂರು: ದುಷ್ಕರ್ಮಿಗಳು ವಂದೇ ಭಾರತ್ (Vande Bharat Express) ರೈಲಿಗೆ ಕಲ್ಲು ಹೊಡೆದ ಘಟನೆ ಬೆಂಗಳೂರಿನ ಕೆಆರ್ ಪುರ- ಕಂಟೋನ್ಮೆಂಟ್ ನಡುವೆ ನಡೆದಿದೆ.
ಶನಿವಾರ ಬೆಳಗ್ಗೆ 10 ಗಂಟೆ ಸುಮಾರಿಗೆ ಚೆನೈ- ಬೆಂಗಳೂರು- ಮೈಸೂರು ಮಾರ್ಗದಲ್ಲಿ ಚಲಿಸುತ್ತಿದ್ದ ರೈಲಿಗೆ ಕಿಡಿಗೇಡಿಗಳು ಕಲ್ಲು ತೂರಿದ್ದಾರೆ. ಕಲ್ಲು ಎಸೆದ ರಭಸಕ್ಕೆ ರೈಲಿನ ಗಾಜುಗಳಿಗೆ ಹಾನಿಯಾಗಿದೆ. ಆದರೆ ಅದೃಷ್ಟವಶಾತ್ ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ. ಘಟನೆ ಬಳಿಕ ಕಂಟ್ರೋಲ್ ಗೆ ಮಾಹಿತಿ ರವಾನೆ ಮಾಡಲಾಗಿದ್ದು, ರೈಲ್ವೆ ಪೊಲೀಸರು ಪರಿಶೀಲನೆ ನಡೆಸಿದ್ದಾರೆ.
ವಂದೇ ಭಾರತ್ ಎಕ್ಸ್ ಪ್ರೆಸ್ ಮೇಲೆ ಕಲ್ಲು ತೂರಾಟ (Stone Pelting) ನಡೆಯುತ್ತಿರುವ ಪ್ರಕರಣಗಳು ಆಗಾಗ ಕೇಳಿಬರುತ್ತಿವೆ. ರೈಲ್ವೇ ಸಂರಕ್ಷಣಾ ಪಡೆ ಜನವರಿಯಲ್ಲಿ ರೈಲುಗಳ ಮೇಲೆ ಕಲ್ಲು ತೂರಾಟದ 21 ಪ್ರಕರಣಗಳನ್ನು ಮತ್ತು ಫೆಬ್ರವರಿಯಲ್ಲಿ 13 ಪ್ರಕರಣಗಳನ್ನು ನೈಋತ್ಯ ರೈಲ್ವೆಯ ಬೆಂಗಳೂರು ವಿಭಾಗದಲ್ಲಿ ದಾಖಲಿಸಿದೆ. ಇದನ್ನೂ ಓದಿ: ಸಫಾರಿ ತೆರಳುತ್ತಿದ್ದ ವೇಳೆ ಘೇಂಡಾಮೃಗಗಳ ದಾಳಿ – 7 ಮಂದಿ ಪ್ರವಾಸಿಗರಿಗೆ ಗಾಯ
Thank you for your sharing. I am worried that I lack creative ideas. It is your article that makes me full of hope. Thank you. But, I have a question, can you help me?