ಯಾದಗಿರಿ: ವಿಧಾನಪರಿಷತ್ ಸದಸ್ಯ ಬಾಬುರಾವ್ ಚಿಂಚನಸೂರ್ ಕಾರ್ಯಕರ್ತರ ಆಕ್ರೋಶವನ್ನು ಎದುರಿಸಿದ ಘಟನೆ ಗುರುಮಠಕಲ್ ತಾಲೂಕಿನ ಗಾಜರಕೋಟ್ ಗ್ರಾಮದಲ್ಲಿ ನಡೆದಿದೆ.
ಗ್ರಾಮದ ಕುಡಿಯುವ ನೀರಿನ ಸಮಸ್ಯೆ ಅರಿಯಲು ಬಂದಿದ್ದ ಚಿಂಚನಸೂರ್, ನಾನು ಗೆದ್ದರೆ ನೀರಿನ ಸಮಸ್ಯೆ ಬಗೆಹರಿಸುತ್ತೇನೆ. ಗ್ರಾಮದ ಅಭಿವೃದ್ಧಿ ಮಾಡುತ್ತೇನೆ ಎಂದು ಹೇಳಿದ್ದಾರೆ. ಇದಕ್ಕೆ ಪ್ರತಿಯಾಗಿ ಆಕ್ರೋಶ ವ್ಯಕ್ತಪಡಿಸಿದ ಗ್ರಾಮಸ್ಥರು ಅಧಿಕಾರದಲಿದ್ದಾಗ ಏನು ಮಾಡಿದ್ದೀರಿ? ಎಂದು ತರಾಟೆಗೆ ತೆಗೆದುಕೊಂಡಿದ್ದಾರೆ. ಇದನ್ನೂ ಓದಿ: ಕರಗುತ್ತಿವೆ ಹಿಮಸರೋವರಗಳು – ಭಾರತ, ಪಾಕಿಸ್ತಾನದ ಜನರಿಗೆ ಕಾದಿದೆ ಪ್ರವಾಹದ ಅಪಾಯ!
ಗ್ರಾಮಸ್ಥನೊಬ್ಬ ಚಿಂಚನಸೂರ್ ಉತ್ತರಕ್ಕೆ ಪಟ್ಟು ಹಿಡಿದು, ಈ ಬಾರಿ ಚುನಾವಣೆಯಲ್ಲಿ ನನ್ನ ತಾಕತ್ತು ತೋರಿಸುತ್ತೇನೆ ಎಂದು ಆಕ್ರೋಶ ಹೊರಹಾಕಿದ್ದಾನೆ. ಇದರಿಂದ ವಿಚಲಿತರಾದ ಸಂಸದ ನಿನ್ನ ವೋಟು ಯಾರಿಗಾದರೂ ಹಾಕು, ನನಗೆ ನಿನ್ನ ಮತ ಬೇಡ ಎಂದು ಗದರಿದ್ದಾರೆ.
ಸಂಸದರ ಆವಾಜ್‍ಗೆ ಗಾಜರಕೋಟ್ ಗ್ರಾಮದ ಬಿಜೆಪಿ ಕಾರ್ಯಕರ್ತರು ಹಾಗೂ ಗ್ರಾಮಸ್ಥರಿಂದ ಆಕ್ರೋಶ ವ್ಯಕ್ತವಾಗಿದೆ. ಇದನ್ನೂ ಓದಿ: ಫೆ.28ಕ್ಕೆ ಬೆಳಗಾವಿಗೆ ಮೋದಿ- ಫಸ್ಟ್ ಪಿಯುಸಿ ವಾರ್ಷಿಕ ಪರೀಕ್ಷೆ ಮುಂದೂಡಿಕೆ